ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳು.
ಇಂದು ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ವಿವಿಧ ಇಲಾಖೆಗಳ ಪ್ರಗತಿ ಪರಿಶೀಲನೆ ಸಭೆಯ ಮುಖ್ಯಾಂಶಗಳನ್ನು ಈ ಕೆಳಗೆ ನೀಡಲಾಗಿದೆ.
ಗಣಿ ಮತ್ತು ಭೂವಿಜ್ಞಾನ ಇಲಾಖೆ:
ಕಳೆದ ವರ್ಷಕ್ಕಿಂತ ಶೇ.10ರಷ್ಟು ಹೆಚ್ಚಿನ ಬೆಳವಣಿಗೆ ದರ ಸಾಧಿಸಲಾಗಿದೆ.
ಈ ವರ್ಷದ ಒಟ್ಟು ರಾಜಸ್ವ ಗುರಿ ₹9 ಸಾವಿರ ಕೋಟಿ ಇದ್ದು, ನವೆಂಬರ್ ಅಂತ್ಯದವರೆಗೆ ₹4,862 ಕೋಟಿ ರಾಜಸ್ವ ಸಂಗ್ರಹಿಸಲಾಗಿದೆ.
ಖನಿಜ ಹಕ್ಕು ತೆರಿಗೆ ಅಧಿನಿಯಮ ಜಾರಿಗೆ ಕ್ರಮ ವಹಿಸಬೇಕು.
2025-26 ನೇ ಸಾಲಿನಲ್ಲಿ ಉಪ ಖನಿಜದಿಂದ ಹೆಚ್ಚುವರಿಯಾಗಿ ರಾಜಸ್ವ ಸಂಗ್ರಹಿಸಲು ಕ್ರಮ ವಹಿಸುವಂತೆ ಸೂಚಿಸಲಾಯಿತು.
ಅರಣ್ಯ ಮತ್ತು ಗಣಿ ಮತ್ತು ಭೂವಿಜ್ಞಾನ ಇಲಾಖೆ ಸಮನ್ವಯದಿ೦ದ ಕಾರ್ಯ ನಿರ್ವಹಿಸಬೇಕು.
ಅಬಕಾರಿ ಇಲಾಖೆ:
ರಾಜಸ್ವ ಸಂಗ್ರಹ ಹೆಚ್ಚಿಸಲು ಜಾಗೃತ ದಳ ಇನ್ನಷ್ಟು ಚುರುಕಾಗಿ ಕಾರ್ಯನಿರ್ವಹಿಸಲು ಸೂಚಿಸಲಾಯಿತು.
ಅಬಕಾರಿ ಇಲಾಖೆಯಲ್ಲಿ ಖಾಲಿಯಿರುವ ಗ್ರೂಪ್ ಸಿ ಹುದ್ದೆಗಳನ್ನು ತುಂಬಲು ಕ್ರಮ ಕೈಗೊಳ್ಳುವಂತೆ ನಿರ್ದೇಶಿಸಲಾಯಿತು.
ನೋಂದಣಿ ಮತ್ತು ಮುದ್ರಾಂಕ ಇಲಾಖೆ:
ರಾಜಸ್ವ ಸೋರಿಕೆಯನ್ನು ತಡೆಗಟ್ಟಿ, ರಾಜಸ್ವ ಸಂಗ್ರಹವನ್ನು ಹೆಚ್ಚಿಸಲು ಸೂಚಿಸಲಾಯಿತು.
ಕಾನೂನು ಬಾಹಿರ ನೋಂದಣಿಗಳಿಗೆ ಕಡಿವಾಣ ಹಾಕಿ, ರಾಜಸ್ವ ಸಂಗ್ರಹವನ್ನು ವ್ಯವಸ್ಥಿತಗೊಳಿಸಬೇಕು.
ತೆರಿಗೆ ವ್ಯಾಪ್ತಿಯಿಂದ ಹೊರಗಿರುವ ಎಲ್ಲಾ ಆಸ್ತಿಗಳನ್ನು ಗುರುತಿಸಿ ತೆರಿಗೆ ವ್ಯಾಪ್ತಿಗೆ ತರಲು ಕ್ರಮ ಕೈಗೊಳ್ಳಬೇಕು.
ಇ-ಖಾತಾ ನೀಡುವ ಪ್ರಕ್ರಿಯೆಯಲ್ಲಿನ ತೊಡಕುಗಳನ್ನು ನಿವಾರಿಸಲು ಕ್ರಮ ಕೈಗೊಳ್ಳುವಂತೆ ಸೂಚಿಸಲಾಯಿತು.
ವಾಣಿಜ್ಯ ತೆರಿಗೆ ಇಲಾಖೆ:
ಮಲೆನಾಡು ಮತ್ತು ಮೈಸೂರು ವಿಭಾಗದಲ್ಲಿ ತೆರಿಗೆ ಸಂಗ್ರಹ ನಿಗದಿತ ಗುರಿಗಿಂತ ಕಡಿಮೆಯಿದೆ. ಎಲ್ಲಾ ವಿಭಾಗಗಳು ಮುಂದಿನ ನಾಲ್ಕು ತಿಂಗಳಲ್ಲಿ ಗುರಿಯನ್ನು ಕಡ್ಡಾಯವಾಗಿ ಸಾಧಿಸಲು ಸೂಚಿಸಲಾಯಿತು.
ವಿಜಿಲೆನ್ಸ್ ಹೆಚ್ಚಿಸಿ, ತೆರಿಗೆ ಸೋರಿಕೆಯನ್ನು ಪತ್ತೆ ಹಚ್ಚಿ ತೆರಿಗೆ ಸಂಗ್ರಹವನ್ನು ಹೆಚ್ಚಿಸಬೇಕು. ಅಧಿಕಾರಿಗಳು ಬೆಂಗಳೂರು ವಿಭಾಗದಲ್ಲಿ ಹೆಚ್ಚಿನ ನಿಗಾ ವಹಿಸಬೇಕು.
ವಿಶೇಷ ಅಭಿಯಾನ ಕೈಗೊಂಡು ಮುಂದಿನ ನಾಲ್ಕು ತಿಂಗಳ ಅವಧಿಯಲ್ಲಿ ತೆರಿಗೆ ಸ೦ಗ್ರಹವನ್ನು ಹೆಚ್ಚಿಸಿ ಶೇ.100ರಷ್ಟು ಬಜೆಟ್ ಗುರಿಯನ್ನು ಸಾಧಿಸಬೇಕು.
ಸರಕು ಮತ್ತು ಸೇವಾ ತೆರಿಗೆ ಕಾಯ್ದೆಯಡಿಯಲ್ಲಿ ಸ್ವೀಕರಿಸಿದ ಮನವಿಗಳನ್ನು ವಿಲೇವಾರಿ ಮಾಡಿ ತೆರಿಗೆ ಸಂಗ್ರಹ ಕೈಗೊಳ್ಳಬೇಕು.
ರಾಜ್ಯ ಜಿಎಸ್‌ಟಿ ಸಂಗ್ರಹದಲ್ಲಿ ಶೇ.15ರ ಬೆಳವಣಿಗೆ ದರ ಸಾಧಿಸಿದೆ. ರಾಜ್ಯದಲ್ಲಿ ನವೆಂಬರ್ ತಿಂಗಳಲ್ಲಿ ₹13,722 ಕೋಟಿ ಜಿಎಸ್‌ಟಿ ಸಂಗ್ರಹಿಸಲಾಗಿದ್ದು, ದೇಶದಲ್ಲೇ ಎರಡನೇ ಸ್ಥಾನದಲ್ಲಿದೆ.