Election duty: ಚುನಾವಣೆ ಕಾರದಿಂದ ಶಿಕ್ಷಕರಿಗಿಲ್ಲ ವಿನಾಯ್ತಿ
Election duty: ಚುನಾವಣೆ ಕಾರದಿಂದ ಶಿಕ್ಷಕರಿಗಿಲ್ಲ ವಿನಾಯ್ತಿ: ಸುಪ್ರೀಂಕೋರ್ಟ್ ಆದೇಶ ಉಲ್ಲೇಖಿಸಿದ ಆಯೋಗ.
ಚುನಾವಣಾ ಕಾರ್ಯಗಳಿಂದ ಶಿಕ್ಷಕರಿಗೆ ವಿನಾಯಿತಿ ಇಲ್ಲ ಎಂದು ರಾಜ್ಯದ ಮುಖ್ಯ ಚುನಾವಣಾಧಿಕಾರಿ ಸ್ಪಷ್ಟಪಡಿಸಿದ್ದಾರೆ.
ಮತಪಟ್ಟಿ ಪರಿಷ್ಕರಣೆ ಹಾಗೂ ಚುನಾವಣಾ ಕಾರ್ಯಗಳಿಗೆ ನಿಯೋಜಿಸಿರುವ ಕಾರ್ಯಗಳಿಗೆ ಶಿಕ್ಷಕರನ್ನು ಕರ್ತವ್ಯದ ಜವಾಬ್ದಾರಿಯಿಂದ ಬಿಡುಗಡೆ ಮಾಡಬೇಕು. ಜತೆಗೆ ಭವಿಷ್ಯದಲ್ಲಿ ಶಿಕ್ಷಕರನ್ನು ಚುನಾವಣಾ ಕಾರ್ಯಕ್ಕೆ ನಿಯೋಜಿಸಿಕೊಳ್ಳಬಾರದು ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಪ್ರಧಾನ ಕಾರ್ಯದರ್ಶಿ ಮನವಿ ಮಾಡಿ ಮುಖ್ಯ ಚುನಾವಣಾಧಿಕಾರಿಗಳಿಗೆ ಪತ್ರ ಬರೆದಿದ್ದರು.
ಈ ಪತ್ರಕ್ಕೆ ಪ್ರತಿಕ್ರಿಯಿಸಿರುವ ಜಂಟಿ ಮುಖ್ಯ ಚುನಾವಣಾಧಿಕಾರಿ ಎಸ್. ಯೋಗೇಶ್ವರ, ಶಿಕ್ಷಕರನ್ನು ಬೂತ್ ಮಟ್ಟದ ಅಧಿಕಾರಿಗಳನ್ನಾಗಿ ನೇಮಕ ಮಾಡಲು ಸುಪ್ರೀಂಕೋರ್ಟ್ ನೀಡಿರುವ ಆದೇಶ ಹಾಗೂ ಭಾರತ ಚುನಾವಣಾ ಆಯೋಗ ಹೊರಡಿಸಿರುವ ನಿರ್ದೇಶನಗಳಲ್ಲಿ ಅವಕಾಶವಿದೆ.
ಅಲ್ಲದೆ, ಯಾವುದೇ ದಿನ ಅಥವಾ ಯಾವುದೇ ಸಮಯದಲ್ಲಿ ಕರ್ತವ್ಯಕ್ಕೆ ನಿಯೋಜಿಸಬಹುದಾಗಿದೆ. ಈ ಸಂಬಂಧದ ಆದೇಶವನ್ನು ಲಗತ್ತಿಸಲಾಗಿದೆ.ನಿಯೋಜನೆಗೆ ಸುಪ್ರೀಂ ಕೋರ್ಟ್ ಆದೇಶವಿರುವುದರಿಂದ ವಿನಾಯಿತಿ ನೀಡಲು ಸಾಧ್ಯವಿಲ್ಲವೆಂದು ತಿಳಿಸಿದ್ದಾರೆ.