Extension of the period: 2024-25ನೇ ಸಾಲಿನ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ಆನ್‌ಲೈನ್‌ ಮೂಲಕ ಅರ್ಜಿ ಸಲ್ಲಿಸಲು ಅವಧಿ ವಿಸ್ತರಣೆ.

Extension of the period for submitting online applications for FR/RR of private schools for the year 2024-25

Extension of the Period: 2024-25ನೇ ಸಾಲಿಗೆ ಖಾಸಗಿ ಶಾಲೆಗಳ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದ ಮುಖಾಂತರ ಅರ್ಜಿ ಸಲ್ಲಿಸಲು ಉಲ್ಲೇಖ(6)ರ ಸುತ್ತೋಲೆ ನೀಡಲಾಗಿತ್ತು. ಉಲ್ಲೇಖ(8)ರ ದಿನಾಂಕ:12-02-2025 ಸುತ್ತೋಲೆಯಂತೆ ಶಾಲಾ ಆಡಳಿತ ಮಂಡಳಿಗಳಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣಕ್ಕೆ ತಂತ್ರಾಂಶದಲ್ಲಿ ಅರ್ಜಿ ಸಲ್ಲಿಸಲು ದಿನಾಂಕ:12-02-2025 ರಿಂದ 28-02-2025ರವರೆಗೆ ಅವಧಿ ವಿಸ್ತರಿಸಿ ಅವಕಾಶ ನೀಡಲಾಗಿತ್ತು.

ಆದಾಗ್ಯೂ ಕೆಲವು ಶಾಲೆಗಳು 2024-25ನೇ ಸಾಲಿನಲ್ಲಿ ನೀಡಿದ ಕಾಲಾವಧಿಯಲ್ಲಿ ಮಾನ್ಯತೆ ಪಡೆಯಲು ವಿಫಲರಾಗಿರುವುದು ಹಾಗೂ ಹಲವು ಶಾಲೆಗಳ ಮಾನ್ಯತೆ ಕೋರಿ ಸಲ್ಲಿಸಿದ ಅರ್ಜಿಗಳು ದಾಖಲೆ/ಮಾಹಿತಿಗಳ ಕೊರತೆಯ ಕಾರಣದಿಂದ ತಿರಸ್ಕೃತಗೊಂಡಿರುತ್ತವೆ.

ಈ ಹಿನ್ನೆಲೆಯಲ್ಲಿ 2024-25ನೇ ಸಾಲಿಗೆ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯಲು ಖಾಸಗಿ ಅನುದಾನಿತ/ ಅನುದಾನ ರಹಿತ ಪ್ರಾಥಮಿಕ ಮತ್ತು ಪ್ರೌಢಶಾಲೆಗಳಿಗೆ ನಿಗದಿತ ಅವಧಿಯಲ್ಲಿ ಕಡ್ಡಾಯವಾಗಿ ಮಾನ್ಯತೆ ನವೀಕರಣ ಮಾಡಿಕೊಳ್ಳುವ ಮತ್ತು ಆ ರೀತಿ ಮಾನ್ಯತೆ ನವೀಕರಣ ಮಾಡಿಕೊಳ್ಳಲು ವಿಫಲರಾಗುವ ಶಾಲೆಗಳ ನೊಂದಣಿಯನ್ನು ನಿಯಮಾನುಸಾರ ರದ್ದುಪಡಿಸುವ ಮತ್ತು ಮಾನ್ಯತೆಯನ್ನು ಹಿಂಪಡೆಯುವ ಷರತ್ತಿಗೊಳಪಡಿಸಿ ಶಾಲೆಗಳಲ್ಲಿ ಓದುತ್ತಿರುವ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಕೊನೆಯ ಬಾರಿಗೆ ಮಾತ್ರ 2024-25ನೇ ಸಾಲಿನ ಮಾನ್ಯತೆ ನವೀಕರಣಕ್ಕೆ ಮಾತ್ರ ಅವಕಾಶ ನೀಡಲು ತೀರ್ಮಾನಿಸಿದೆ.

