Essay competition:ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ – ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ರಬಂಧ ಸ್ಪರ್ಧೆ ಆಯೋಜನೆ-2025
Essay competition: ರಾಷ್ಟ್ರಪಿತ ಮಹಾತ್ಮ ಗಾಂಧೀಜಿ ಅವರ 156ನೇ ಜಯಂತಿ ಅಂಗವಾಗಿ ಪ್ರೌಢಶಾಲೆ, ಪದವಿ ಪೂರ್ವ ಹಾಗೂ ಪದವಿ – ಸ್ನಾತಕೋತ್ತರ ವಿದ್ಯಾರ್ಥಿಗಳಿಗೆ ಪ್ರತ್ಯೇಕ ಪ್ರಬಂಧ ಸ್ಪರ್ಧೆ ಆಯೋಜನೆ-2025:
ಪ್ರೌಢಶಾಲಾ ವಿಭಾಗ:
ವಿಷಯ : 1.ಸ್ವಚ್ಛತೆಯ ಪಾಠ -ಗಾಂಧೀಜಿಯವರ ಸ೦ದೇಶ
2. ಮಕ್ಕಳ ಭವಿಷ್ಯ ನಿರ್ಮಾಣದಲ್ಲಿ ಗಾಂಧೀಜಿಯವರ ಪಾತ್ರ
3. ಗಾಂಧೀಜಿಯವರ ಸ್ವಾತಂತ್ರ್ಯದ ಕನಸು-ನನ್ನ ಕಲ್ಪನೆ
ಇವುಗಳಲ್ಲಿ ಒಂದು ವಿಷಯದ ಕುರಿತು 700 ರಿಂದ 800 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿಪೂರ್ವ ವಿಭಾಗ:
ವಿಷಯ : 1. ಅಸ್ಪೃಶ್ಯತೆ ನಿವಾರಣೆಯಲ್ಲಿ ಗಾಂಧೀಜಿಯವರ ಹೋರಾಟ
2. ಇಂದಿನ ಸಮಾಜದಲ್ಲಿ ಸರ್ವೋದಯ ಮತ್ತು ಅಂತ್ಯೋದಯದ ಪ್ರಾಸಂಗಿಕತೆ
3. ಬದಲಾವಣೆ ನನ್ನಿಂದಲೇ ಆರಂಭ -ಗಾಂಧೀಜಿಯವರ ಪಾಠ
ಇವುಗಳಲ್ಲಿ ಒಂದು ವಿಷಯದ ಕುರಿತು 900 ರಿಂದ 1,000 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಪದವಿ ಮತ್ತು ಸ್ನಾತಕೋತ್ತರ ವಿಭಾಗ:
ವಿಷಯ : 1. ಗಾಂಧೀಜಿ ಕಂಡ ನ್ಯಾಯಸಮ್ಮತ ರಾಜಕೀಯ ವ್ಯವಸ್ಥೆ
2. ಗಾಂಧೀಜಿ ಮತ್ತು ಡಾ.ಬಿ.ಆರ್.ಅಂಬೇಡ್ಕರ್ -ತತ್ವಗಳ ಹೋಲಿಕೆ
3. ಮೌಲ್ಯಾಧಾರಿತ ನಾಯಕತ್ವ ಹಾಗೂ ನೈತಿಕ ರಾಜಕಾರಣ – ಯುವಕರಿಗೆ ಗಾಂಧೀಜಿಯವರ ಪಾಠ
ಇವುಗಳಲ್ಲಿ ಒಂದು ವಿಷಯದ ಕುರಿತು 1,400 ರಿಂದ 1,500 ಪದಗಳು ಮೀರದಂತೆ ಪ್ರಬಂಧ ಬರೆಯಬೇಕು.
ಬಹುಮಾನಗಳ ವಿವರ:
ರಾಜ್ಯಮಟ್ಟ:
ಪ್ರಥಮ – ₹31,000,
ದ್ವಿತೀಯ – ₹21,000
ತೃತೀಯ – 11,000
ಜಿಲ್ಲಾಮಟ್ಟ:
ಪ್ರಥಮ : ₹3,000,
ದ್ವಿತೀಯ – ₹2,000,
ತೃತೀಯ – 11,000
ತೃತೀಯ – ₹1,000
ನಿಯಮಗಳು :
▪️ಪ್ರಬಂಧವು ಸಂಪೂರ್ಣ ಸ್ವರಚಿತವಾಗಿರಬೇಕು.
