Teacher transfer-2025 ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ ಶೀಘ್ರ
Teacher transfer-2025 ಶಿಕ್ಷಕರ ವರ್ಗಾವಣೆ ಪ್ರಕ್ರಿಯೆ ಪರಿಷ್ಕೃತ ವೇಳಾಪಟ್ಟಿ ಶೀಘ್ರ: ಸರ್ಕಾರಿ ಶಾಲೆ ಹಾಗೂ ಪ್ರೌಢಶಾಲಾ ಶಿಕ್ಷಕರ ವರ್ಗಾವಣೆ ಪ್ರಕ್ರಿಯೆಗೆ ಮತ್ತೊಮ್ಮೆ ಪರಿಷ್ಕೃತ ವೇಳಾಪಟ್ಟಿಯನ್ನು ಪ್ರಕಟಿಸುವುದಾಗಿ ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಈ ನಿಟ್ಟಿನಲ್ಲಿ ಶಾಲಾ ಮುಖ್ಯೋಪಾಧ್ಯಾಯರು, ಶಿಕ್ಷಕರು, ತತ್ಸಮಾನ ವೃಂದ, ಪ್ರೌಢಶಾಲೆ ಶಿಕ್ಷಕರು ಸೇರಿ ದೈಹಿಕ ಶಿಕ್ಷಣ ಶಿಕ್ಷಕರು ಮತ್ತು ವಿವಿಧ ವೃಂದದ ಅಧಿಕಾರಿಗಳ ಸಾಮಾನ್ಯ ವರ್ಗಾವಣೆಯ ವಿಸ್ತ್ರತ ಮಾರ್ಗಸೂಚಿಯನ್ನು ಶೀಘ್ರದಲ್ಲೇ ಪ್ರಕಟಿಸಲಾಗುವುದು ಎಂದು ಶಾಲಾ ಶಿಕ್ಷಣ ಇಲಾಖೆ ತಿಳಿಸಿದೆ.
ಜೂ.19ರಂದು ಪರಿಷ್ಕೃತ ವೇಳಾಪಟ್ಟಿ ಹೊರಡಿಸಲಾಗಿತ್ತು. ಆದರೆ, ಕೆಲ ಆಡಳಿತಾತ್ಮಕ ಮತ್ತು ತಾಂತ್ರಿಕ ಕಾರಣಗಳಿಂದ ಸದರಿ ವೇಳಾಪಟ್ಟಿಯನ್ನು ಮತ್ತೆ ಪರಿಷ್ಕರಿಸಲಾಗುತ್ತದೆ. ಈ ಪರಿಷ್ಕೃತ ವೇಳಾಪಟ್ಟಿಯನ್ನು ಸದ್ಯದಲ್ಲೇ ಬಿಡುಗಡೆ ಮಾಡುವುದಾಗಿ ಪ್ರಾಥಮಿಕ ಶಿಕ್ಷಣ ಹಾಗೂ ಪ್ರೌಢ ಶಿಕ್ಷಣ ಇಲಾಕೆಯ ನಿರ್ದೇಶಕರು ಜಂಟಿಯಾಗಿ ಹೊರಿಸಿರುವ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.