ASHA workers: ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿಯನ್ನು ನಿಗದಿಪಡಿಸುವ ಕುರಿತು ದಿನಾಂಕ:04-03-2025

ASHA workers:ಆಶಾ ಕಾರ್ಯಕರ್ತೆಯರ ನಿವೃತ್ತಿ ವಯೋಮಿತಿಯನ್ನು ನಿಗದಿಪಡಿಸುವ ಕುರಿತು.

 

ASHA workers: ಆಶಾ ಕಾರ್ಯಕರ್ತೆಯರು ಮಾನ್ಯತೆ ಪಡೆದ ಸಾಮಾಜಿಕ ಆರೋಗ್ಯ ಕಾರ್ಯಕರ್ತೆಯಾಗಿದ್ದು, ಸ್ಥಳೀಯ ಸಮುದಾಯದಿಂದ ಆಯ್ಕೆಯಾಗಿದ್ದು, ಸಮುದಾಯ ಮತ್ತು ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ನಡುವೆ ಕಾರ್ಯನಿರ್ವಹಿಸುತ್ತಿದ್ದಾರೆ. ಆಶಾ ಕಾರ್ಯಕ್ರಮದಡಿಯಲ್ಲಿ ರಾಜ್ಯದಾದ್ಯಂತ ಜಿಲ್ಲಾವಾರು ಆಶಾ ಕಾರ್ಯಕರ್ತೆಯರ ಸ್ಥಾನಗಳನ್ನು ಹಂಚಿಕೆ ಮಾಡಲಾಗಿರುತ್ತದೆ. ಆಶಾನಿಧಿ ತಂತ್ರಾಂಶದಲ್ಲಿ ಹಾಲಿ ಕಾರ್ಯನಿರ್ವಹಿಸುತ್ತಿರುವ ಆಶಾ ಕಾರ್ಯಕರ್ತೆಯರ ವಿವರಗಳು ನಮೂದಾಗಿರುತ್ತವೆ.

 

ರಾಜ್ಯದಲ್ಲಿ ಆಶಾ ಕಾರ್ಯಕ್ರಮವನ್ನು ಹಾಲಿ ಇರುವ ಜನಸಂಖ್ಯೆ, ರಾಷ್ಟ್ರೀಯ ಆರೋಗ್ಯ ಕಾರ್ಯಕ್ರಮಗಳು, ತಂತ್ರಜ್ಞಾನ ಇತ್ಯಾದಿಗೆ ಅನುಗುಣವಾಗಿ ಯಶಸ್ವಿಯಾಗಿ ಅನುಷ್ಠಾನಗೊಳಿಸುವ ಹಿನ್ನೆಲೆಯಲ್ಲಿ ಆಶಾ

 

ಕಾರ್ಯಕರ್ತೆಯರ ಸ್ನಾನಗಳು ಮತ್ತು ಕರ್ತವ್ಯಗಳನ್ನು ತರ್ಕಬದ್ಧಗೊಳಿಸಲು(Rationalization) ಹೊಸ ನೀತಿ ನಿರೂಪಣೆ ರೂಪಿಸುವ ಅವಶ್ಯಕತೆಯಿರುತ್ತದೆ.

 

ಆಶಾ ಕಾರ್ಯಕರ್ತೆಯರ ಆಯ್ಕೆ ಪ್ರಕ್ರಿಯೆಗೆ 25-45 ವರ್ಷಗಳ ವಯೋಮಿತಿಯನ್ನು ನಿಗದಿಪಡಿಸಲಾಗಿದ್ದು, ಸದರಿಯವರ ನಿವೃತ್ತಿ ವಯೋಮಿತಿಯನ್ನು 60 ವರ್ಷಕ್ಕೆ ಸೀಮಿತಗೊಳಿಸಲಾಗಿದೆ.

 

 

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!