Teacher Transfer-2024-25 ಶಿಕ್ಷಕರ ವರ್ಗಾವಣೆ ಪರಿಷ್ಕೃತ ವೇಳಾಪಟ್ಟಿ ಪ್ರಕಟ.
Teacher Transfer-2024-25: 2024-25ನೇ ಸಾಲಿನ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಹಾಗೂ ಮುಖ್ಯೋಪಾಧ್ಯಾಯರು ಮತ್ತು ಸರ್ಕಾರಿ ಪ್ರೌಢಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಗಳನ್ನು ಹಮ್ಮಿಕೊಳ್ಳುವ ಬಗ್ಗೆ ಪರಿಷ್ಕೃತ ವೇಳಾಪಟ್ಟಿ ಪ್ರಕಟಿಸುವ ಬಗ್ಗೆ.
ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ಅಧಿನಿಯಮ-2020 [2020ರ ಕರ್ನಾಟಕ ಅಧಿನಿಯಮ ಸಂಖ್ಯೆ:04] ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು [ಶಿಕ್ಷಕರ ವರ್ಗಾವಣೆ ನಿಯಂತ್ರಣ] ನಿಯಮಗಳು-2020ರ ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ ಮತ್ತು ನಿಯಮಗಳು-2022ರ ಪ್ರಕಾರ ಶಾಲಾ ಶಿಕ್ಷಣ ಇಲಾಖೆಯ ಸರ್ಕಾರಿ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯರನ್ನು ಒಳಗೊಂಡಂತೆ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕ ವೃಂದ/ತತ್ಸಮಾನ ವೃಂದದ ಶಿಕ್ಷಕರು ಮತ್ತು ಸರ್ಕಾರಿ ಪ್ರೌಢ ಶಾಲಾ ಸಹ ಶಿಕ್ಷಕರು/ತತ್ಸಮಾನ ವೃಂದ, ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿಶೇಷ ಶಿಕ್ಷಕರು ಹಾಗೂ ಸರ್ಕಾರಿ ಪ್ರೌಢ ಶಾಲಾ ಮುಖ್ಯಶಿಕ್ಷಕರು/ತತ್ಸಮಾನ ವೃಂದದ ಅಧಿಕಾರಿಗಳಿಗೆ ಸಾಮಾನ್ಯ ವರ್ಗಾವಣೆ ಪ್ರಕ್ರಿಯೆಗೆ ವರ್ಗಾವಣಾ ನಿಯಮ-2020ರ ನಿಯಮ-6 ರಲ್ಲಿ ನಿಗದಿಪಡಿಸಿರುವಂತೆ ವರ್ಗಾವಣೆ(ಅನುಸೂಚಿ) ವಿಸ್ತ್ರತವಾದ ಮಾರ್ಗಸೂಚಿಗಳನ್ನೊಳಗೊಂಡಂತೆ ವೇಳಾಪಟ್ಟಿಯನ್ನು ಉಲ್ಲೇಖಿತ ಅಧಿಸೂಚನೆಯಂತೆ ಹೊರಡಿಸಲಾಗಿತ್ತು. ಕೆಲವು ತಾಂತ್ರಿಕ ಮತ್ತು ಆಡಳಿತಾತ್ಮಕ ಕಾರಣಗಳಿಂದ ವೇಳಾಪಟ್ಟಿಯನ್ನು ಉಲ್ಲೇಖಿತ ಪತ್ರದಲ್ಲಿ ಸೂಚಿಸಿರುವಂತೆ ಈ ಕೆಳಕಂಡ ಅನುಬಂಧ-2 ರಲ್ಲಿರುವಂತೆ ಪರಿಷ್ಕರಿಸಿದೆ. ಉಳಿದಂತೆ ಉಲ್ಲೇಖಿತ ವರ್ಗಾವಣಾ ಅಧಿಸೂಚನೆಯಲ್ಲಿರುವ ಎಲ್ಲಾ ಅನುಬಂಧ-1 ರಲ್ಲಿನ ಎಲ್ಲಾ ಮಾರ್ಗಸೂಚಿ ಅಂಶಗಳು ಯಥಾವತ್ತಾಗಿ ಮುಂದುವರೆಯುತ್ತವೆ. ಈ ಪರಿಷ್ಕೃತ ವೇಳಾಪಟ್ಟಿಯ ಜೊತೆಯಲ್ಲಿ ಸದರಿ ಮಾರ್ಗಸೂಚಿ ಅಂಶಗಳನ್ನು ಓದಿಕೊಳ್ಳತಕ್ಕದ್ದು.
