PSI FREE COACHING-2025 ಪದವಿ ಪಾಸಾದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ ಮತ್ತು ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗಾಗಿ PSI ಪರೀಕ್ಷೆಗೆ 9 ತಿಂಗಳು ವಸತಿ ಸಹಿತ ಉಚಿತ ಕೋಚಿಂಗ್ ನೀಡಲು ಆಯ್ಕೆಪರೀಕ್ಷೆಗೆ ಅರ್ಜಿ ಸಲ್ಲಿಸಲು ಅವಕಾಶ

PSI FREE COACHING-2025: Degree ಪಾಸಾದ ಅಲ್ಪಸಂಖ್ಯಾತ (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಶಿಖ್ & ಪಾರ್ಸಿ) ಸಮುದಾಯದ ವಿದ್ಯಾರ್ಥಿಗಳಿಗಾಗಿ PSI ಪರೀಕ್ಷೆಗೆ 9 ತಿಂಗಳು ವಸತಿ ಸಹಿತ Free Coaching ನೀಡಲು ಆಯ್ಕೆಪರೀಕ್ಷೆಗೆ ಅರ್ಜಿ ಸಲ್ಲಿಸಲು ಇದೀಗ ಅವಕಾಶ ನೀಡಲಾಗಿದೆ.

 

FREE COACHING-2025 ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆ ಮಾಡುವ ಸಂಬಂಧ ಅಭ್ಯರ್ಥಿಗಳು ಆನ್ ಲೈನ್ ಅರ್ಜಿ ಸಲ್ಲಿಸುವ ಕುರಿತು,

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, 2024-25ನೇ ಸಾಲಿಗೆ ಮಂಜೂರಾದ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ 90 ದಿನಗಳ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಯನ್ನು ಪುರುಷ & ಮಹಿಳಾ ಅಭ್ಯರ್ಥಿಗಳಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ಪ್ರಾರಂಭಿಸಲು ಸರ್ಕಾರದಿಂದ ಆದೇಶ ಹೊರಡಿಲಾಗಿದೆ.

ಅದರಂತೆ. 2024-25ನೇ ಸಾಲಿಗೆ ಮಂಜೂರಾದ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯ ವತಿಯಿಂದ ಪ್ರತಿಷ್ಠಿತ ಸಂಸ್ಥೆಗಳ ಮೂಲಕ ಅಲ್ಪಸಂಖ್ಯಾತರ ಸಮುದಾಯದ ಯುವ ಜನರಿಗೆ ವಸತಿಯುತ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ ನೀಡುವ ಮೂಲಕ ರಾಜ್ಯಾಂಧ್ಯತ ಅಲ್ಪಸಂಖ್ಯಾತರ ಅಭ್ಯರ್ಥಿಗಳಿಗೆ ಆರ್ಥಿಕ ಹೊರೆ ತಪ್ಪಿಸಲು, ಅಭ್ಯರ್ಥಿಗಳ ಸುರಕ್ಷತಾ ದೃಷ್ಠಿಯಿಂದ ಕಲಿಕಾ ಪೂರಕ ವಾತಾವರಣ ಒದಗಿಸಲು. ಉತ್ತಮ ಫಲಿತಾಂಶ ಮತ್ತು ಸರ್ಕಾರಿ ಉದ್ಯೋಗ ಪಡೆದುಕೊಳ್ಳಲು ಅನುಕೂಲವಾಗುವಂತೆ. ಪುರುಷ ಮಹಿಳಾ ಅಭ್ಯರ್ಥಿಗಳಿಗೆ ರಾಜ್ಯದ ಬೆಳಗಾವಿ/ಮೈಸೂರು ಕಂದಾಯ ವಿಭಾಗಗಳಲ್ಲಿ 90 ದಿನಗಳ ವಸತಿಯುತ ತರಬೇತಿ ನೀಡಲು ಉದ್ದೇಶಿಸಲಾಗಿದೆ.

ಸದರಿ ತರಬೇತಿಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡುವ ಸಂಬಂಧ ತರಬೇತಿಯ ಅವಧಿ, ಶೈಕ್ಷಣಿಕ ವಿದ್ಯಾರ್ಹತೆ, ಅರ್ಜಿ ಸಲ್ಲಿಸಲು ಕೊನೆಯ ದಿನಾಂಕದ ವಿವರಗಳು ಈ ಕೆಳಕಂಡಂತಿವೆ.

