ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧದ ಅನಾಮಧೇಯ (anonymous) ದೂರುಗಳ ಬಗ್ಗೆ ಯಾವ ಕ್ರಮ ಅನುಸರಿಸಬೇಕು.?

ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧದ ಅನಾಮಧೇಯ (anonymous) ದೂರುಗಳ ಬಗ್ಗೆ ಯಾವ ಕ್ರಮ ಅನುಸರಿಸಬೇಕು.

ನೌಕರನ ಮೇಲಿನ ವೈಯಕ್ತಿಕ ದ್ವೇಷ, ಅಸೂಯೆ ಅಥವಾ ಪೂರ್ವಗ್ರಹ ಪೀಡಿತರಾಗಿ, ಅಧಿಕಾರಿ/ನೌಕರರ ತಾನು ಕರ್ತವ್ಯ ನಿವಹಿಸುತ್ತಿರುವ ಸ್ಥಳದಲ್ಲಿ ದಕ್ಷ ಹಾಗೂ ಪ್ರಮಾಣಿಕ, ವಿಶ್ವಾಸರ್ಹತೆಗೆ, ಧಕ್ಕೆ ಉಂಟು ಮಾವಡುವ ಹಾಗೂ ಅವರು ಮುಕ್ತ ಮತ್ತು ನಿರ್ಭೀತರಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವದಂತೆ ಮಾಡುವ ಉದ್ದೇಶದಿಂದ ಮೂಗರ್ಜಿ(ಅನಮಾಧೇಯ ) ದೂರುಗಳನ್ನು ಬರೆಯುತ್ತಾರೆ. ಇಂತಹ ದೂರುಗಳಲ್ಲಿ ಯಾವುದೇ ಪೂರಕವಾದ ಮಾಹಿತಿ/ ದಾಖಲೆಗಳನ್ನು ಸಾಮಾನ್ಯವಾಗಿ ಲಭ್ಯಪಡಿಸಿರುವುದಿಲ್ಲ.

ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸ್ವೀಕೃತವಾಗುವ ಅನಾಮಧೇಯ ದೂರುಗಳ ಬಗ್ಗೆ ಯಾವೆಲ್ಲಾ ಕ್ರಮಗಳನ್ನು ಕೈಗೊಳ್ಳಬೇಕು ಎಂಬ ಬಗ್ಗೆ ಸರ್ಕಾರದ ಸುತ್ತೋಲೆ ಸಂಖ್ಯೆ: ಜಿಎಡಿ 113 ಒಒಎಂ 62, ದಿನಾಂಕ: 26.10.1962 ಮತ್ತು ಭಾರತ ಸರ್ಕಾರದ DOPT ಆಧಿಕೃತ ಜ್ಞಾಪನ ಸಂಖ್ಯೆ:104/76/2011-AVD.12:18.10.2013 ಗಳಲ್ಲಿ ಕೆಲವು ಸೂಚನೆಗಳನ್ನು ನೀಡಲಾಗಿದೆ.

ಇಂತಹ ದೂರುಗಳು ಕೆಲವು ಸಂದರ್ಭಗಳಲ್ಲಿ ವೈಯಕ್ತಿಕ ದ್ವೇಷ, ಅಸೂಯೆ ಅಥವಾ ಪೂರ್ವಗ್ರಹ ಪೀಡಿತವಾಗಿರುತ್ತವೆ. ಅಲ್ಲದೇ ದೂರುಗಳಿಗೆ ಪೂರಕವಾದ ಮಾಹಿತಿ/ ದಾಖಲೆಗಳನ್ನು ಸಾಮಾನ್ಯವಾಗಿ ಲಭ್ಯಪಡಿಸಿರುವುದಿಲ್ಲ. ಇಂತಹ ದೂರುಗಳಿಂದಾಗಿ ಸರ್ಕಾರಿ ಅಧಿಕಾರಿ/ನೌಕರರ ದೈನಂದಿನ ಕೆಲಸ ಕಾರ್ಯಗಳಲ್ಲಿ ಹಸ್ತಕ್ಷೇಪ ಉಂಟಾಗುವುದಲ್ಲದೇ ದಕ್ಷ ಹಾಗೂ ಪ್ರಮಾಣಿಕ ನೌಕರರ ವಿಶ್ವಾಸರ್ಹತೆಗೆ, ಧಕ್ಕೆ ಉಂಟಾಗುತ್ತದೆ ಹಾಗೂ ಅವರು ಮುಕ್ತ ಮತ್ತು ನಿರ್ಭೀತರಾಗಿ ಕೆಲಸ ನಿರ್ವಹಿಸಲು ಸಾಧ್ಯವಾಗುವುದಿಲ್ಲ