▪️ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿಯೇ ಶುದ್ಧ ಕೈಬರಹದಲ್ಲಿ ಪ್ರಬಂಧ ಬರೆಯಬೇಕು.
▪️ಆಕರವಾಗಿ ಬಳಸಿದ ಪರಾಮರ್ಶನ / ಅಧಾರ ಗ್ರಂಥಗಳ ವಿವರಗಳನ್ನು ಪ್ರಬಂಧದ ಕೊನೆಯಲ್ಲಿ ನಮೂದಿಸಬೇಕು.
▪️ಆದರೆ, ಸ್ಪರ್ಧೆ ಏರ್ಪಡಿಸುವ ಸ್ಥಳದಲ್ಲಿ ಪರಾಮರ್ಶನ / ಅಧಾರ ಗ್ರಂಥಗಳು / ಮೊಬೈಲ್ ಬಳಕೆಗೆ ಅವಕಾಶವಿರುವುದಿಲ್ಲ.
▪️ಪ್ರಬಂಧಕಾರರ ಹೆಸರು, ವಿಳಾಸ ನಮೂದಿಸಿರಬೇಕು.
▪️ಪ್ರಬಂಧವು ಈ ಮೊದಲು ಎಲ್ಲಿಯೂ ಪ್ರಕಟವಾಗಿರಬಾರದು.
▪️ಆಯ್ದ ಪ್ರಬಂಧಗಳ ಪ್ರಕಟಣೆಯ ಹಕ್ಕನ್ನು ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆ ಹೊಂದಿರುತ್ತದೆ.
ಸೂಚನೆಗಳು:
▪️ವಾರ್ತಾ ಮತ್ತು ಸಾರ್ವಜನಿಕ ಸಂಪರ್ಕ ಇಲಾಖೆಯ ಎಲ್ಲಾ ಜಿಲ್ಲಾ ಕಚೇರಿಗಳು ಜಿಲ್ಲಾಡಳಿತದ ಸಹಯೋಗದೊಂದಿಗೆ 2025, ಸೆಪ್ಟೆಂಬರ್ 6ರ ಒಳಗಾಗಿ ಸ್ಪರ್ಧೆ ನಡೆಸಬೇಕು.
▪️2025, ಸೆಪ್ಟೆಂಬರ್ 12ರ ಒಳಗಾಗಿ ವಿಜೇತರ ದಿವರಗಳು ಹಾಗೂ ಪ್ರಬಂಧಗಳನ್ನು ಕೇಂದ್ರ ಕಚೇರಿಗೆ ಕಳುಹಿಸಬೇಕು.
▪️ಜಿಲ್ಲಾಮಟ್ಟದ ಪ್ರಥಮ ಬಹುಮಾನ ವಿಜೇತ ಪ್ರಬಂಧಗಳನ್ನು ರಾಜ್ಯಮಟ್ಟದಲ್ಲಿ ಮರುಮೌಲ್ಯಮಾಪನ ಮಾಡಿ, ರಾಜ್ಯಮಟ್ಟದ ಫಲಿತಾಂಶ ಘೋಷಿಸಲಾಗುವುದು.
▪️ಪ್ರತಿ ವಿಭಾಗದಲ್ಲಿನ ಅತ್ಯುತ್ತಮವಾದ ಮೂರು 3 ಪ್ರಬಂಧಗಳಿಗೆ ಅಕ್ಟೋಬರ್ 02 ರಂದು ಜಿಲ್ಲಾ ಮಟ್ಟದ ಗಾಂಧಿ ಜಯಂತಿ ದಿನಾಚರಣೆ ಸಂದರ್ಭದಲ್ಲಿ ಬಹುಮಾನ ನೀಡಿ ಪ್ರಬಂಧ ರಚನೆಕಾರರನ್ನು ಗೌರವಿಸಲಾಗುವುದು.

ಹಚ್ಚಿನ ಮಾಹಿತಿಗಾಗಿ – CLICK HERE