1. ಕೋರ್ಸ್ ವಿವರ : Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿ

2.ತರಬೇತಿ ಅವಧಿ: ಈ PSI FREE COACHING  90 ದಿನಗಳ ಅವಧಿಯದಾಗಿರುತ್ತದೆ

3. ವಯಸ್ಸು: ಈ ತರಬೇತಿ ಪಡೆಯಲು ಕನಿಷ್ಠ 21 ರಿಂದ  ಗರಿಷ್ಠ 30 ವರ್ಷಗಳು

4. ವಿದ್ಯಾರ್ಹತೆ: ಈ PSI FREE COACHING ಗೆ ಅರ್ಜಿ ಸಲ್ಲಿಸಲು ನಿಗದಿಪಡಿಸಿದ ಕೊನೆಯ ದಿನಾಂಕದೊಳಗೆ ಯು.ಜಿ.ಸಿ ಇಂದ ಮಾನ್ಯತೆ ಪಡೆದ ಅಂಗೀಕೃತ ವಿಶ್ವವಿದ್ಯಾನಿಲಯದಲ್ಲಿ ಪದವಿ ಪಡೆದಿರಬೇಕು.

5.ಅಭ್ಯರ್ಥಿಯ ಸಾಮಾನ್ಯ ಅರ್ಹತೆ ಏನು?

A. ಸದರಿ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯ ಅಲ್ಪಸಂಖ್ಯಾತರ ಸಮುದಾಯಗಳಾದ ಮುಸ್ಲಿಂ, ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು.

B. ಸದರಿ ಅಭ್ಯರ್ಥಿಯು ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣ ಪತ್ರ ಪಡೆದಿರಬೇಕು.

C. ಎತ್ತರ: ಪುರುಷರಿಗೆ ಕನಿಷ್ಠ 168 ಸೆಂ.ಮೀ. ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ

D. ತೂಕ: ಪುರುಷರಿಗೆ ಕನಿಷ್ಠ 50 ಕೆ.ಜಿ. ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆ.ಜಿ.

E. ಎದೆಯ ಸುತ್ತಳತೆ(ಪುರುಷರಿಗೆ): ಕನಿಷ್ಠ 76 ಸೆಂ.ಮೀ.

6.ಆಯ್ಕೆ ವಿಧಾನ:

ಅಭ್ಯರ್ಥಿಗಳು ಪದವಿಯಲ್ಲಿ ಪಡೆದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆ ಮಾಡಲಾಗುವುದು.

7.ಅರ್ಜಿ ಸಲ್ಲಿಸುವ ವೆಬ್‌ಸೈಟ್:

1.https://sevasindhu.karnataka.gov.in/Sevasindhu/DepartmentServices

2. https://dom.karnataka.gov.in

8. ಅರ್ಜಿ ಸಲ್ಲಿಸಲು ಪ್ರಾರಂಭ ದಿನಾಂಕ: 10/05/2025

9. ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 23/05/2025

10. ತರಬೇತಿ ಸ್ಥಳಗಳು: ಮೈಸೂರು ಮತ್ತು ಬೆಳಗಾವಿ

 

ಅರ್ಜಿ ಸಲ್ಲಿಕೆ ಮಾಡುವ ಅಭ್ಯರ್ಥಿಗಳು ಗಮನದಲ್ಲಿಡಬೇಕಾದ ಮುಖ್ಯ ಅಂಶಗಳು:-

▪️ಅಧಿಕೃತ ಇಲಾಖಾ ವೆಬ್‌ಸೈಟ್‌ನಲ್ಲಿ ಕಾಲಕಾಲಕ್ಕೆ ನೀಡಲಾಗುವ ಮಾಹಿತಿಯು ಅಧಿಕೃತ ಮತ್ತು ಅಂತಿಮವಾಗಿರುತ್ತದೆ ಎಂದು ತಿಳಿಸಲಾಗಿದೆ.

▪️ಸಂಬಂಧಪಟ್ಟ ಇಲಾಖಾ ವತಿಯಿಂದ ಯಾವುದೇ ಪತ್ರ ವ್ಯವಹಾರವನ್ನು ನಡೆಸಲಾಗುವುದಿಲ್ಲವಾದ್ದರಿಂದ, ಇಲಾಖಾ ವೆಬ್‌ಸೈಟ್ ಅನ್ನು ವೀಕ್ಷಿಸತಕ್ಕದ್ದು ಎಂದು ತಿಳಿಸಲಾಗಿದೆ.

