Teacher Recuritment: ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕಾತಿ.

Teacher Recuritment: ಶೀಘ್ರದಲ್ಲೇ 18 ಸಾವಿರ ಶಿಕ್ಷಕರ ನೇಮಕಾತಿ.

Teacher Recuritment:ಶಿಕ್ಷಣ ಕ್ಷೇತ್ರದಲ್ಲಿ ನೂತನ ಪ್ರಯೋಗ, ಕೌಶಲ್ಯಕ್ಕೆ ಒತ್ತು: ಸಚಿವ ಮಧು

ಮಕ್ಕಳಿಗೆ ಶಾಲಾ ಹಂತದಲ್ಲಿ ಕೌಶಲ್ಯಗಳ ಕಲಿಕೆಗೆ ಒತ್ತು ನೀಡುವ ನಿಟ್ಟಿನಲ್ಲಿ ‘ಸ್ಕಿಲ್ ಯೆಟ್ ಸ್ಕೂಲ್’ ಹಾಗೂ ‘ಎಐ ಆಧಾರಿತ ಕಲಿಕೆ’ಗೆ ಒತ್ತು ನೀಡಲು ಈ ಬಾರಿ ಕ್ರಮ ಕೈಗೊಳ್ಳುವುದಾಗಿ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಶನಿವಾರ ಸುದ್ದಿಗೋಷ್ಠಿ ‘ಯಲ್ಲಿ ಮಾತನಾಡಿದ ಅವರು, ಕಲಿಕೆಯಲ್ಲಿ ಸುಧಾರಣೆ ತರಲು ಅನೇಕ ಹೊಸ ಕ್ರಮ ಕೈಗೊಳ್ಳಲಾಗಿದೆ. ಕಲ್ಯಾಣ ಕರ್ನಾಟಕಕ್ಕೆ 5600, ಬೇರೆ ಕಡೆ 5 ಸಾವಿರ ಒಟ್ಟಾರೆಯಾಗಿ 18 ಸಾವಿರ ಶಿಕ್ಷಕರ ನೇಮಕಾತಿ ಶೀಘ್ರದಲ್ಲೇ ಆಗಲಿದೆ. ಶಿಕ್ಷಣ ಇಲಾಖೆಗೆ ಹೆಚ್ಚಿನ ಒತ್ತು ನೀಡಿದ್ದು ಈ ಬಾರಿಯ ಬಜೆಟ್‌ನಲ್ಲಿ 45 ಸಾವಿರ ಕೋಟಿ ಮೀಸಲಿಡಲಾಗಿದೆ. ಕಳೆದ ಬಾರಿ ಮೂಲಭೂತ ಸೌಕರ್ಯಗಳಿಗೆ ಒತ್ತು ನೀಡಲಾಗಿತ್ತು. ಈ ಬಾರಿ ಕಲಿಕೆಗೆ ಒತ್ತು ನೀಡಲಾಗಿದೆ ಎಂದರು.

ಈ ಬಾರಿ ಪರೀಕ್ಷೆಯಲ್ಲಿ ಬಿಗಿಕ್ರಮ ಕೈಗೊಂಡಿದ್ದೆವು. ಗ್ರೇಸ್ ಮಾರ್ಕ್ಸ್ ಕೂಡ ಇನ್ನುಮುಂದೆ ಇರುವುದಿಲ್ಲ. ಆದರೆ ಎಲ್ಲ ಶಾಲೆಗಳಿಗೆ ಟಾರ್ಗೆಟ್ ಕೊಟ್ಟಿದ್ದೇವೆ. ಗಣಿತ-ಗಣಕ, ಇಂಗ್ಲಿಷ್ ಕನ್ನಡ ಟೀಚರ್‌ಲೆಸ್ ಶಿಕ್ಷಣ ಸ್ಕಿಲ್ ಯೆಟ್ ಸ್ಕೂಲ್, ಭಾಷಾ ಪರಿಣಿತಿ, ಓದು ಕರ್ನಾಟಕ ಮುಂತಾದ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದ್ದು, ಓದುವ ಪರಿಜ್ಞಾನ ಹೆಚ್ಚಳಕ್ಕೆ ಕ್ರಮ ಕೈಗೊಳ್ಳಲಾಗಿದೆ ಎಂದರು.

ಶಿಕ್ಷಣ ಸಮಿತಿ ರಚನೆ:

ಪಕ್ಷಾತೀತವಾಗಿ ಎಲ್ಲಾ ಶಾಸಕರು ತಮ್ಮ ವ್ಯಾಪ್ತಿಯಲ್ಲಿನ ಅತ್ಯಂತ ಕಡಿಮೆ ವಿದ್ಯಾರ್ಥಿಗಳಿರುವ ಸರ್ಕಾರಿ ಶಾಲೆಗಳ ಮಕ್ಕಳನ್ನು ಸಮೀಪದ ಸರ್ಕಾರಿ ಶಾಲೆಗಳಿಗೆ ದಾಖಲು ಮಾಡಿ, ವಾಹನ ವ್ಯವಸ್ಥೆ ಮಾಡುವಂತೆ ಕೋರಿದ್ದಾರೆ. 1 ಸಾವಿರ ಕೆಪಿಎಸ್ ಶಾಲೆಗಳಿದ್ದು, ಅವುಗಳಿಗೆ ಮೂಲಭೂತ ಸೌಕರ್ಯಗಳನ್ನು ಹೆಚ್ಚಿಸಿ ಉತ್ತಮ ಶಿಕ್ಷಣ ನೀಡಬಹುದು. ಈ ನಿಟ್ಟಿನಲ್ಲಿ ಅಧ್ಯಯನ ನಡೆಸಲು ಶಿಕ್ಷಣ ಸಮಿತಿ ರಚಿಸಿದ್ದು, ಸಮಿತಿ ಅಧ್ಯಯನ ನಡೆಸಿ ವರದಿ ನೀಡಲಿದೆ ಎಂದು ಸಚಿವ ಮಧು ಬಂಗಾರಪ್ಪ ತಿಳಿಸಿದರು.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!