NMMS EXAM-2025-26: 2025-26ನೇ ಸಾಲಿನ NMMS ಪರೀಕ್ಷೆಯ ಪೂರ್ವಸಿದ್ಧತೆ ಕುರಿತು.
NMMS EXAM-2025-26: 2025-26ನೇ ಸಾಲಿನ NMMS ಪರೀಕ್ಷೆಯ ಪೂರ್ವಸಿದ್ಧತೆ ಕುರಿತು: ಮೇಲ್ಕಂಡ ವಿಷಯ ಹಾಗೂ ಉಲ್ಲೇಖಕ್ಕೆ ಸಂಬಂಧಿಸಿದಂತೆ 2025-26ನೇ ಸಾಲಿನಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ NMMS ಪರೀಕ್ಷೆಯನ್ನು 2025 ರ ಡಿಸೆಂಬರ್ ಮಾಹೆಯಲ್ಲಿ ನಡೆಸಲು ಉದ್ದೇಶಿಸಲಾಗಿದೆ. ಅದರಂತೆ ಸದರಿ ಪರೀಕ್ಷೆಗೆ ಸೆಪ್ಟೆಂಬರ್ 2025ರ 2ನೇ ವಾರದಲ್ಲಿ ಅರ್ಜಿ ಆಹ್ವಾನಿಸಲಾಗುತ್ತಿದ್ದು, ಶಾಲಾ ಮುಖ್ಯಶಿಕ್ಷಕರು ತಮ್ಮ ಶಾಲೆಯ ಅರ್ಹ ವಿದ್ಯಾರ್ಥಿಗಳ ಅರ್ಜಿಗಳನ್ನು Online ಮೂಲಕ ಸಲ್ಲಿಸಬೇಕಾಗಿರುತ್ತದೆ. ಅರ್ಜಿ ಸಲ್ಲಿಕೆಗೆ ಸಂಬಂಧಿಸಿದ ಈ ಕೆಳಕಂಡ ಎಲ್ಲಾ ಮಾಹಿತಿ/ದಾಖಲೆಗಳನ್ನು ಪೂರ್ವಭಾವಿಯಾಗಿ ಸಂಗ್ರಹಿಸಿಟ್ಟುಕೊಳ್ಳುವಂತೆ ಎಲ್ಲಾ ಶಾಲಾ ಮುಖ್ಯ ಶಿಕ್ಷಕರಿಗೆ ತಿಳಿಸಿದೆ.
1. NMMS ಪರೀಕ್ಷೆಗೆ ನೋಂದಾಯಿಸಿಕೊಳ್ಳುವ ವಿದ್ಯಾರ್ಥಿಗಳು ಹೊಂದಿರಬೇಕಾದ ಅರ್ಹತೆಗಳು ಮತ್ತು ಅರ್ಜಿ ಸಲ್ಲಿಸಲು ಶಾಲಾ ಮುಖ್ಯಶಿಕ್ಷಕರು ಪೂರ್ವಭಾವಿಯಾಗಿ ಸಿದ್ಧಪಡಿಸಿಕೊಳ್ಳಬೇಕಾದ/ವಿದ್ಯಾರ್ಥಿಗಳಿಂದ ಸಂಗ್ರಹಿಸಬೇಕಾದ ದಾಖಲೆ/ಮಾಹಿತಿಗಳು:-
2. NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸರ್ಕಾರಿ, ಅನುದಾನಿತ ಹಾಗೂ ಸ್ಥಳೀಯ ಸಂಸ್ಥೆಗಳ (Local body schools) ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರಬೇಕು.
3. ರಾಜ್ಯ ಮತ್ತು ಕೇಂದ್ರ ಸರ್ಕಾರಗಳ ಅನುದಾನದಿಂದ ನಡೆಯುವ ವಸತಿಯುತ ಸರ್ಕಾರಿ ಮತ್ತು ಖಾಸಗಿ ಶಾಲೆಗಳ ವಿದ್ಯಾರ್ಥಿಗಳು ಈ ಪರೀಕ್ಷೆಗೆ ಅರ್ಜಿ ಸಲ್ಲಿಸಲು ಅರ್ಹರಿರುವುದಿಲ್ಲ. (ಉದಾ: ಮೊರಾರ್ಜಿ ದೇಸಾಯಿ, ನವೋದಯ ಶಾಲೆ, ಕೇಂದ್ರೀಯ ವಿದ್ಯಾಲಯ, ಸೈನಿಕ ಶಾಲೆ, ಇತ್ಯಾದಿ)
4. ಅರ್ಜಿ ಸಲ್ಲಿಸಲು 7ನೇ ತರಗತಿ ಪರೀಕ್ಷೆಯಲ್ಲಿ ಸಾಮಾನ್ಯ ವರ್ಗ ಹಾಗೂ ಇತರೆ ಹಿಂದುಳಿದ ವರ್ಗದ ವಿದ್ಯಾರ್ಥಿಗಳು ಶೇ.55 ರಷ್ಟು ಅಂಕಗಳನ್ನು ಹಾಗೂ ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ಶೇ.50 ರಷ್ಟು ಅಂಕಗಳನ್ನು ಗಳಿಸಿರಬೇಕು.
5. ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸುವ ಇತರೆ ಹಿಂದುಳಿದ ವರ್ಗ (OBC), ಪ.ಜಾ ಮತ್ತು ಪ.ಪಂಗಡದ ವಿದ್ಯಾರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಜಾತಿ ಪ್ರಮಾಣ ಪತ್ರವನ್ನು ಪಡೆದಿರಬೇಕು. (ಪ್ರಮಾಣ ಪತ್ರಗಳು ಚಾಲ್ತಿಯಲ್ಲಿರಬೇಕು)
6. CWSN ಮೀಸಲಾತಿ ಅಡಿಯಲ್ಲಿ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳು ಸಕ್ಷಮ ಪ್ರಾಧಿಕಾರದಿಂದ ಪ್ರಮಾಣ ಪತ್ರವನ್ನು ಪಡೆದಿರಬೇಕು.
7. NMMS ಪರೀಕ್ಷೆಗೆ ಅರ್ಜಿ ಸಲ್ಲಿಸುವ ವಿದ್ಯಾರ್ಥಿಗಳ ಪೋಷಕರ ವಾರ್ಷಿಕ ವರಮಾನ 3,50,000 (ಮೂರು ಲಕ್ಷದ ಐವತ್ತು ಸಾವಿರ ರೂ.ಗಳು ಮಾತ್ರ) ಮೀರಿರಬಾರದು (ಪ.ಜಾತಿ ಮತ್ತು ಪ.ಪಂಗಡದ ವಿದ್ಯಾರ್ಥಿಗಳನ್ನು ಒಳಗೊಂಡಂತೆ). ಸಕ್ಷಮ ಪ್ರಾಧಿಕಾರದಿಂದ ಆದಾಯ ಪ್ರಮಾಣ ಪತ್ರವನ್ನು ಪಡೆದಿರಬೇಕು ಹಾಗೂ ಪ್ರಮಾಣ ಪತ್ರವು ಚಾಲ್ತಿಯಲ್ಲಿರಬೇಕು.
8. ವಿದ್ಯಾರ್ಥಿಯ ಆಧಾರ್ ಕಾರ್ಡ್ ಪ್ರತಿಯನ್ನು ಸಂಗ್ರಹಿಸಿಟ್ಟುಕೊಳ್ಳುವುದು.
8. ವಿದ್ಯಾರ್ಥಿಯ ಬ್ಯಾಂಕ್ ಖಾತೆಗೆ ಸಂಬಂಧಿಸಿದ ಮಾಹಿತಿಗಳನ್ನು ಸಂಗ್ರಹಿಸಿಟ್ಟುಕೊಳ್ಳುವುದು. (ಬ್ಯಾಂಕ್ ಖಾತೆ ಸಂಖ್ಯೆ ಬ್ಯಾಂಕ್ ಹೆಸರು, ಬ್ಯಾಂಕ್ IFSC Code)
9. ಅರ್ಜಿಗೆ ವಿದ್ಯಾರ್ಥಿಯ Photo Upload ಮಾಡುವುದು ಕಡ್ಡಾಯವಾಗಿದ್ದು, ಸಂಗ್ರಹಿಸಿಟ್ಟುಕೊಳ್ಳುವುದು.
10. ವಿದ್ಯಾರ್ಥಿಯ ಸಹಿ (Size 20-50 KB) ಮತ್ತು Photo (Size 60-80 KB) ಅನ್ನು JPEG Format 5 Scan ಮಾಡಿ Save ಮಾಡಿಟ್ಟುಕೊಳ್ಳುವುದು.
ಅರ್ಜಿ ಸಲ್ಲಿಸಲು ಅಂತಿಮ ದಿನಾಂಕದ ಒತ್ತಡ ತಪ್ಪಿಸುವ ನಿಟ್ಟಿನಲ್ಲಿ ಶಾಲಾ ಮುಖ್ಯ ಶಿಕ್ಷಕರು ಅರ್ಹ ವಿದ್ಯಾರ್ಥಿಗಳ ಪೋಷಕರಿಗೆ/ಪಾಲಕರಿಗೆ ಈ ಕುರಿತು ಮಾಹಿತಿ ನೀಡಿ ಅಗತ್ಯ ದಾಖಲೆಗಳನ್ನು ಸಿದ್ಧಪಡಿಸಿಕೊಳ್ಳುವಂತೆ ತಿಳಿಸುವುದು. ಈ ಪರೀಕ್ಷೆಗೆ ಬಗ್ಗೆ ಜಿಲ್ಲೆ, ತಾಲ್ಲೂಕು, ಶಾಲಾ ಹಂತಕ್ಕೆ ಮಾಹಿತಿ ನೀಡಿ, ವಿದ್ಯಾರ್ಥಿಗಳು ಪರೀಕ್ಷೆಗೆ ಸಿದ್ಧತೆ ನಡೆಸಲು ಅಗತ್ಯ ಕ್ರಮವಹಿಸಲು ತಿಳಿಸಿದೆ.

