Guest Teacher: 51 ಸಾವಿರ ಪ್ರಾಥಮಿಕ ಮತ್ತು ಪ್ರಾಢಶಾಲಾ ಅತಿಥಿ ಶಿಕ್ಷಕರ ನೇಮಕ ಸರ್ಕಾರದ ಅಧಿಕೃತ ಆದೇಶ ಹೊರಡಿಸಿದೆ.
Guest Teacher-2025-2026ನೇ ಶೈಕ್ಷಣಿಕ ಸಾಲಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಹಾಗೂ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕ ಮಾಡುವ ಬಗ್ಗೆ ಆದೇಶ.
ಪ್ರಸ್ತಾವನೆ:-ಮೇಲೆ ಓದಲಾದ ಕ್ರಮ ಸಂಖ್ಯೆ (1)ರ ಆದೇಶದಲ್ಲಿ 2024-25 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 35000 ಅತಿಥಿ ಶಿಕ್ಷಕರುಗಳನ್ನು ಮತ್ತು ಸರ್ಕಾರಿ ಪ್ರೌಢಶಾಲೆಗಳಿಗೆ 10,000 ಅತಿಥಿ ಶಿಕ್ಷಕರಗಳನ್ನು ಒಳಗೊಂಡಂತೆ ಒಟ್ಟು 45,000 (ನಲವತ್ತೈದು ಸಾವಿರ) ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಅತಿಥಿ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಲಾಗಿರುತ್ತದೆ.
ಮೇಲೆ ಓದಲಾದ ಕ್ರಮ ಸಂಖ್ಯೆ (2)ರ ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಇವರ ಪತ್ರದಲ್ಲಿ 2025-26ನೇ ಶೈಕ್ಷಣಿಕ ವರ್ಷದ ಏಕ ರೂಪದ ಮಾರ್ಗಸೂಚಿಯನ್ನು ನಿಗಧಿಪಡಿಸಿ ದಿನಾಂಕ: 29.05.2025 ರಂದು ಶಾಲೆಗಳು ಪ್ರಾರಂಭವಾಗಲಿದ್ದು, ಅದರಂತೆ, 2025-26 ನೇ ಸಾಲಿನಲ್ಲಿ ಪೂರ್ವ ನಿಗದಿಯಂತೆ ಶಾಲಾ ಶೈಕ್ಷಣಿಕ ಚಟುವಟಿಕೆಗಳನ್ನು ಪ್ರಾರಂಭಿಸಿ ನಿರ್ವಹಣೆ ಮಾಡಬೇಕಾಗಿದ್ದು, ಶಾಲಾ ಪ್ರಾರಂಭದ ದಿನವೇ ಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆ ಎದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ ಖಾಯಂ ಶಿಕ್ಷಕರ ನೇಮಕವಾಗುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಯಾವುದು ಮೊದಲೂ ಅಲ್ಲಿಯವರೆಗೆ ಶಿಕ್ಷಕರ ಕೊರತೆಯನ್ನು ನೀಗಿಸುವ ದೃಷ್ಟಿಯಿಂದ ತಾತ್ಕಾಲಿಕವಾಗಿ ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳುವ ಅನಿವಾರ್ಯತೆ ಇರುತ್ತದೆ.
ಆದ್ದರಿಂದ ಪ್ರಾಥಮಿಕ/ಪ್ರೌಢಶಾಲೆಗಳನ್ನು ಪ್ರಾರಂಭಿಸಿ, ಶೈಕ್ಷಣಿಕ ಚಟುವಟಿಕೆಗಳ ನಿರ್ವಹಣೆ ಮಾಡಬೇಕಾಗಿರುತ್ತದೆ ಎಂದು ವರದಿ ಮಾಡುತ್ತಾ, ರಾಜ್ಯದ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಯಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ವರ್ಷದ ಪ್ರಾರಂಭದಲ್ಲೇ ಅತಿಥಿ ಶಿಕ್ಷಕರನ್ನು ಶಾಲೆಗಳಿಗೆ ಲಭ್ಯಪಡಿಸಿದ್ದಲ್ಲಿ ವಿದ್ಯಾರ್ಥಿಗಳ ಶೈಕ್ಷಣಿಕ ಬೋಧನಾ ಪ್ರಕ್ರಿಯೆಗೆ ಅನುಕೂಲವಾಗುತ್ತದೆಂಬ ಅಂಶದೊಂದಿಗೆ ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಿಗೆ 45,000 ಹಾಗೂ ಪ್ರೌಢಶಾಲೆಗಳಿಗೆ 11,000 ಒಟ್ಟು 56,000 (ಐವತ್ತಾರು ಸಾವಿರ) ಅತಿಥಿ ಶಿಕ್ಷಕರನ್ನು ನೇಮಕಾತಿ ಮಾಡಿಕೊಳ್ಳಲು ಕೋರಿ ಸರ್ಕಾರಕ್ಕೆ ಪ್ರಸ್ತಾವನೆಯಲ್ಲಿ ಸಲ್ಲಿಸಿರುತ್ತಾರೆ.
