ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ವಿಸ್ತರಿಸುವ ಕುರಿತು.

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ವಿಸ್ತರಿಸುವ ಕುರಿತು.

ಪರಿಶಿಷ್ಟ ಜಾತಿಯ ಸಮಗ್ರ ಸಮೀಕ್ಷೆ-2025 ರ ಸಮೀಕ್ಷಾ ಕಾರ್ಯಾವಧಿಯನ್ನು ವಿಸ್ತರಿಸುವ ಕುರಿತು ಆದೇಶ

ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ, ಪರಿಶಿಷ್ಟ ಜಾತಿಯಲ್ಲಿನ 101 ಜಾತಿಗಳ ವೈಜ್ಞಾನಿಕ ವರ್ಗೀಕರಣ ಮಾಡಲು ದತ್ತಾಂಶವನ್ನು (Emperical Data) ಸಂಗ್ರಹಿಸುವ ಕುರಿತು

ದಿನಾಂಕ: 05-05-2025 ರಿಂದ ಸಮೀಕ್ಷಾ ಕಾರ್ಯವನ್ನು ರಾಜ್ಯಾದ್ಯಂತ ಈಗಾಗಲೇ ಪ್ರಾರಂಭಿಸಲಾಗಿರುತ್ತದೆ.

ಬಿಬಿಎಂಪಿ ವ್ಯಾಪ್ತಿಯ ವಲಯಗಳಲ್ಲಿ ಮಳೆ/ಹವಾಮಾನ ವೈಪರೀತ್ಯ ಕಾರಣಗಳಿಂದಾಗಿ, ಪರಿಶಿಷ್ಟ ಜಾತಿ ಜನಾಂಗದ ಸಮೀಕ್ಷೆ ಕಾರ್ಯವು ನಿರೀಕ್ಷಿತ ಮಟ್ಟದಲ್ಲಿ ಪೂರ್ಣಗೊಂಡಿರುವುದಿಲ್ಲವೆಂದು ತಿಳಿಸಿ ಸಮೀಕ್ಷಾ ಅವಧಿಯನ್ನು ವಿಸ್ತರಿಸುವಂತೆ ವಿವಿಧ ಸಂಘ-ಸಂಸ್ಥೆಗಳ ಮುಖಂಡರುಗಳು ಉಲ್ಲೇಖ (2) ರ ಸಭೆಯಲ್ಲಿ ವಿನಂತಿಸಿರುತ್ತಾರೆ ಹಾಗೂ ಉಲ್ಲೇಖಿತ ಪತ್ರಗಳಲ್ಲಿ ರಾಜ್ಯದ ವಿವಿಧ ಜಿಲ್ಲೆಗಳಲ್ಲಿಯೂ ಕೂಡ ಸಮೀಕ್ಷಾ ಅವಧಿಯನ್ನು ವಿಸ್ತರಿಸಬೇಕಾಗಿ ಕೋರಿರುತ್ತಾರೆ.

ಈ ಹಿನ್ನೆಲೆಯಲ್ಲಿ ಪರಿಶಿಷ್ಟ ಜಾತಿಯ ಜನರೆಲ್ಲರೂ ಸಮೀಕ್ಷಾ ಕಾರ್ಯದಲ್ಲಿ ಭಾಗವಹಿಸಲು ಅನುವಾಗುವಂತೆ ಈ ಕೆಳಕಂಡ ವಿಧಾನದ ಮೂಲಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳಲು ಸಮೀಕ್ಷೆಯ ದಿನಾಂಕವನ್ನು ವಿಸ್ತರಿಸಲು ನಿರ್ಣಯಿಸಲಾಗಿದೆ.

1) ವಿಶೇಷ ಶಿಬಿರ (ಸಮೀಕ್ಷಾ ಬ್ಯಾಕ್ ವ್ಯಾಪ್ತಿಯಲ್ಲಿ) – ದಿನಾಂಕ: 02-06-2025 ರಿಂದ ದಿನಾಂಕ: 08-06-2025 ರವರೆಗೆ ವಿಸ್ತರಿಸಿದೆ.

2) ಆನ್ ಲೈನ್ ಮೂಲಕ ಸ್ವಯಂ ಘೋಷಣೆ, ದಿನಾಂಕ: 08-06-2025 ರವರೆಗೆ ಮುಂದುವರೆಯಲಿದೆ.

ಗಣತಿದಾರರು ರಜಾ ದಿನಗಳಲ್ಲಿಯೂ ಸಹ ಸಮೀಕ್ಷಾ ಬ್ಲಾಕ್ ನ ವಿಶೇಷ ಶಿಬಿರಗಳಲ್ಲಿ ಕಾರ್ಯನಿರ್ವಹಿಸಿ ಸಮೀಕ್ಷೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಲು ಈ ಕುರಿತು ನಿರ್ದೇಶನ.

 

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!