ಕುರುಬ ಸಮುದಾಯ ಎಸ್ಟಿ ಪಟ್ಟಿಗೆ: ನಾಳೆ ಮೀಟಿಂಗ್
ಕುರುಬ ಸಮುದಾಯ ಎಸ್ಟಿ ಪಟ್ಟಿಗೆ: ರಾಜ್ಯದಲ್ಲಿರುವ ಕುರುಬ ಸಮುದಾಯದವರನ್ನು
ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರಿಸುವ ಸಂಬಂಧ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆಯ ಕಾರ್ಯದರ್ಶಿಗಳ ಅಧ್ಯಕ್ಷತೆಯನ್ನು ಸೆ.16ರಂದು ಮಧ್ಯಾಹ್ನ 3 ಗಂಟೆಗೆ ಬಹುಮಹಡಿ ಕಟ್ಟಡದ ಕೊಠಡಿ ಸಂಖ್ಯೆ 331ರಲ್ಲಿ ಸಭೆ ಕರೆಯಲಾಗಿದೆ.
ಈ ಸಭೆಯಲ್ಲಿ ರಾಜ್ಯದ ಕುರುಬ ಸಮುದಾಯವನ್ನು ಪರಿಶಿಷ್ಟ ಪಂಗಡಗಳ ಪಟ್ಟಿಗೆ ಸೇರ್ಪಡೆ ಮಾಡುವುದು ಹಾಗೂ ಬೀದರ್, ಕಲಬುರಗಿ ಹಾಗೂ ಯಾದಗಿರಿ ಜಿಲ್ಲೆಗಳ ಕುರುಬ ಸಮುದಾಯವನ್ನು ಕರ್ನಾಟಕದ ಗೊಂಡ ಸಮುದಾಯಕ್ಕೆ ಸೇರ್ಪಡೆ ಸಂಬಂಧ ಚರ್ಚಿಸಲಾಗುವುದು.
ಸಭೆಯಲ್ಲಿ ಪರಿಶಿಷ್ಟ ಪಂಗಡಗಳ ಕಲ್ಯಾಣ ಇಲಾಖೆ ನಿರ್ದೇಶಕರು, ಮೈಸೂರಿನ ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆಯ ನಿರ್ದೇಶಕರು, ಸಮಾಜ ಕಲ್ಯಾಣ ಇಲಾಖೆಯ ಎಸ್ಸಿಎಸ್ಪಿ-ಟಿಎಸ್ಪಿ ನೋಡಲ್ ಏಜನ್ಸಿ ಸಲಹೆಗಾರರು ಸಭೆಯಲ್ಲಿ ಭಾಗವಹಿಸುವರು.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್ಗೆ ಸೇರಿ.