▪️ಯಾವುದೇ ತಪ್ಪು ಮಾಹಿತಿ ಕಾರಣದಿಂದ ಉಂಟಾಗಬಹುದಾದ ಲೋಪಗಳಿಗೆ ಸಂಬಂಧಪಟ್ಟ ಅಭ್ಯರ್ಥಿಗಳೇ ಕಾರಣರಾಗಿರುತ್ತಾರೆ ಎಂದು ತಿಳಿಸಲಾಗಿದೆ.

▪️ ಕ್ರ.ಸಂ.06ರಲ್ಲಿ ಮಾಹಿತಿ ತಿಳಿಸಿರುವಂತೆ ಅಭ್ಯರ್ಥಿಗಳ ಮೆರಿಟ್ ಪಟ್ಟಿಯನ್ನು ಸಿದ್ದಪಡಿಸಲಾಗುವುದು.

▪️ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ:8277799990 ಸಂಪರ್ಕಿಸುವುದು.

ಬೆಳಗಾವಿ & ಮೈಸೂರು ಕಂದಾಯ ವಿಭಾಗಗಳಲ್ಲಿ ಪ್ರಾರಂಭಿಸಲಾಗುತ್ತಿರುವ Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗಾಗಿ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಮಾರ್ಗಸೂಚಿಗಳು.

1. Police Sub Inspector (PSI) ನೇಮಕಾತಿ ಪರೀಕ್ಷಾ  ಪೂರ್ವ ತರಬೇತಿಗಾಗಿ ಎಲ್ಲ ಜಿಲ್ಲೆಗಳ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದಾಗಿದ್ದು ಅರ್ಜಿ ಸಲ್ಲಿಸುವ ಅಭ್ಯರ್ಥಿಯು ಕರ್ನಾಟಕದ ಖಾಯಂ ನಿವಾಸಿಯಾಗಿದ್ದು, ರಾಜ್ಯದ ಅಲ್ಪಸಂಖ್ಯಾತ ಸಮುದಾಯಗಳಾದ ಮುಸ್ಲಿಂ ಕ್ರಿಶ್ಚಿಯನ್, ಸಿಖ್, ಜೈನ್, ಬೌದ್ಧ ಮತ್ತು ಪಾರ್ಸಿ ಸಮುದಾಯಗಳಿಗೆ ಸೇರಿದವರಾಗಿರಬೇಕು.

2. PSI FREE COACHING-2025 ಗೆ ಅಭ್ಯರ್ಥಿಯು ತರಬೇತಿಗೆ ಅರ್ಜಿಸಲ್ಲಿಸುವ ಕಡೆಯ ದಿನಾಂಕದೊಳಗೆ ಅಂತಿಮ ವರ್ಷದ ಪದವಿಯ ಫಲಿತಾಂಶ ಪ್ರಕಟಗೊಂಡಿರಬೇಕು.

3. ಅರ್ಜಿ ಸಲ್ಲಿಸುವ ಕೊನೆಯ ದಿನಾಂಕದೊಳಗೆ ನಿಗದಿತ ನಮೂನೆಯಲ್ಲಿ ಜಾತಿ ಮತ್ತು ಆದಾಯ ಪ್ರಮಾಣಪತ್ರವನ್ನು ಪಡೆದಿರಬೇಕು.

4. ಅಭ್ಯರ್ಥಿಯ ಕುಟುಂಬದ ವಾರ್ಷಿಕ ಆದಾಯ ರೂ 8.00 ಲಕ್ಷಕ್ಕಿಂತ ಮೀರಿರಬಾರದು.

5. ತರಬೇತಿಗೆ ಅರ್ಜಿ ಸಲ್ಲಿಸಲು ಅಭ್ಯರ್ಥಿಯ ವಯೋಮಿತಿಯನ್ನು ಕನಿಷ್ಠ 21 ಮತ್ತು ಗರಿಷ್ಠ 30 ವರ್ಷಗಳಿಗೆ ನಿಗದಿಪಡಿಸಲಾಗಿದೆ.

