Free Coaching-2025-26: ವಿವಿಧ ಸ್ಪರ್ಧಾತ್ಮಕ ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಅರ್ಜಿ ಆಹ್ವಾನ ಪ್ರಕಟಣೆ
Free Coaching-2025-26: 2025-26ನೇ ಸಾಲಿಗೆ ಅಲ್ಪಸಂಖ್ಯಾತರ ನಿರ್ದೇಶನಾಲಯದ ವತಿಯಿಂದ UPSC/KAS ಗೆಜೆಟೆಡ್ ಪ್ರೊಬೇಷನರ್ ವಸತಿಯುತ ತರಬೇತಿಯನ್ನು ಬೆಂಗಳೂರಿನ ಹಜ್ ಭವನದಲ್ಲಿ ಹಾಗೂ KPSC ಗ್ರೂಫ್ ‘ಸಿ’, RRB & SSC ಪರೀಕ್ಷಾ ಪೂರ್ವ ತರಬೇತಿಯನ್ನು ಪ್ರತಿಷ್ಠಿತ ಸಂಸ್ಥೆಗಳ ಮೂಲಕ ನೀಡಲಾಗುತ್ತಿದ್ದು, ಸದರಿ ತರಬೇತಿಗೆ ಅರ್ಹ ಅಲ್ಪಸಂಖ್ಯಾತರ ಸಮುದಾಯದ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಅರ್ಹತೆ:
▪️ಅಭ್ಯರ್ಥಿಯು ಕರ್ನಾಟಕ ರಾಜ್ಯದ ನಿವಾಸಿಯಾಗಿರಬೇಕು.
▪️ಅಲ್ಪಸಂಖ್ಯಾತರ ಸಮುದಾಯಕ್ಕೆ ಸೇರಿದವರಾಗಿರಬೇಕು (ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಬೌದ್ಧ, ಸಿಖ್ ಮತ್ತು ಪಾರ್ಸಿ).
▪️ಅಭ್ಯರ್ಥಿಯು ಸರ್ಕಾರದಿಂದ ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದಿಂದ ಪದವಿ ಹೊಂದಿರಬೇಕು.
ಅಭ್ಯರ್ಥಿಯ ವಯೋಮಿತಿ:
▪️UPSC/KAS ಗೆಜೆಟೆಡ್ ಪ್ರೊಬೇಷನರ್, KPSC ಗ್ರೂಫ್ ‘ಸಿ’ ತರಬೇತಿಗೆ ಕನಿಷ್ಠ 21 ಹಾಗೂ ಗರಿಷ್ಠ 35 ವರ್ಷಗಳು ಮತ್ತು RRB & SSC ತರಬೇತಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 30 ವರ್ಷಗಳು ಮೀರಿರಬಾರದು. (ಅರ್ಜಿ ಸಲ್ಲಿಸುವ ಅಂತಿಮ ದಿನಾಂಕದೊಳಗೆ).
▪️ಕೇಂದ್ರ ಮತ್ತು ರಾಜ್ಯ ಸರ್ಕಾರದ ನೌಕರಿಯಲ್ಲಿರುವ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
▪️ಹಿಂದಿನ ಸಾಲಿನಲ್ಲಿ IAS/KAS ತರಬೇತಿ ಪಡೆದ ಅಭ್ಯರ್ಥಿಗಳು ಅರ್ಹರಿರುವುದಿಲ್ಲ.
▪️ಅರ್ಜಿದಾರರಿಗೆ ಸೂಚನೆಗಳು:
ಅರ್ಜಿದಾರರು https://sevasindhu.karnataka.gov.in/sevasindhu/departmentservices ಈ ಲಿಂಕ್ ಮೂಲಕ ಆನ್‌ಲೈನ್‌ನಲ್ಲಿ ಅರ್ಜಿ ಸಲ್ಲಿಸಲು ಸೂಚಿಸಲಾಗಿದೆ.
▪️ಆನ್‌ಲೈನ್‌ನಲ್ಲಿ ಅರ್ಜಿಯನ್ನು ಭರ್ತಿ ಮಾಡಲು ವಿವರವಾದ ಸೂಚನೆಗಳು/ವಿಧಾನಗಳು/https://dom.karnataka.gov.in ಇಲ್ಲಿ ಲಭ್ಯವಿದೆ.
ಸಮಯಾವಕಾಶ:
▪️ಅರ್ಜಿ ಸಲ್ಲಿಸಲು ಪ್ರಾರಂಭದ ದಿನಾಂಕ: 02.07.2025.
▪️ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 02,08.2025.
▪️ಹೆಚ್ಚಿನ ಮಾಹಿತಿಗಾಗಿ ಸಂಬಂಧಪಟ್ಟ ಜಿಲ್ಲಾ ಕಛೇರಿ, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ಹಾಗೂ ಅಲ್ಪಸಂಖ್ಯಾತರ ಸಹಾಯವಾಣಿ ಸಂಖ್ಯೆ: 8277799990 ಇವರನ್ನು ಸಂಪರ್ಕಿಸಬಹುದು.
CLICK HERE TO MORE INFORMATION