ಮಾನ್ಯ ಮುಖ್ಯಮಂತ್ರಿಯವರು ದಿನಾಂಕ:04.08.2019ರ ಟಿಪ್ಪಣಿಯಲ್ಲಿ ಕರ್ನಾಟಕ ರಾಜ್ಯ ಸರ್ಕಾರಿ ನೌಕರರ ಸಂಘವು ಈ ಸಂಬಂಧ ನೀಡಿರುವ ಮನವಿಯನ್ನು ಪರಿಗಣಿಸಿ. ಕೇಂದ್ರ ಸರ್ಕಾರದ ಮಾದರಿಯಂತೆಯೇ ರಾಜ್ಯದಲ್ಲಿ ಸರ್ಕಾರಿ ನೌಕರರ ವಿರುದ್ಧ ಅನಾಮಧೇಯ ದೂರು/ಪತ್ರಗಳ ಆಧಾರದ ಮೇಲೆ ತನಿಖೆಗೆ ಒಳಪಡಿಸದೆ, ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ಮಾತ್ರ ತನಿಖೆಗೆ ಪರಿಗಣಿಸಲು ಆದೇಶ ಹೊರಡಿಸುವಂತೆ ಸೂಚಿಸಿರುತ್ತಾರೆ.

ಮೇಲ್ಕಾಣಿಸಿದ ಅಂಶಗಳ ಹಾಗೂ ಭಾರತ ಸರ್ಕಾರದ ಅಧಿಕೃತ ಜ್ಞಾಪನದ ಹಿನ್ನೆಲೆಯಲ್ಲಿ ಕರ್ನಾಟಕ ಸರ್ಕಾರದ ಸುತ್ತೋಲೆ ಸಂಖ್ಯೆ: ಸಿಆಸುಇ 21 ಸೇಇವಿ 2019, ದಿನಾಂಕ :03-10-2019 ರಲ್ಲಿ ಸರ್ಕಾರಿ ಅಧಿಕಾರಿ/ನೌಕರರ ವಿರುದ್ಧ ಸ್ವೀಕೃತವಾಗುವ ಅನಾವಧೇಯ ಅರ್ಜಿಗಳ ಆಧಾರದ ಮೇಲೆ ಪ್ರಕರಣವನ್ನು ತನಿಖೆಗೆ/ವಿಚಾರಣೆಗೆ ಒಳಪಡಿಸದೇ ಅಂತಹ ದೂರು ಅರ್ಜಿಗಳನ್ನು ಕಡತಗೊಳಿಸಬೇಕೆಂದು ಸೂಚಿಸಿದೆ. ಹಾಗೂ ಪೂರ್ಣ ವಿಳಾಸ ಸಹಿತವಿರುವ ದೂರುಗಳನ್ನು ಮಾತ್ರ ತನಿಖೆಗೆ/ ವಿಚಾರಣೆಗೆ ಪರಿಗಣಿಸಬೇಕೆಂದು ಸಚಿವಾಲಯದ ಎಲ್ಲಾ ಕಾರ್ಯದರ್ಶಿಗಳಿಗೆ ಹಾಗೂ ಇಲಾಖಾ ಮುಖ್ಯಸ್ಥರಿಗೆ ಸೂಚಿಸಲಾಗಿದೆ.

ಇದೆ ಅಂಶವನ್ನು ಸಂಬಂಧಪಟ್ಟ ಇಲಾಖೆಗಳು ತಮ್ಮ ಅಧೀನ ಕಛೇರಿಗಳಿಗೆ ತಿಳಿಸಲು ಇದೆ ರೀತಿ ಕ್ರಮವಹಿಸುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ – CLICK HERE

Leave a Comment

You cannot copy content of this page