Jobs Recuritment Circular: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ.

Jobs Recuritment Circular: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದಕ್ಕೆ ತಡೆ.

Jobs Recuritment Circular: ಸಿಬ್ಬಂದಿ, ಆಡಳಿತ ಸುಧಾರಣಾ ಇಲಾಖೆ ಸೂಚನೆ

ಬೆಂಗಳೂರು: ರಾಜ್ಯ ಸಿವಿಲ್ ಸೇವೆಗಳಲ್ಲಿನ ಹುದ್ದೆಗಳ ನೇಮಕಾತಿಗಾಗಿ ಹೊಸದಾಗಿ ಅಧಿಸೂಚನೆ ಹೊರಡಿಸುವುದನ್ನು ತಡೆಹಿಡಿಯುವಂತೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಎಲ್ಲ ಇಲಾಖೆಗಳಿಗೆ ಸ್ಪಷ್ಟ ಸೂಚನೆ ನೀಡಿದೆ.

ರಾಜ್ಯ ಸಿವಿಲ್ ಸೇವೆಗಳಲ್ಲಿನ ಮೀಸಲಾತಿ ಅನ್ವಯವಾಗುವ ವೃಂದದಲ್ಲಿನ ಹುದ್ದೆಗಳಿಗೆ ನೇರ ನೇಮಕಾತಿ ಮಾಡಲು ಹೊಸದಾಗಿ ಅಧಿಸೂಚನೆ ಹೊರಡಿಸಬಾರದೆಂದು ನ.25, 2024 ರಂದು ಹೊರಡಿಸಿರುವ ಸುತ್ತೋಲೆಯಲ್ಲಿ ಸೂಚಿಸಲಾಗಿದೆ. ಆದಾಗ್ಯೂ ಕೆಲವು ನೇಮಕಾತಿ ಪ್ರಾಧಿಕಾರಗಳು ಈ ಸೂಚನೆ ಉಲ್ಲಂಘಿಸಿ ನೇರ ನೇಮಕಾತಿ ಮಾಡಲು ಹೊಸ ಅಧಿಸೂಚನೆ ಹೊರಡಿಸಿರುವುದು ಸರ್ಕಾರದ ಗಮನಕ್ಕೆ ಬಂದಿದೆ.

ಈ ಹಿನ್ನೆಲೆಯಲ್ಲಿ ನ.25, 2024ರ ನಂತರ ನೇರ ನೇಮಕಾತಿಗಾಗಿ ಯಾವುದೇ ಅಧಿಸೂಚನೆ ಹೊರಡಿಸಿದ್ದಲ್ಲಿ ತಕ್ಷಣದಿಂದ ಜಾರಿಗೆ ಬರುವಂತೆ ರದ್ದುಪಡಿಸಲು ಆಯಾ ನೇಮಕಾತಿ ಪ್ರಾಧಿಕಾರಗಳಿಗೆ ಸೂಚಿಸಿದೆ. ಸುತ್ತೋಲೆ ಉಲ್ಲಂಘಿಸುವ ಎಲ್ಲ ನೇಮಕಾತಿ ಪ್ರಾಧಿಕಾರಗಳ ವಿರುದ್ಧ ಶಿಸ್ತು ಕ್ರಮ ಕೈಗೊಳ್ಳಲು ಆಯಾ ಆಡಳಿತ ಇಲಾಖೆ ಕಾರ್ಯದರ್ಶಿಗಳಿಗೆ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಸೂಚಿಸಿದೆ.

ಒಳ ಮೀಸಲು ಸಂಬಂಧ ಸಮೀಕ್ಷೆ ನಡೆಸಲು ಕಳೆದ ವಾರ ಸಂಪುಟ ಸಭೆಯಲ್ಲಿ ನಿರ್ಧಾರವಾಗಿತ್ತು. ಈ ಸಮೀಕ್ಷೆ ಮುಗಿದು ವರದಿ ಸಲ್ಲಿಕೆ ಬಳಿಕ ಒಳಮೀಸಲು ಜಾರಿಗೆ ಬಲ ಬರುತ್ತದೆ. ಈ ಕಾರಣಕ್ಕೆ ಅಲ್ಲಿಯವರೆಗೂ ಹೊಸ ಅಧಿಸೂಚನೆ ಹೊರಡಿಸಬಾರದೆಂದು ಸರ್ಕಾರದ ಆದೇಶ ಪ್ರಕಟವಾಗಿದೆ.

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!