VILLAGE ADMINISTRATIVE OFFICER RECRUITMENT-2024, Use direct link to download recruitment study resource.

 

ಕಂದಾಯ ಇಲಾಖೆಯಲ್ಲಿ ಖಾಲಿ ಇರುವಂತಹ 1000 ಗ್ರಾಮ ಆಡಳಿತಾಧಿಕಾರಿ ಹುದ್ದೆಗಳ ನೇಮಕಾತಿಗೆ ಆನ್ ಲೈನ್ ಮೂಲಕ ಅರ್ಜಿಯನ್ನು ಕರ್ನಾಟಕ ಪರೀಕ್ಷಾ ಪ್ರಾಧಿಕಾರದ ಮೂಲಕ ಆಹ್ವಾನಿಸಲಾಗಿದ್ದು, ಸದರಿ ಪರೀಕ್ಷೆಗೆ ಸಂಬಂಧಿಸಿದಂತೆ ಕೆಲ ಉಪಯುಕ್ತ ಅಧ್ಯಯನ ಸಂಪನ್ಮೂಲವನ್ನು ಸ್ಪರ್ಧಾರ್ಥಿಗಳಿಗೆ ಇಲ್ಲಿ ಒದಗಿಸಲಾಗಿದ್ದು ಇದರ ಬಳಕೆಯನ್ನು ಮಾಡಿಕೊಳ್ಳಬಹುದಾಗಿದೆ.

ಸ್ಪರ್ಧಾತ್ಮಕ ಪರೀಕ್ಷಾ ವಿಧಾನ:

VAO ಹುದ್ದೆಗಳಿಗೆ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್-ಒಎಂಆರ್ ಮಾದರಿ (Offline-OMR type) ಮೂಲಕ ಪರೀಕ್ಷೆ ನಡೆಸಲಾಗುವುದು.

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆ:

ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯು ಬಹು ಆಯ್ಕೆ ಮಾದರಿ ಪತ್ರಿಕೆಯಾಗಿದ್ದು, ಗರಿಷ್ಠ 150 ಅಂಕಗಳನ್ನು ಒಳಗೊಂಡಿರುತ್ತದೆ ಮತ್ತು ಅಭ್ಯರ್ಥಿಗಳು ಇದರಲ್ಲಿ ಅರ್ಹತೆ ಗಳಿಸಲು ಕನಿಷ್ಠ 50 ಅಂಕಗಳನ್ನು ಗಳಿಸತಕ್ಕದ್ದು, ಕನಿಷ್ಠ 50 ಅಂಕಗಳನ್ನು ಗಳಿಸದ ಅಭ್ಯರ್ಥಿಗಳು ಆಯ್ಕೆಗೆ ಅರ್ಹರಾಗುವುದಿಲ್ಲ.
(ಕಡ್ಡಾಯ ಕನ್ನಡ ಭಾಷಾ ಪರೀಕ್ಷೆಯಲ್ಲಿ ಪಡೆದ ಅಂಕಗಳನ್ನು ಹುದ್ದೆಗಳ ಆಯ್ಕೆಗೆ ಪರಿಗಣಿಸುವುದಿಲ್ಲ).

ಪತ್ರಿಕೆ-1:

ಎ) ಪ್ರಚಲಿತ ಘಟನೆಗಳಿಗೆ ಸಂಬಂಧಿಸಿದ ಸಾಮಾನ್ಯ ಜ್ಞಾನದ ವಿಷಯಗಳು.

(ಬಿ) ದೈನಂದಿನ ಗ್ರಹಿಕೆಯ ವಿಷಯಗಳು

(ಸಿ) ಭಾರತದ ಸಂವಿಧಾನದ ಸ್ಕೂಲ ನೋಟದ ವಿಷಯಗಳು.

(ಡಿ) ವಿಶೇಷವಾಗಿ ಕರ್ನಾಟಕ್ಕೆ ಸಂಬಂಧಿಸಿದ ಭಾರತದ ಇತಿಹಾಸ.

(ಇ) ಕರ್ನಾಟಕ್ಕೆ ಸಂಬಂಧಿಸಿದಂತೆ ಭಾರತದ ಭೂಗೋಳ ವಿಷಯಗಳು.

(ಎಫ್) ರಾಜ್ಯ ಮತ್ತು ಪ್ರಾದೇಶಿಕ ಆಡಳಿತ ಕುರಿತ ವಿಷಯಗಳು.

(ಜಿ) ಗ್ರಾಮೀಣಾಭಿವೃದ್ಧಿ ಪಂಚಾಯತ್‌ ರಾಜ್ ಸಂಸ್ಥೆಗಳು ಮತ್ತು ಗ್ರಾಮೀಣ ಸಹಕಾರ ಸಂಸ್ಥೆಗಳಿಗೆ ಸಂಬಂಧಿಸಿದ ಉಪಕ್ರಮಗಳನ್ನು ಒಳಗೊಂಡಂತೆ ಕರ್ನಾಟಕ ಆರ್ಥಿಕತೆಯ ಅಭಿವೃದ್ಧಿ ಕುರಿತ ವಿಷಯಗಳು.