ಆದ್ದರಿಂದ ಸಂಬಂಧಿಸಿದ ಕ್ಷೇತ್ರಶಿಕ್ಷಣಾಧಿಕಾರಿಗಳು ಮತ್ತು ಸಕ್ಷಮ ಪ್ರಾಧಿಕಾರಿಗಳಾದ ಉಪನಿರ್ದೇಶಕರು(ಆಡಳಿತ) ಇವರು ವೈಯುಕ್ತಿಕ ಗಮನಹರಿಸಿ ತಮ್ಮ ವ್ಯಾಪ್ತಿಯಲ್ಲಿ ಈವರೆವಿಗೂ 2024-25ನೇ ಸಾಲಿಗೆ ಪ್ರಥಮ ಮಾನ್ಯತೆ/ಮಾನ್ಯತೆ ನವೀಕರಣ ಪಡೆಯದಿರುವ ಶಾಲಾ ಆಡಳಿತ ಮಂಡಳಿಗಳಿಗೆ ಸೂಕ್ತ ಮಾಹಿತಿ ನೀಡಿ ಎಲ್ಲಾ ಅಗತ್ಯ ದಾಖಲೆ/ಮಾಹಿತಿಗಳೊಂದಿಗೆ ಆನ್‌ಲೈನ್ ಮೂಲಕ ಪೂರ್ಣ ಪ್ರಸ್ತಾವನೆ ಸಲ್ಲಿಸಿ ಮಾನ್ಯತೆ ಪಡೆಯಲು ಸೂಚನೆ ನೀಡಲು ತಿಳಿಸಿದೆ.

ಈ ಅವಧಿಯ ನಂತರ ಪುನ: ಅರ್ಜಿ ಸಲ್ಲಿಸಲು ಅವಕಾಶ ನೀಡುವುದಿಲ್ಲ ಎಂಬ ಅಂಶವನ್ನು ಪುನರುಚ್ಚರಿಸುತ್ತಾ, ಸಲ್ಲಿಸಿದ ಅರ್ಜಿಯು ತಿರಸ್ಕರಿಸಲು ಅವಕಾಶವಾಗದಂತೆ ಪೂರ್ಣ ದಾಖಲೆಗಳನ್ನು ಸಲ್ಲಿಸಲು ಆಡಳಿತ ಮಂಡಳಿಗಳಿಗೆ ಸೂಚನೆ ನೀಡಿದೆ. ಮಾನ್ಯತೆ ಕೋರಿ ಸಲ್ಲಿಕೆಯಾಗುವ ಅರ್ಜಿಗಳನ್ನು ಹೆಚ್ಚಿನ ಸಿಬ್ಬಂದಿಯನ್ನು ನಿಯೋಜಿಸಿ ವಿಳಂಬಕ್ಕೆ ಅವಕಾಶ ನೀಡದಂತೆ ಅಯಾ ದಿನವೇ ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥಪಡಿಸಲು ನಕ್ಷಮ ಪ್ರಾಧಿಕಾರಿಗಳು ಅಗತ್ಯ ಕ್ರಮ ವಹಿಸಲು ಸೂಚಿಸಿದೆ. ಉಳಿದಂತೆ ಉಲ್ಲೇಖ(2) ರಿಂದ (9)ರವರೆಗಿನ ಸುತ್ತೋಲೆಗಳಲ್ಲಿನ ಎಲ್ಲಾ ಅಂಶಗಳು ಯಥಾವತ್ತಾಗಿರುತ್ತದೆ.

2024-25ನೇ ಸಾಲಿಗೆ ಪ್ರಥಮ ಮಾನ್ಯತೆ / ಮಾನ್ಯತೆ ನವೀಕರಣ ಸಂಬಂಧ ಹೊಸದಾಗಿ ಅರ್ಜಿ ಸಲ್ಲಿಸಲು ಅವಧಿ ವಿಸ್ತರಿಸಿ ಅವಕಾಶ ನೀಡಿ ನಿಗದಿಪಡಿಸಿದ ವೇಳಾಪಟ್ಟಿ.

ಉಲ್ಲೇಖಿತ(9)ರ ಪತ್ರದಂತೆ ಖಾಸಗಿ ಶಾಲಾ ಸೇವೆಗಳಿಗೆ ಸಂಬಂಧಿಸಿದಂತೆ ಆಡಳಿತ ಮಂಡಳಿಗಳು SATS ತಂತ್ರಾಂಶದಲ್ಲಿ ಶಾಲಾ ಲಾಗಿನ್ ಮೂಲಕ ಸಲ್ಲಿಸಬೇಕಾದ ದಾಖಲೆಗಳು ಹಾಗೂ ಆಡಳಿತ ಮಂಡಳಿಯು ಸಲ್ಲಿಸಬೇಕಾದ ದೃಢೀಕರಣಗಳನ್ನು ಏಕರೂಪದ ನಮೂನೆಯಲ್ಲಿ ಸಲ್ಲಿಸಲು ತಿಳಿಸಲಾಗಿದೆ. ಅದರಂತೆ ಆಡಳಿತ ಮಂಡಳಿಗಳು ಅಗತ್ಯ ದಾಖಲೆಗಳನ್ನು ಅಪ್‌ಲೋಡ್ ಮಾಡುವುದು. ಸಕ್ಷಮ ಪ್ರಾಧಿಕಾರಿಗಳಿಂದ ಪಡೆದ ಪತ್ರಗಳ ವಾಯಿದೆ ಮುಗಿದಿದ್ದಲ್ಲಿ ಅಂತಹ ದಾಖಲೆಗಳನ್ನು ನವೀಕರಿಸಿ ಅಪ್‌ಲೋಡ್ ಮಾಡುವುದು.

