4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಯುಕೆಜಿ ಆರಂಭ ಶಾಲಾ ಶಿಕ್ಷಣ ಇಲಾಖೆ ಸೂಚನೆ
4056 ಸರ್ಕಾರಿ ಶಾಲೆಗಳಲ್ಲಿ ಎಲ್‌ಕೆಜಿ ಯುಕೆಜಿ ಆರಂಭ: ಈ ಬಾರಿಯ ಬಜೆಟ್‌ನಲ್ಲಿ ಘೋಷಿಸಿರುವಂತೆ ರಾಜ್ಯದ ವಿವಿಧ ಜಿಲ್ಲೆಗಳ 4,056 ಸರ್ಕಾರಿ ಶಾಲೆಗಳಲ್ಲಿ 2025-26ನೇ ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳನ್ನು (ಎಲ್‌ಕೆಜಿ-ಯುಕೆಜಿ) ಆರಂಭಿಸಲು ಶಾಲಾ ಶಿಕ್ಷಣ ಇಲಾಖೆ ಆದೇಶಿಸಿದೆ.
ಒಟ್ಟು 90,195 ಮಕ್ಕಳು ದಾಖಲಾಗಿದ್ದಾರೆ. ಈ ಯೋಜನೆಯನ್ನು 70 ಕೋಟಿ ರೂ. ವೆಚ್ಚದಲ್ಲಿ ಒಟ್ಟು ಐದು ಸಾವಿರ ಶಾಲೆಗಳಿಗೆ ವಿಸ್ತರಿಸುವುದಾಗಿ ಬಜೆಟ್‌ನಲ್ಲಿ ಸಿಎಂ ಸಿದ್ದರಾಮಯ್ಯ ಘೋಷಿಸಿದ್ದರು. ಅದರಂತೆ ಹೊಸದಾಗಿ 4,056 ಶಾಲೆಗಳಲ್ಲಿ ಈ ಸಾಲಿನಿಂದಲೇ ಪೂರ್ವ ಪ್ರಾಥಮಿಕ ತರಗತಿಗಳ ಆರಂಭಕ್ಕೆ ಸರ್ಕಾರ ಷರತ್ತುಬದ್ಧ ಅನುಮತಿ ನೀಡಿದೆ.
ಈ ಶಾಲೆಗಳ ಪೈಕಿ ರಾಜ್ಯ ಸಮಗ್ರ ಶಿಕ್ಷಣ ಕರ್ನಾಟಕ ಯೋಜನೆಯಡಿ 1,105 ಶಾಲೆಗಳು, 126 ಪಿಎಂಶ್ರೀ ಶಾಲೆಗಳು, ಕಲ್ಯಾಣ ಕರ್ನಾಟಕ ಪ್ರದೇಶಾಭಿವೃದ್ಧಿ ಮಂಡಳಿ(ಕೆಕೆಆರ್‌ಡಿಬಿ) ಯೋಜನೆಯಡಿ 1,126 ಶಾಲೆಗಳು ಮತ್ತು 1,699 ಮ್ಯಾಗ್ನೆಟ್ ಶಾಲೆಗಳಲ್ಲಿ ಪೂರ್ವ ಪ್ರಾಥಮಿಕ ತರಗತಿ ಆರಂಭಿಸಬೇಕು. ಈ ವರ್ಷ ಎಲ್‌ಕೆಜಿ ತರಗತಿಯನ್ನು ಮಾತ್ರ ಆರಂಭಿಸಬೇಕು. ಮುಂದಿನ ವರ್ಷ ಯುಕೆಜಿ ಶುರು ಮಾಡಬೇಕು ಎಂಬಿತ್ಯಾದಿ ಷರತ್ತುಗಳನ್ನು ವಿಧಿಸಲಾಗಿದೆ.

CLICK HERE FOR MORE INFORMATION