6.ಸದರಿ ಯೋಜನೆಯಡಿ  ಮೀಸಲಾತಿಯನ್ನು ಮುಸ್ಲಿಂ 82.25%, ಕ್ರಿಶ್ಚಿಯನ್ 11.92%, ಜೈನ್ 4.60%, ಸಿಖ್  0.24%,ಬೌದ್ಧ, 0.98% ಹಾಗೂ ಪಾರ್ಸಿಗಳು 0.01% ರಷ್ಟು ನಿಗದಿಪಡಿಸಲಾಗಿದೆ. ನಿಗದಿತ ಸ್ಥಾನಕ್ಕೆ ಅರ್ಹ ಅಭ್ಯರ್ಥಿಗಳು ದೊರೆಯದಿದ್ದರೆ ಇತರೆ ಅಲ್ಪಸಂಖ್ಯಾತರ ವರ್ಗದಲ್ಲಿ ಲಭ್ಯವಿರುವ ಅಭ್ಯರ್ಥಿಗಳನ್ನು ಶೇಕಾಡವಾರು ಮೀಸಲಾತಿಯನ್ವಯ ಆಯ್ಕೆಗೆ ಅವಕಾಶ ಕಲ್ಪಿಸಲಾಗುವುದು.

7. ಸದರಿ ತರಬೇತಿಗೆ ಸೇರಬಯಸುವ ರಾಜ್ಯದ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳು ಪದವಿಯಲ್ಲಿ ಗಳಿಸಿದ ಅಂಕಗಳ ಮೆರಿಟ್ ಆಧಾರದ ಮೇಲೆ ಆಯ್ಕೆಮಾಡಲಾಗುವುದು.

8. ಅಭ್ಯರ್ಥಿಯ ಎತ್ತರ:

ಪುರುಷರಿಗೆ ಕನಿಷ್ಠ 168 ಸಂ.ಮೀ. ಮತ್ತು ಮಹಿಳೆಯರಿಗೆ ಕನಿಷ್ಠ 157 ಸೆಂ.ಮೀ. ನಿಗದಿಪಡಿಸಲಾಗಿದೆ.

ತೂಕ:

ಪುರುಷರಿಗೆ ಕನಿಷ್ಠ 50 ಕೆ.ಜಿ. ಮತ್ತು ಮಹಿಳೆಯರಿಗೆ ಕನಿಷ್ಠ 45 ಕೆ.ಜಿ. ಹಾಗೂ ಎದೆಯ ಸುತ್ತಳತೆ(ಪುರುಷರಿಗೆ): 76 ಸೆಂ.ಮೀ ನಿಗದಿಪಡಿಸಲಾಗಿದೆ.

9. Police Sub Inspector (PSI) ನೇಮಕಾತಿ ಪರೀಕ್ಷಾ ಪೂರ್ವ ತರಬೇತಿಗೆ ಆಯ್ಕೆಯಾದ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳಿಗೆ 90 ದಿನಗಳ ಅವಧಿಗೆ ರಾಜ್ಯದ ಬೆಳಗಾವಿ ಮತ್ತು ಮೈಸೂರುಗಳಲ್ಲಿ ಆಹಾರ ಮತ್ತು ವಸತಿಯೊಂದಿಗೆ ಪ್ರತಿಷ್ಠಿತ ಸಂಸ್ಥೆಯ ಮೂಲಕ ತರಬೇತಿಯನ್ನು ನೀಡಲಾಗುವುದು.

10. ಈ ಮೇಲ್ಕಂಡ ಮಾರ್ಗಸೂಚಿಗಳು ಕಾಲಕಾಲಕ್ಕೆ ಸರ್ಕಾರ ಹೊರಡಿಸಲಾಗುವ ಆದೇಶಗಳಿಗೆ ಒಳಪಟ್ಟಿರುತ್ತದೆ. ಹಾಗೂ ಸದರಿ ಮಾರ್ಗಸೂಚಿಗಳನ್ನು ಮಾರ್ಪಡಿಸುವ ಸಂಪೂರ್ಣ ಅಧಿಕಾರವನ್ನು ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹೊಂದಿರುತ್ತದೆ.

▪️ ಅಧಿಸೂಚನೆ – CLICK HERE
▪️ಮಾರ್ಗಸೂಚಿ – CLICK HERE
▪️ಆನ್ಲೈನ್ ಅಪ್ಲಿಕೇಶನ್ – CLICK HERE
▪️ಅಧಿಕೃತ ವೆಬ್ಸೈಟ್ – CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!