Important information published by KPSC regarding Kannada language exam-2024

Important information published by KPSC regarding Kannada language exam

KPSC: ಪಿಡಿಒ ಹುದ್ದೆ ಕನ್ನಡ ಭಾಷಾ ಪರೀಕ್ಷೆ: ಕೆಪಿಎಸ್ಸಿ ಸ್ಪಷ್ಟನೆ.

2024ನೇ ಸಾಲಿನ ಏಪ್ರಿಲ್‌ನಲ್ಲಿ ಅಧಿಸೂಚಿಸಿರುವ 2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ನೋಟಿಫಿಕೇಶನ್‌ಗೆ ಸಂಬಂಧಿಸಿದಂತೆ ಇದೀಗ ಕೆಪಿಎಸ್‌ಸಿ ಹೊಸ ಪ್ರಕಟಣೆಯೊಂದನ್ನು ಬಿಡುಗಡೆ ಮಾಡಿದೆ. ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಿ, ನೇಮಕ ಪ್ರಕ್ರಿಯೆಯ ಪಿಡಿಒ ಸ್ಪರ್ಧಾತ್ಮಕ ಪರೀಕ್ಷೆಗಳನ್ನು ಬರೆಯುವವರು ಈ ಮಾಹಿತಿಗಳನ್ನು ಗಮನಿಸುವುದು ಒಳ್ಳೆಯದು.

ಕೆಪಿಎಸ್‌ಸಿ ಇದೀಗ ಬಿಡುಗಡೆ ಮಾಡಲಾದ ತನ್ನ ಪ್ರಕಟಣೆಯಲ್ಲಿ ಪಿಡಿಎಒ ಹೈದರಾಬಾದ್-ಕರ್ನಾಟಕ ಸ್ಥಳೀಯ ವೃಂದದ 97 ಹುದ್ದೆಗಳಿಗೆ, ನ. 16ರಂದು ಕನ್ನಡ ಭಾಷಾ ಪರೀಕ್ಷೆ ಹಾಗೂ ನ.17ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ನಡೆಸುತ್ತಿದೆ. ಉಳಿದ ಮೂಲ ವೃಂದದ ಕನ್ನಡ ಭಾಷಾ ಪರೀಕ್ಷೆಯನ್ನು ಡಿಸೆಂಬರ್ 7ರಂದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ಡಿಸೆಂಬ‌ರ್ 8ರಂದು ನಡೆಸಲಾಗುತ್ತಿದೆ.

ಈ ಹುದ್ದೆಯ ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ನೆನಪಿಡಬೇಕಾದ ಪ್ರಮುಖ ಅಂಶವೆಂದರೆ ಈಗಾಗಲೇ ಕರ್ನಾಟಕ ನಾಗರಿಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರಡಿ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ 29-11-2022ರಂದು ಹಾಗೂ ನಂತರ ನಡೆಸಲಾದ ಯಾವುದೇ ಕನ್ನಡ ಭಾಷಾ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಿದ್ದಲ್ಲಿ ಆ ಫಲಿತಾಂಶವನ್ನು ಈ ಅಧಿಸೂಚನೆಯ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಪರಿಗಣಿಸಲಾಗುವುದು ಎಂದು ಕೆಪಿಎಸ್‌ಸಿ ತಿಳಿಸಿದೆ.

ಇದನ್ನೂ ನೋಡಿ….KEA VAO EXAM-2024 ಕಡ್ಡಾಯ ಕನ್ನಡ ತಾತ್ಕಾಲಿಕ ಅಂಕ ಪಟ್ಟಿ ಪ್ರಕಟ.

2023-24ನೇ ಸಾಲಿನ ಗ್ರೂಪ್-ಸಿ ವೃಂದದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯಲ್ಲಿನ “ಪಂಚಾಯತಿ ಅಭಿವೃದ್ಧಿ ಅಧಿಕಾರಿ” ಹೈದ್ರಾಬಾದ್-ಕರ್ನಾಟಕ ಸ್ಥಳೀಯ ವೃಂದದ-97 ಹುದ್ದೆಗಳಿಗೆ, ದಿನಾಂಕ: 16.11.2024ರಂದು ಕನ್ನಡ ಭಾಷಾ ಪರೀಕ್ಷೆಯನ್ನು ಹಾಗೂ ದಿನಾಂಕ:17.11.2024ರಂದು ಸ್ಪರ್ಧಾತ್ಮಕ ಪರೀಕ್ಷೆಯನ್ನು ಹಾಗೂ ಉಳಿಕೆ ಮೂಲ ವೃಂದದ ಕನ್ನಡ ಭಾಷಾ ಪರೀಕ್ಷೆಯನ್ನು ದಿನಾಂಕ:07.12.2024ರಂದು ಹಾಗೂ ಸ್ಪರ್ಧಾತ್ಮಕ ಪರೀಕ್ಷೆಯನ್ನು ದಿನಾಂಕ:08.12.2024ರಂದು ಪರೀಕ್ಷೆಯನ್ನು ನಡೆಸಲಾಗುತ್ತಿದ್ದು, ಕನ್ನಡ ಭಾಷಾ ಪರೀಕ್ಷೆಗೆ ಸಂಬಂಧಿಸಿದಂತೆ ಅಭ್ಯರ್ಥಿಗಳು ಈಗಾಗಲೇ ಕರ್ನಾಟಕ ನಾಗರೀಕ ಸೇವಾ (ನೇರ ನೇಮಕಾತಿ) (ಸಾಮಾನ್ಯ) ನಿಯಮಗಳು 2021ರಡಿ ಕರ್ನಾಟಕ ಲೋಕಸೇವಾ ಆಯೋಗವು ದಿನಾಂಕ:29-11-2022ರಂದು ಹಾಗೂ ನಂತರ ನಡೆಸಲಾದ ಕನ್ನಡ ಭಾಷಾ ಪರೀಕ್ಷೆಗಳನ್ನು ಬರೆದು ಉತ್ತೀರ್ಣರಾಗಿದ್ದಲ್ಲಿ ಸದರಿ ಫಲಿತಾಂಶವನ್ನು ಈ ಅಧಿಸೂಚನೆಯ ಹುದ್ದೆಗಳ ಕನ್ನಡ ಭಾಷಾ ಪರೀಕ್ಷೆಗೆ ಪರಿಗಣಿಸಲಾಗುವುದು.

ಹೆಚ್ಚಿನ ಮಾಹಿತಿಗಾಗಿ- CLICK HERE

Leave a Comment