Scholarship: ತಂದೆಯಿಲ್ಲದ ಮಕ್ಕಳ ಖಾತೆಗೆ ಸ್ಕಾಲರ್ಶಿಪ್! ನಿರ್ದಿಷ್ಟ ಮಾನದಂಡಗಳು ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.

Scholarship: ತಂದೆಯಿಲ್ಲದ ಮಕ್ಕಳ ಖಾತೆಗೆ ಸ್ಕಾಲರ್ಶಿಪ್, ನಿರ್ದಿಷ್ಟ ಮಾನದಂಡಗಳು ಏನು? ಇಲ್ಲಿದೆ ಸಂಪೂರ್ಣ ಮಾಹಿತಿ..

 Fact check

 

“ತಂದೆಯಿಲ್ಲದ ಮಕ್ಕಳ ಖಾತೆಗೆ ವರ್ಷಕ್ಕೆ 24000/- ಸ್ಕಾಲರ್‌ಪ್ ಸೌಲಭ್ಯವಿದ್ದು, ಜನಸಾಮಾನ್ಯರಿಗೆ ಈ ವಿಚಾರ ತಿಳಿದೆ ಇಲ್ಲ. ಆದುದರಿಂದ ತಮಗೆ ಗೊತ್ತಿರುವ ಯಾರಾದರೂ ತಂದೆ ಇಲ್ಲದ ಮಕ್ಕಳಿದ್ದಲ್ಲಿ ಅವರ ಪೋಷಕರಿಗೆ ಕೂಡಲೇ ಅರ್ಜಿ ಸಲ್ಲಿಸಲು ತಿಳಿಸಿ ಎಂದು ಅಧಿಕೃತ ಸಹಿ ಇಲ್ಲದ ಅರ್ಜಿಯು ಸಾಮಾಜಿಕ ಜಾಲತಾಣಗಳ ಮುಖಾಂತರ ಹರಿದಾಡುತ್ತಿರುವ “ಸುಳ್ಳು ಸುದ್ದಿ” ಸಾರ್ವಜನಿಕರನ್ನು ಗೊಂದಲಕ್ಕೀಡು ಮಾಡಿದ್ದು ಸಾರ್ವಜನಿಕರು ವಿವಿಧ ಕಛೇರಿಗಳಿಗೆ ಅರ್ಜಿಗಾಗಿ ಅಲೆದಾಡುತ್ತಿರುವುದು ಕಂಡುಬಂದಿರುತ್ತದೆ”. ಕೇಂದ್ರ ಪುರಸ್ಕೃತ ಪ್ರಾಯೋಜಕತ್ವ ಯೋಜನೆಯು ಎಲ್ಲಾ ತಂದೆ ಇಲ್ಲದ ಮಕ್ಕಳಿಗೆ ಅನ್ವಯವಾಗುವುದಿಲ್ಲ. ಈ ಯೋಜನೆಯ ಬಗ್ಗೆ ಸರಿಯಾಗಿ ಅರಿತುಕೊಳ್ಳಬೇಕು. ಸದರಿ ಯೋಜನೆಯಲ್ಲಿ ಫಲಾನುಭವಿಯಾಗಲು ನಿರ್ದಿಷ್ಟ ಮಾನದಂಡಗಳಿದ್ದು ಅವು ಈ ಕೆಳಗಿನಂತಿವೆ.

ಮಾನದಂಡಗಳು ಏನೇನು?

1.ಮಕ್ಕಳ ಪಾಲನಾ ಸಂಸ್ಥೆಗಳಿಂದ (ಬಾಲಕರ/ಬಾಲಕಿಯರ ಬಾಲಮಂದಿರ ಮತ್ತು ವೀಕ್ಷಣಾಲಯ) ಹೊರಹೋಗಿ ವಿದ್ಯಾಭ್ಯಾಸ ಮುಂದುವರೆಸುತ್ತಿರುವ ಮಕ್ಕಳು.

