ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ- ಏಕ ಸದಸ್ಯ ಆಯೋಗವನ್ನು ರಚನೆ ಮಾಡಿ ಆದೇಶ.

ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ ಕಲ್ಪಿಸಲು Commission of Inquiry Act 1952 ರಡಿ ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸುವ ಕುರಿತು.

 

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ: ಮಾನ್ಯ ಭಾರತ ಸರ್ವೋಚ್ಚ ನ್ಯಾಯಾಲಯವು ಭಾರತದ ಸಂವಿಧಾನದ ಅನುಚ್ಛೇದ 15(4) ಮತ್ತು 16(4) ರ ಅಡಿಯಲ್ಲಿ ಶಿಕ್ಷಣ ಮತ್ತು ರಾಜ್ಯ ಸರ್ಕಾರದ ಅಧೀನದ ಸೇವೆಗಳಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸುವ ಬಗ್ಗೆ State of Punjab & others Vs. Davinder singh & others in Civil Appeal No: 2317/2011 ರ ಪ್ರಕರಣದಲ್ಲಿ ದಿ: 01-08-2024 ರಂದು 6:1 ಅನುಪಾತದಲ್ಲಿ ಬಹುಮತದ ನಿರ್ಧಾರದೊಂದಿಗೆ ಈ ಕೆಳಗಿನಂತೆ ತೀರ್ಪು ನೀಡಿರುತ್ತದೆ.

i. The State Government can sub classify the Scheduled Castes.

ii. The State must collect the data on the inadequacy of representation in the services of the state because it is used as an indicator of backwardness

ಮೇಲ್ಕಂಡ ತೀರ್ಪಿನಂತೆ ಕರ್ನಾಟಕ ರಾಜ್ಯದ ಪರಿಶಿಷ್ಟ ಜಾತಿಗಳಲ್ಲಿ ಒಳ ಮೀಸಲಾತಿ ಕಲ್ಪಿಸುವ ಕುರಿತು ಪ್ರಸ್ತಾವನೆಯನ್ನು ಸಚಿವ ಸಂಪುಟಕ್ಕೆ ಮಂಡಿಸಲಾಗಿದ್ದು ಸಚಿವ ಸಂಪುಟವು ದಿನಾಂಕ: 28-10-2024 ರಲ್ಲಿ ಮಾನ್ಯ ಸರ್ವೋಚ್ಚ ನ್ಯಾಯಾಲಯದ ದಿನಾಂಕ: 01.08.2024 ರಂತೆ ಕರ್ನಾಟಕ ರಾಜ್ಯದಲ್ಲಿ ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿಯನ್ನು ಕಲ್ಪಿಸಲು ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿನೊಂದಿಗೆ ವರದಿ ಸಲ್ಲಿಸಲು ಆಯೋಗ ವಿಚಾರಣೆ ಕಾಯ್ದೆ 1952 ರಡಿ (Commission of inquiry Act 1952) ಮಾನ್ಯ ಉಚ್ಚನ್ಯಾಯಾಲಯದ ನಿವೃತ್ತ ನ್ಯಾಯಾದೀಶರ ಅಧ್ಯಕ್ಷತೆಯಲ್ಲಿ ಆಯೋಗವನ್ನು ರಚಿಸಲು ಅನುಮೋದಿಸಿರುತ್ತದೆ.

ಮುಂದುವರೆದು, ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದಗಳಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಯಾವುದೇ ಅಧಿಸೂಚನೆಯನ್ನು ಮುಂದಿನ ತೀರ್ಮಾನದವರೆಗೂ ಹೊರಡಿಸಬಾರದೆಂದು ಸಚಿವ ಸಂಪುಟವು ನಿರ್ಧರಿಸಿರುತ್ತದೆ.

ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸಚಿವ ಸಂಪುಟದ ನಿರ್ಣಯದ ಅನ್ವಯ ಈ ಕೆಳಕಂಡಂತೆ ಸರ್ಕಾರ ಆದೇಶ ಹೊರಡಿಸಲಾಗಿದೆ.

ಆದೇಶ: ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ, ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ ವಿವಿಧ ಉಪಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ ಬಗ್ಗೆ ಸೂಕ್ತ ಶಿಫಾರಸ್ಸಿಗಳೊಂದಿಗೆ ಎರಡು ತಿಂಗಳ ಅವಧಿಯೊಳಗಾಗಿ ವರದಿ ಸಲ್ಲಿಸಲು ಆಯೋಗ ವಿಚಾರಣಾ ಕಾಯ್ದೆ 1952ರ (Commission of Inquiry Act 1952) (ಕೇಂದ್ರ ಕಾಯ್ದೆ ಸಂ.60) ಸೆಕ್ಷನ್ (3)ರಲ್ಲಿ ನೀಡಲಾದ ಅಧಿಕಾರಗಳನ್ನು ಚಲಾಯಿಸಿ, ಕರ್ನಾಟಕ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಾಧೀಶರಾದ ಶ್ರೀ ಹೆಚ್.ಎನ್.ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿದೆ.

ಸದರಿ ವಿಚಾರಣಾ ಆಯೋಗದ The terms of references, ಕಛೇರಿ, ವಾಹನ ವ್ಯವಸ್ಥೆ ಅಗತ್ಯ ಸಿಬ್ಬಂದಿ, ಗೌರವಧನ ಮತ್ತು ಇತರ ಸವಲತ್ತುಗಳನ್ನು ಕಲ್ಪಿಸುವ ಸಂಬಂಧ ಪ್ರತ್ಯೇಕವಾಗಿ ಆದೇಶ ಹೊರಡಿಸಲಾಗುವುದು.

ಪರಿಶಿಷ್ಟ ಜಾತಿಗಳಲ್ಲಿ ಒಳಮೀಸಲಾತಿ: ಈ ಆದೇಶವನ್ನು ಸಚಿವ ಸಂಪುಟ ಟಿಪ್ಪಣಿ ಸಂಖ್ಯೆ:ಸಿ.616/2024, ದಿನಾಂಕ:28-10-2024ರ ನಿರ್ಣಯದನ್ವಯ ಈ ಆದೇಶ ಹೊರಡಿಸಲಾಗಿದೆ.

 

ಹೆಚ್ಚಿನ ಮಾಹಿತಿಗಾಗಿ- CLICK HERE

Leave a Comment