ಉಪನಿರ್ದೇಶಕರ ಕಛೇರಿಯಲ್ಲಿ ಪ್ರತಿ ಅರ್ಜಿ ಸ್ವೀಕರಿಸಿದ ನಂತರ ಸಂಬಂಧಿಸಿದ ಸಿಬ್ಬಂದಿ/ಅಧಿಕಾರಿಗಳು ಅಂತಿಮ ದಿನಾಂಕದವರೆಗೂ ಕಾಯದೇ ಆಯಾ ದಿನವೇ ಸ್ವೀಕೃತಗೊಂಡ ಅರ್ಜಿಗಳನ್ನು ನಿಯಮಾನುಸಾರ ಪರಿಶೀಲಿಸಿ ಇತ್ಯರ್ಥಗೊಳಿಸಲು ಕ್ರಮವಹಿಸುವುದು.

ಸಲ್ಲಿಕೆಯಾದ ಅರ್ಜಿಗಳಲ್ಲಿ ಆಕ್ಷೇಪಣೆಗಳೇನಾದರೂ ಇದ್ದಲ್ಲಿ ಉಪನಿರ್ದೇಶಕರು ಪರಿಶೀಲಿಸಿ ಅಗತ್ಯಾನುಸಾರ ಅಂತಹ ಅರ್ಜಿಗಳನ್ನು ನಿಗದಿಪಡಿಸಿದ ದಿನದೊಳಗಾಗಿ ರೋಲ್ ಬ್ಯಾಕ್ ಮಾಡಿ (DEO ಲಾಗಿನ್‌ ಬಂದ ದಿನದಿಂದ 05 ದಿನಗಳೊಳಗೆ) ಆಡಳಿತ ಮಂಡಳಿಗೆ ಕಳುಹಿಸತಕ್ಕದ್ದು. ಇಲ್ಲವಾದಲ್ಲಿ ಅರ್ಜಿದಾರರು ಅವಕಾಶ ವಂಚಿತರಾಗುತ್ತಾರೆ. ಆಯಾ ಲಾಗಿನ್‌ ಸಿಬ್ಬಂದಿ/ಅಧಿಕಾರಿಗಳು ಇದರ ಜವಾಬ್ದಾರಿಯನ್ನು ಅರಿತು ನಿಗದಿತ ಕಾಲಮಿತಿಯಲ್ಲಿ ಪ್ರಕ್ರಿಯೆ ಪೂರ್ಣಗೊಳಿಸುವಂತೆ ಎಚ್ಚರಿಕೆ ನೀಡಿದೆ. ಉಲ್ಲೇಖದಲ್ಲಿ ನೀಡಿರುವ ಮಾರ್ಗದರ್ಶನಗಳನ್ನು ಕಡ್ಡಾಯವಾಗಿ ಪಾಲಿಸಿ ಪ್ರಥಮ ಮಾನ್ಯತೆ/ಮಾನ್ಯತೆಯನ್ನು ನವೀಕರಿಸಲು ಸೂಚಿಸಿದೆ.

ಒಂದು ವೇಳೆ ಮಾನ್ಯತೆ ನವೀಕರಿಸುವ ಬಗ್ಗೆ ನಿಯಮ ಉಲ್ಲಂಘನೆಯಾದಲ್ಲಿ ಅಥವಾ ಅನಗತ್ಯ ವಿಳಂಬ ಅಥವಾ ಇತರೆ ಆಧಾರದ ಮೇಲೆ ದೂರುಗಳು ಬಂದಲ್ಲಿ ತಮ್ಮ ಮೇಲೆ ಸೂಕ್ತ ಶಿಸ್ತುಕ್ರಮ ಜರುಗಿಸಲಾಗುವುದು. ಈ ಅವಧಿಯಲ್ಲಿಯೂ ಸಹ ಅರ್ಜಿ ಸಲ್ಲಿಸಿ ಮಾನ್ಯತೆ ಪಡೆಯದ ಶಾಲೆಗಳ ವಿರುದ್ಧ ಸರ್ಕಾರದ ಆದೇಶದಂತೆ ನಿಯಮಾನುಸಾರ ಅಗತ್ಯ ಕ್ರಮ ವಹಿಸಲು ಸೂಚಿಸಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!