(ಎಚ್) ಕರ್ನಾಟಕದ ಪರಿಸರ ಸಂಬಂಧಿ ಸಮಸ್ಯೆಗಳು ಮತ್ತು ಅಭಿವೃದ್ಧಿ ಕುರಿತ ವಿಷಯಗಳು.

ಪತ್ರಿಕೆ-2:

(ಎ) ಸಾಮಾನ್ಯ ಕನ್ನಡ (ಬಿ) ಸಾಮಾನ್ಯ ಇಂಗ್ಲೀಷ್

(ಸಿ) ಕಂಪ್ಯೂಟರ್ ಜ್ಞಾನ

ಸ್ಪರ್ಧಾತ್ಮಕ ಪರೀಕ್ಷೆಗೆ ವಿವರವಾದ ವೇಳಾ ಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ನಂತರ ಪ್ರಕಟಿಸಲಾಗುವುದು.

ಸದರಿ ಹುದ್ದೆಗಳ ನೇಮಕಾತಿಗಳ ಸ್ಪರ್ಧಾತ್ಮಕ ಪರೀಕ್ಷೆಯನ್ನು ಆಫ್ ಲೈನ್-ಒಎಂಆರ್ ಮಾದರಿ (Offline OMR type) ಮೂಲಕ ಸ್ಪರ್ಧಾತ್ಮಕ ಪರೀಕ್ಷೆ ನಡೆಸಲಾಗುವುದು.

ಅಭ್ಯರ್ಥಿಯು ಅರ್ಹತೆಗಾಗಿ ಸ್ಪರ್ಧಾತ್ಮಕ ಪರೀಕ್ಷೆಯಲ್ಲಿನ ಒಟ್ಟು ಅಂಕಗಳಲ್ಲಿ ಕನಿಷ್ಠ ಶೇಕಡ 35 ರಷ್ಟು ಅಂಕಗಳನ್ನು ಗಳಿಸುವುದು ಕಡ್ಡಾಯವಾಗಿರುತ್ತದೆ.

ಋಣಾತ್ಮಕ ಮೌಲ್ಯಮಾಪನ (Negative Valuation)

ಸ್ಪರ್ಧಾತ್ಮಕ ಪರೀಕ್ಷೆ ಪ್ರಶ್ನೆ ಪತ್ರಿಕೆಗಳಲ್ಲಿನ ಪ್ರತಿಯೊಂದು ಪ್ರಶ್ನೆಗೂ 04 ಪರ್ಯಾಯ ಉತ್ತರಗಳಿದ್ದು, ಅಭ್ಯರ್ಥಿಯು ಯಾವುದಾದರೂ ಒಂದು ಸರಿ ಉತ್ತರವನ್ನು ಮಾತ್ರ ಆಯ್ಕೆ ಮಾಡತಕ್ಕದ್ದು. ಪ್ರತಿ ತಪ್ಪು ಉತ್ತರಕ್ಕೆ ನಾಲ್ಕನೇ ಒಂದಂಶ ದಷ್ಟು [¼ ]ಅಂಕಗಳನ್ನು ಕಳೆಯಲಾಗುವುದು. ಸ್ಪರ್ಧಾತ್ಮಕ ಪರೀಕ್ಷೆಯ ಪ್ರಶ್ನೆಪತ್ರಿಕೆಗಳು ಕನ್ನಡ ಮತ್ತು ಆಂಗ್ಲಭಾಷೆಗಳೆರಡರಲ್ಲೂ ಇರುತ್ತವೆ. ಕನ್ನಡ ಭಾಷೆಯಲ್ಲಿ ಪ್ರಶ್ನೆಗಳ ಭಾಷಾಂತರದಲ್ಲಿ ಏನಾದರೂ ವ್ಯತ್ಯಾಸ ಕಂಡುಬಂದಲ್ಲಿ ಅಭ್ಯರ್ಥಿಗಳು ಆಂಗ್ಲಭಾಷೆ ಪ್ರಶ್ನೆಗಳನ್ನು ನೋಡುವುದು ಹಾಗೂ ಇದೇ ಅಂತಿಮವಾಗಿರುತ್ತದೆ.

ಆದ್ದರಿಂದ ಸ್ಪರ್ಧಾರ್ಥಿಗಳು ಎಲ್ಲ ನಿಯಮಗಳನ್ನು ಮೊದಲು ಅರಿಯಬೇಕಾದದ್ದು ಮುಖ್ಯವಾಗಿದೆ.

ಅಧ್ಯಯನ ಸಂಪನ್ಮೂಲವನ್ನು ಒಂದೇ ಲಿಂಕ್ ದಲ್ಲಿ ಸಂಗ್ರಹಿಸಲಾಗಿದ್ದು ಬಳಸಿಕೊಳ್ಳಬಹುದು.

ಕಡ್ಡಾಯ ಕನ್ನಡ ಮಾದರಿ ಪ್ರಶ್ನೆ ಪತ್ರಿಕೆಗಳು- CLICK HERE

CLICK HERE TO DOWNLOAD STUDY MATERIALS

 

3 thoughts on “VILLAGE ADMINISTRATIVE OFFICER RECRUITMENT-2024, Use direct link to download recruitment study resource.”

Leave a Comment