2.ಇಬ್ಬರೂ ಪೋಷಕರನ್ನು ಕಳೆದುಕೊಂಡ ಮಕ್ಕಳು ಅನಾಥರಾಗಿದ್ದರೆ ಹಾಗೂ ವಿಸ್ತೃತ ಕುಟುಂಬದಲ್ಲಿ ಜೀವಿಸುತ್ತಿದ್ದರೆ.

3.ಕಾರಾಗೃಹದಲ್ಲಿರುವ ಪೋಷಕರ ಮಕ್ಕಳು

4.ಕಾನೂನಿನೊಂದಿಗೆ ಸಂಘರ್ಷಕ್ಕೊಳಪಟ್ಟ ಮಕ್ಕಳು

5.ಪಿಎಂ ಕೇರ್ ಫಾರ್ ಚಿಲ್ಡ್ರನ್ ಯೋಜನೆಯಡಿ ಬರುವ ಮಕ್ಕಳು

6.ಪೋಷಕರು ಗಂಭೀರ ಸ್ವರೂಪದ ಕಾಯಿಲೆಯ (ಮಾರಣಾಂತಿಕ ಕಾಯಿಲೆ) ಸಂತ್ರಸ್ಥರ ಮಕ್ಕಳು

7.ಪೋಕ್ಸೋ ಸಂತ್ರಸ್ಥ ಮಕ್ಕಳು, ಬಾಲಸ್ವರಾಜ್ ಪೋರ್ಟಲ್‌ನಲ್ಲಿ ನೋಂದಾಯಿಸಿದ ಮಕ್ಕಳು

8.ಯಾವುದೇ ನೈಸರ್ಗಿಕ ವಿಕೋಪಕ್ಕೆ ಒಳಗಾದವರು, ಬಾಲ ಕಾರ್ಮಿಕರು, ಬಾಲ್ಯ ವಿವಾಹ ಸಂತ್ರಸ್ತ ಮಕ್ಕಳು,ಕಳ್ಳ ಸಾಗಾಣೆಗೊಳಗಾದ ಮಕ್ಕಳು, HIV/AIDS ಬಾಧಿತ (ಪೀಡಿತ) ಮಕ್ಕಳು, ದೈಹಿಕ ಅಂಗವಿಕಲತೆಯುಳ್ಳ ಮಕ್ಕಳು, ಅಥನಾ ನಿಂದನೆ ಅಥವಾ ಬೆಂಬಲ ಮತ್ತು ಪುನರ್ವಸತಿ ಆಗತ್ಯವಿರುವ ಶೋಷಿತ ಮಕ್ಕಳು, ನಿರ್ಗತಿಕರಾಗುವುದು.

ಸಂಕಷ್ಟಕ್ಕೆ ಈಡಾಗುವ ಸಂಭವವಿರುವ ಕುಟುಂಬದ ತಾಯಿ ಕುಟುಂಬದಿಂದ ಪರಿತ್ಯಜಿಸಲ್ಪಟ್ಟಿದ್ದರೆ ಅಥವಾ ವಿಧವೆ, ವಿಚ್ಛೇದಿತೆ ಮಗು ಜೈವಿಕ ಕುಟುಂಬದಲ್ಲೇ (ವಿಸ್ತೃತ ಕುಟುಂಬ ಹಾಗೂ ರಕ್ತ ಸಂಬಂಧ ಒಳಗೊಂಡಂತೆ) ಮುಂದುವರೆಯುವ ಮಕ್ಕಳು.

CLICK HERE TO MORE INFORMATION

1 thought on “Scholarship: ತಂದೆಯಿಲ್ಲದ ಮಕ್ಕಳ ಖಾತೆಗೆ ಸ್ಕಾಲರ್ಶಿಪ್! ನಿರ್ದಿಷ್ಟ ಮಾನದಂಡಗಳು ಏನು? ಇಲ್ಲಿದೆ ಸಂಪೂರ್ಣ ಮಾಹಿತಿ.”

Leave a Comment