Extension of the survey period for Scheduled Caste Survey-2025
Extension of the survey period for Scheduled Caste Survey-2025: ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ ಸರ್ಕಾರದ ಆದೇಶದಲ್ಲಿ ಕರ್ನಾಟಕ ರಾಜ್ಯದಲ್ಲಿ ಶಿಕ್ಷಣ ಮತ್ತು ಸರ್ಕಾರಿ ಸೇವೆಗಳಲ್ಲಿ ಪರಿಶಿಷ್ಟ ಜಾತಿಯ 101 ಜಾತಿಗಳಿಗೆ ಸೇರಿದವರ ಪ್ರಾತಿನಿಧ್ಯತೆ ಕುರಿತು Empirical Data ಪಡೆದು ಪರಿಶಿಷ್ಟ ಜಾತಿಯಲ್ಲಿ ಒಳ ಮೀಸಲಾತಿ (ಉಪ ವರ್ಗೀಕರಣ) ಬಗ್ಗೆ, ವರದಿ ಸಲ್ಲಿಸಲು ಮಾನ್ಯ ಉಚ್ಚ ನ್ಯಾಯಾಲಯದ ನಿವೃತ್ತ ನ್ಯಾಯಮೂರ್ತಿಗಳಾದ ಡಾ. ಹೆಚ್.ಎನ್. ನಾಗಮೋಹನ್ ದಾಸ್ ಇವರ ಅಧ್ಯಕ್ಷತೆಯಲ್ಲಿ ಏಕ ಸದಸ್ಯ ಆಯೋಗವನ್ನು ರಚಿಸಲಾಗಿರುತ್ತದೆ.
ದಿನಾಂಕ: 27-03-2025 ರಂದು ಆಯೋಗವು ಸಲ್ಲಿಸಿದ ಮಧ್ಯಂತರ ವರದಿಯ ಆಧಾರದ ಮೇರೆಗೆ ವೈಜ್ಞಾನಿಕವಾದ ದತ್ತಾಂಶವನ್ನು (Empirical Data) ಸಂಗ್ರಹಿಸಲು ದಿನಾಂಕ: 05-05-2025 ರಿಂದ ಕರ್ನಾಟಕ ಸರ್ಕಾರದ ವತಿಯಿಂದ ಮನೆ-ಮನೆ ಸಮೀಕ್ಷೆ ನಡೆಸುತ್ತಿದ್ದು, ಪ್ರಸ್ತುತ ಪ್ರಗತಿಯಲ್ಲಿರುತ್ತದೆ.
ಮಾನ್ಯ ಶಾಸಕರುಗಳು, ಹಲವು ಸಂಘ ಸಂಸ್ಥೆಗಳು ಸಮೀಕ್ಷೆ ವೇಳೆ ಉದ್ಭವಿಸಿರುವ ಕೆಲವೊಂದು ಸಮಸ್ಯೆಗಳನ್ನು ಸರಿಪಡಿಸಲು ಸಮೀಕ್ಷಾ ದಿನಾಂಕವನ್ನು ವಿಸ್ತರಿಸಬೇಕೆಂದು ಕೋರಿರುವ ಹಿನ್ನೆಲೆಯಲ್ಲಿ ಸಮೀಕ್ಷಾ ಅವಧಿಯನ್ನು ಈ ಕೆಳಕಂಡಂತೆ ವಿಸ್ತರಿಸಲಾಗಿದೆ.
1) ಮನೆ-ಮನೆ ಭೇಟಿ ನೀಡಿ ಸಮೀಕ್ಷೆ-ದಿನಾಂಕ: 25-05-2025 ರವರೆಗೆ ವಿಸ್ತರಿಸಲಾಗಿದೆ.
2) ವಿಶೇಷ ಶಿಬಿರ (ಸಮೀಕ್ಷಾ ಬ್ಲಾಕ್ ವ್ಯಾಪ್ತಿಯಲ್ಲಿ) 3 ದಿನಗಳ ಕಾಲ ದಿನಾಂಕ:26-05-2025 ರಿಂದ 28-05-2025 ರವರೆಗೆ ಮರು ನಿಗದಿಪಡಿಸಲಾಗಿದೆ.
3) ಆನ್ ಲೈನ್ ಮೂಲಕ ಸ್ವಯಂ ಘೋಷಣೆಯನ್ನು ದಿನಾಂಕ:19-5-2025 ರಿಂದ 28-5-2025 ರವರೆಗೆ ನಿಗದಿಪಡಿಸಲಾಗಿದೆ.
ದಿನಾಂಕ 26-05-2025 ರಿಂದ 28-05-2025 ರವರೆಗೆ ವಿಶೇಷ ಶಿಬಿರದಲ್ಲಿ ನಡೆಸಬೇಕಾದ ಸಮೀಕ್ಷೆಯಲ್ಲಿ ಗಣತಿದಾರರು ಘೋಷಿತ ಮತಗಟ್ಟೆಗಳಲ್ಲಿ ಖುದ್ದಾಗಿ ಉಪಸ್ಥಿತರಿದ್ದು, ಮನೆ-ಮನೆ ಸಮೀಕ್ಷೆಯಲ್ಲಿ ಒಂದು ವೇಳೆ ಕೈಬಿಟ್ಟು ಹೋದಂತಹ ಪರಿಶಿಷ್ಟ ಜಾತಿಯ ಕುಟುಂಬದವರು ಶಿಬಿರಕ್ಕೆ, ಆಗಮಿಸಿದಾಗ ಸುಸೂತ್ರವಾಗಿ ಸಮೀಕ್ಷೆ ನಡೆಸಲು ಕ್ರಮವಹಿಸುವುದು.
ಮನೆ-ಮನೆ ಸಮೀಕ್ಷೆಯ ಬಗ್ಗೆ, ವಿಶೇಷ ಶಿಬಿರ ಏರ್ಪಡಿಸುತ್ತಿರುವ ಬಗ್ಗೆ, ಹಾಗೂ ಆನ್ ಲೈನ್ ಮೂಲಕ ಸ್ವಯಂ ಘೋಷಣೆಯ ಬಗ್ಗೆ, ಜಿಲ್ಲಾ ಹಂತದಲ್ಲಿ ಪತ್ರಿಕಾ ಗೋಷ್ಟಿ ನಡೆಸಿ ಶಿಬಿರದ ಕುರಿತು ವ್ಯಾಪಕ ಪ್ರಚಾರ ಮಾಡುವಂತೆ ಹಾಗೂ ಜಿಲ್ಲಾ ಮಟ್ಟದಲ್ಲಿರುವ ಸಂಘ-ಸಂಸ್ಥೆಗಳ ಮುಖಂಡರನ್ನು ಕರೆದು ಈ ಬಗ್ಗೆ ಸಭೆಗಳನ್ನು ನಡೆಸುವಂತೆ ತಿಳಿಸಲು ಮಾನ್ಯ ಅಧ್ಯಕ್ಷರಿಂದ ನಿರ್ದೇಶಿಸಲ್ಪಟ್ಟಿದ್ದೇನೆ. ಈ ಕುರಿತು ಮಾಹಿತಿ.

