ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆ ಫಲಿತಾಂಶ ಪ್ರಕಟಿಸದಂತೆ ಸುಪ್ರೀಂ ತಡೆ- 2024

ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ.

 

ಮುಂದಿನ ಆದೇಶದವರೆಗೆ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 8, 9 ಮತ್ತು 10ನೇ ತರಗತಿಗಳ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ಫಲಿತಾಂಶವನ್ನು ಪ್ರಕಟಿಸದಂತೆ ಕರ್ನಾಟಕ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ಆದೇಶಿಸಿದೆ. ನ್ಯಾಯಮೂರ್ತಿ ಬೇಲಾ ಎಂ.ತ್ರಿವೇದಿ ಅವರು, ‘ಕರ್ನಾಟಕದ ವಿವಿಧ ಜಿಲ್ಲೆಗಳಲ್ಲಿ ನಡೆಸಲಾಗಿದ್ದ ಅರ್ಧವಾರ್ಷಿಕ ಬೋರ್ಡ್ ಪರೀಕ್ಷೆಗಳ ವಿರುದ್ಧ ಸಲ್ಲಿಸಿದ್ದ ಅರ್ಜಿಗಳ ವಿಚಾರಣೆ ನಡೆಸಿದ್ದು, ಬೋರ್ಡ್ ಅರ್ಧವಾರ್ಷಿಕ ಪರೀಕ್ಷೆ ನಡೆಸಿದ ರಾಜ್ಯ ಸರ್ಕಾರಕ್ಕೆ ತರಾಟೆ ತೆಗೆದುಕೊಂಡರು. ಜತೆಗೆ ಫಲಿತಾಂಶ ಪ್ರಕಟಿಸದಂತೆ’ ಆದೇಶಿಸಿದ್ದಾರೆ.

  • ದಿನಾಂಕ:04-11-2024 ರಿಂದ 11-02-2025 ರವರೆಗೆ ರಾಜ್ಯದ ಎಲ್ಲಾ ಪೂರ್ವ ಪ್ರಾಥಮಿಕ ಹಾಗೂ ಪ್ರಾಥಮಿಕ ಶಾಲೆಗಳಲ್ಲಿ “100 ದಿನಗಳ ಓದುವ ಆಂದೋಲನ” ಕಾರ್ಯಕ್ರಮವನ್ನು ಅನುಷ್ಠಾನಗೊಳಿಸುವ ಕುರಿತು.

ಈ ರೀತಿಯ ವಿಧಾನವನ್ನು ಎಲ್ಲಿಯೂ ಅಳವಡಿಸಿಕೊಂಡಿಲ್ಲ. ಸರ್ಕಾರಕ್ಕೆ ವಿದ್ಯಾರ್ಥಿಗಳ ಕಲ್ಯಾಣದ ಬಗ್ಗೆ ಅಷ್ಟೊಂದು ಕಾಳಜಿ ಇದ್ದರೆ ಉತ್ತಮ ಶಾಲೆಗಳನ್ನು ತೆರೆಯಿರಿ. 8, 9 ಮತ್ತು 10ನೇ ತರಗತಿಗಳಿಗೆ ಅರ್ಧವಾರ್ಷಿಕ ಪರೀಕ್ಷೆಯನ್ನು ಯಾವುದೇ ಜಿಲ್ಲೆಯಲ್ಲಿ ನಡೆಸದಿದ್ದರೆ, ಆ ಜಿಲ್ಲೆಗಳಲ್ಲಿ ನಡೆಸಲು ಅನುಮತಿ ನೀಡುವುದಿಲ್ಲ ಎಂದು ನ್ಯಾಯಾಧೀಶರು ತಾಕೀತು ಮಾಡಿದ್ದಾರೆ.

ಉತ್ತರ ಕರ್ನಾಟಕದ ಏಳು ಜಿಲ್ಲೆಗಳಲ್ಲಿ ಬೋರ್ಡ್ ಪರೀಕ್ಷೆ ನಡೆಸಲಾಗಿತ್ತು. ಬಾಕಿ ಜಿಲ್ಲೆಗಳಲ್ಲಿ ಸಾರ್ವಜನಿಕರ ಗಮನಕ್ಕೆ ತಾರದೇ ಪರೀಕ್ಷೆ ನಡೆಸಲಾಗಿತ್ತು. ಒಟ್ಟು ಎಂಟು ಲಕ್ಷ ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದರು.

ಬೋರ್ಡ್ ಪರೀಕ್ಷೆ ವಿವಾದವಾಗುತ್ತಿದ್ದಂತೆ ಉತ್ತರ ಕರ್ನಾಟಕದ ಏಳು ಜಿಲ್ಲೆಗಳ ಫಲಿತಾಂಶಕ್ಕೆ ಸರ್ಕಾರ ತಡೆ ನೀಡಿತ್ತು. ಸರ್ಕಾರದ ನಿಲುವು ಪ್ರಶ್ನಿಸಿ ಖಾಸಗಿ ಶಾಲೆಗಳ ಪರ ವಕೀಲ ಕೆ.ವಿ.ಧನಂಜಯ ಅವರು ಸುಪ್ರೀಂ ಕೋರ್ಟ್‌ಗೆ ಅರ್ಜಿ ಸಲ್ಲಿಸಿದ್ದರು. ವಿಚಾರಣೆ ವೇಳೆ ಕಳೆದ ವರ್ಷದ ಆದೇಶ ಉಲ್ಲೇಖಿಸಿ ಸರ್ಕಾರವನ್ನು ಸುಪ್ರೀಂ ಕೋರ್ಟ್ ತರಾಟೆಗೆ ತೆಗೆದುಕೊಂಡಿತು.

CLICK HERE MORE INFORMATION

Leave a Comment