▪️2024-25 ನೇ ಸಾಲಿನ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ ದಿನಾಂಕಗಳು
▪️ವರ್ಗಾವಣೆಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ 5/7/25
▪️ಹೆಚ್ಚುವರಿ ಶಿಕ್ಷಕರ ಕರಡು ಪಟ್ಟಿ ಬಿಡುಗಡೆ-2/7/25
▪️ಹೆಚ್ಚುವರಿ ಪಟ್ಟಿಗೆ ಆಕ್ಷೇಪಣೆ, ಆದ್ಯತೆ, & ವಿನಾಯತಿ ಸಲ್ಲಿಸಲು ಕೊನೆಯ ದಿನಾಂಕ 5/7/25
▪️ಹೆಚ್ಚುವರಿ ಶಿಕ್ಷಕರ ಮರು ಹೊಂದಾಣಿಕೆ ಕೌನ್ಸೆಲಿಂಗ್ 15/7/25
▪️5 ವರ್ಷ ಪೂರ್ಣ ಗೊಳಿಸಿದ ನಿರ್ಧಿಷ್ಟ ಪಡಿಸಿದ ಹುದ್ದೆಗಳ ಶಿಕ್ಷಕರ ವರ್ಗಾವಣೆ ಕೌನ್ಸೆಲಿಂಗ್ 21/7/25
▪️ಜಿಲ್ಲೆಯೊಳಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ 24/7/25 ರಿಂದ ಪ್ರಾರಂಭ
▪️ವಿಭಾಗದೊಳಗಿನ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ 01/08/25 ರಿಂದ ಪ್ರಾರಂಭ
▪️ವಿಭಾಗದ ಹೊರಗೆ ಕೋರಿಕೆ ವರ್ಗಾವಣೆ ಕೌನ್ಸೆಲಿಂಗ್ 13/08/25 ರಿಂದ ಪ್ರಾರಂಭ.





(*** ವೇಳಾಪಟ್ಟಿಯು ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಬದಲಾವಣೆಗೆ ಒಳಪಟ್ಟಿರುತ್ತದೆ.)
ಸರ್ಕಾರದ ಅಧಿಸೂಚನೆ ಹಾಗೂ ಕರ್ನಾಟಕ ರಾಜ್ಯ ಸಿವಿಲ್ ಸೇವೆಗಳು(ಶಿಕ್ಷಕರ ವರ್ಗಾವಣೆ ನಿಯಂತ್ರಣ) ಕಾಯ್ದೆ ಮತ್ತು ನಿಯಮಗಳು-2020 ಹಾಗೂ ವರ್ಗಾವಣಾ ತಿದ್ದುಪಡಿ ಕಾಯ್ದೆ-ನಿಯಮಗಳು-2022ರ ಹಾಗೂ ಇಲಾಖಾ ಕಾಲ ಕಾಲಕ್ಕೆ ಹೊರಡಿಸಿರುವ ಆದೇಶಗಳನ್ನು ಸ್ಪಷ್ಟವಾಗಿ ಅರ್ಥೈಸಿಕೊಂಡು, ಪ್ರಸ್ತಾಪಿತ ವರ್ಗಾವಣಾ ಪ್ರಕ್ರಿಯೆಗಳನ್ನು ಯಾವುದೇ ಲೋಪದೋಷಗಳಿಗೆ ಎಡೆಮಾಡಿಕೊಡದಂತೆ ಸಕ್ಷಮ ವರ್ಗಾವಣಾ ಪ್ರಾಧಿಕಾರಿಗಳು ಬಹಳ ಎಚ್ಚರಿಕೆಯಿಂದ ಕಾರ್ಯನಿರ್ವಹಿಸಲು ತಿಳಿಸಿದೆ.
CLICK HERE TO REVISED TIME TABLE