ನಿರ್ದೇಶಕರು (ಪ್ರಾಥಮಿಕ ಶಿಕ್ಷಣ), ಆಯುಕ್ತರ ಕಛೇರಿ, ಶಾಲಾ ಶಿಕ್ಷಣ ಇಲಾಖೆ ಬೆಂಗಳೂರು ಇವರ ಪ್ರಸ್ತಾವನೆಯನ್ನು ಪರಿಶೀಲಿಸಲಾಯಿತು. ರಾಜ್ಯದ ಸರ್ಕಾರಿ ಪ್ರಾಥಮಿಕ ಶಾಲೆಗಳಲ್ಲಿ ಖಾಲಿಯಿರುವ ಬೋಧಕ ಹುದ್ದೆಗಳಿಗೆ ಹಾಗೂ ಸರ್ಕಾರಿ ಪ್ರೌಢಶಾಲೆಗಳಲ್ಲಿ ಖಾಲಿ ಇರುವ ಬೋಧಕ ಹುದ್ದೆಗಳಿಗೆದುರಾಗಿ ವಿದ್ಯಾರ್ಥಿಗಳ ಶೈಕ್ಷಣಿಕ ಹಿತದೃಷ್ಟಿಯಿಂದ 2025-26 ನೇ ಶೈಕ್ಷಣಿಕ ಸಾಲಿಗೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ನಿರ್ಧರಿಸಲಾಯಿತು.
ಅದರಂತೆ ಈ ಕೆಳಕಂಡಂತೆ ಆದೇಶ.
ಸರ್ಕಾರದ ಆದೇಶ ಸಂಖ್ಯೆ: ಇಪಿ 138 ಎಸ್ಇಎಸ್ 2025, ದಿನಾಂಕ: 23/05/2025
ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ 2025-26 ನೇ ಶೈಕ್ಷಣಿಕ ಸಾಲಿಗೆ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಲ್ಲಿ ಖಾಲಿಯಿರುವ ಶಿಕ್ಷಕರುಗಳ ಹುದ್ದೆಗಳಿಗೆದುರಾಗಿ ಶೈಕ್ಷಣಿಕ ಹಿತದೃಷ್ಟಿಯಿಂದ ಅತಿಥಿ ಶಿಕ್ಷಕರುಗಳನ್ನು ತಾತ್ಕಾಲಿಕವಾಗಿ ನೇರ ನೇಮಕಾತಿ ಮೂಲಕ ಶಿಕ್ಷಕರನ್ನು ಭರ್ತಿ ಮಾಡುವವರೆಗೆ ಅಥವಾ ಶೈಕ್ಷಣಿಕ ವರ್ಷದ ಅಂತ್ಯದವರೆಗೆ ಎಂಬ ಷರತ್ತಿಗೊಳಪಟ್ಟು ಈ ಕೆಳಕಂಡಂತೆ ಅತಿಥಿ ಶಿಕ್ಷಕರನ್ನು ತಾತ್ಕಾಲಿಕವಾಗಿ ನೇಮಕ ಮಾಡಿಕೊಳ್ಳಲು ಸರ್ಕಾರವು ಮಂಜೂರಾತಿ ನೀಡಿ ಆದೇಶಿಸಿದೆ.

ಮುಂದುವರೆದು, 2025-26ನೇ ಶೈಕ್ಷಣಿಕ ಸಾಲಿಗೆ ನೇಮಕಾತಿ ಮಾಡಿಕೊಳ್ಳಲಾಗುವ ಒಟ್ಟು 51,000 ಅತಿಥಿ ಶಿಕ್ಷಕರುಗಳ ಗೌರವಧನ ಪಾವತಿಗಾಗಿ ಅವಶ್ಯವಿರುವ ಅನುದಾನದ ವಿವರ ಹಾಗೂ ಅತಿಥಿ ಶಿಕ್ಷಕರ ಜಿಲ್ಲಾ / ತಾಲ್ಲೂಕುವಾರು ವಿವರಗಳೊಂದಿಗೆ ಪ್ರಸ್ತಾವನೆಯನ್ನು ಸರ್ಕಾರಕ್ಕೆ ಸಲ್ಲಿಸುವಂತೆ ಸೂಚಿಸಿದೆ.
ಈ ಆದೇಶವನ್ನು ಆರ್ಥಿಕ ಇಲಾಖೆಯ ಟಿಪ್ಪಣಿ ಸಂಖ್ಯೆ:ಆಇ 323 ವೆಚ್ಚ-8/2022, ದಿನಾಂಕ: 15.05.2025 ರಲ್ಲಿ ನೀಡಿರುವ ಸಹಮತಿ ಮೇರೆಗೆ ಹೊರಡಿಸಿದೆ.
ಇದನ್ನು ನೋಡಿ….
Pension calculation: ನಿವೃತ್ತಿ ವೇತನ ಸೌಲಭ್ಯಗಳ ಲೆಕ್ಕಚಾರಗಳು