KASS High Level Policy Commettee ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸೇವೆಗಳು ಇವರನ್ನು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ಸರ್ಕಾರವು ನೇಮಿಸಿರುವ ಬಗ್ಗೆ.-2025.

KASS High Level Policy Commettee ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸೇವೆಗಳು ಇವರನ್ನು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ಸರ್ಕಾರವು ನೇಮಿಸಿರುವ ಬಗ್ಗೆ.

KASS High Level Policy Commettee ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಸೇವೆಗಳು ಇವರನ್ನು ಸಮಿತಿಯ ಅಧ್ಯಕ್ಷರು ಹಾಗೂ ಸದಸ್ಯರನ್ನಾಗಿ ಸರ್ಕಾರವು ನೇಮಿಸಿರುವ ಬಗ್ಗೆ.:

ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನೂತನ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆಯನ್ನು (THE KARNATAKA AROGYA SANJEEVINI SCHEME KASS) ಅನುಷ್ಠಾನಗೊಳಿಸಲು ರಚಿಸಲಾದ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ (KASS HIGH LEVEL POLICY COMMITTEE)ಯ ಸಂಯೋಜನೆಯನ್ನು ಮಾರ್ಪಡಿಸುವ ಬಗ್ಗೆ.

ಪ್ರಸ್ತಾವನೆ:

ಮೇಲೆ ಓದಲಾದ (1)ರ ದಿನಾಂಕ: 27.09.2024 ರ ಸರ್ಕಾರಿ ಆದೇಶದಲ್ಲಿ ರಾಜ್ಯ ಸರ್ಕಾರಿ ನೌಕರರಿಗೆ ಹಾಗೂ ಅವರ ಕುಟುಂಬದ ಅವಲಂಬಿತ ಸದಸ್ಯರಿಗೆ ನಗದುರಹಿತ ವೈದ್ಯಕೀಯ ಚಿಕಿತ್ಸಾ ಸೌಲಭ್ಯ ಒದಗಿಸಲು ರೂಪಿಸಿರುವ ‘ಕರ್ನಾಟಕ ಆರೋಗ್ಯ ಸಂಜೀವಿನಿ ಯೋಜನೆ-(KASS)’ಯನ್ನು ಪರಿಣಾಮಕಾರಿ ಹಾಗೂ ಸುವ್ಯವಸ್ಥಿತವಾಗಿ ಅನುಷ್ಠಾನಗೊಳಿಸುವ ಉದ್ದೇಶದಿಂದ ಸರ್ಕಾರವು ನಾಲ್ಕು ವಿವಿಧ ಸಮಿತಿಗಳನ್ನು ರಚಿಸಿ ಆದೇಶಿಸಲಾಗಿದೆ. ಈ ಪೈಕಿ, ಈ ಕೆಳಕಂಡ ಸದಸ್ಯರನ್ನು ಒಳಗೊಂಡ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿಯನ್ನು (KASS HIGH LEVEL POLICY COMMITTEE) ರಚಿಸಲಾಗಿದೆ.

ಸಮಿತಿಯು ಅಗತ್ಯ ಸಂದರ್ಭಗಳಲ್ಲಿ ಸರ್ಕಾರದ ಕಾರ್ಯದರ್ಶಿ, ಸಿಆಸುಇ (ಇ-ಆಡಳಿತ) ಇವರು ನಿಯೋಜಿಸುವ ಉನ್ನತ ಮಟ್ಟದ ತಾಂತ್ರಿಕ ಅಧಿಕಾರಿ, HRMS ಅಧಿಕಾರಿ, ಅಧ್ಯಕ್ಷರು, PHANA, ಅಧ್ಯಕ್ಷರು, IMA ಅಥವಾ ಬೇರೆ ಯಾವುದೇ ತಜ್ಞತೆ ಹೊಂದಿದ ಅಧಿಕಾರಿ/ ವ್ಯಕ್ತಿಗಳನ್ನು ಆಹ್ವಾನಿತ ಸದಸ್ಯರಾಗಿ ಸಭೆಯಲ್ಲಿ ಪಾಲ್ಗೊಳ್ಳಲು ಆಹ್ವಾನಿಸಬಹುದು.

ಮೇಲೆ ಓದಲಾದ (2)ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಸ್ತಾವನೆಯಲ್ಲಿ ಇಲಾಖೆಯ ಪ್ರಧಾನ ಕಾರ್ಯದರ್ಶಿಯವರು – ಸದರಿ ಸಮಿತಿಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಬದಲಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರನ್ನು ಅಧ್ಯಕ್ಷರನ್ನಾಗಿ ಮಾಡಿ ಮಾರ್ಪಡಿತ ಆದೇಶವನ್ನು ಹೊರಡಿಸುವಂತೆ ಕೋರಿರುತ್ತಾರೆ.

ಪ್ರಸ್ತುತ ದಿನಾಂಕ:27.09.2024ರ ಆದೇಶದಂತೆ ಈ ಯೋಜನೆಯ ಅನುಷ್ಠಾನಕ್ಕೆ ಸಂಬಂಧಿಸಿದ ಮಹತ್ವದ ಕಾರ್ಯನೀತಿಯನ್ನು ಒಳಗೊಂಡ ವಿಷಯಗಳ ಬಗ್ಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಅಧ್ಯಕ್ಷತೆಯಲ್ಲಿನ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ (KASS HIGH LEVEL POLICY COMMITTEE)ಯಲ್ಲಿ ವಿವರವಾಗಿ ಪರಿಶೀಲಿಸಿ, ತೀರ್ಮಾನಗಳನ್ನು ಕೈಗೊಂಡು ಮಹತ್ವದ ಪ್ರಸ್ತಾವನೆಗಳನ್ನು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಮುಖಾಂತರ ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆಗೆ ಸಲ್ಲಿಸಲಾಗುತ್ತದೆ. ಆದರೆ ಸದರಿ ಸಮಿತಿಯಲ್ಲಿ ಕ್ರಮ ಸಂಖ್ಯೆ:9 ರಲ್ಲಿ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಸರ್ಕಾರದ ಉಪ ಕಾರ್ಯದರ್ಶಿ ಮೇಲ್ಪಟ್ಟ ಒಬ್ಬ ಅಧಿಕಾರಿಯನ್ನು ಮಾತ್ರ ಸಮಿತಿಯ ಸದಸ್ಯರನ್ನಾಗಿ ಮಾಡಲಾಗಿದೆ.

ಈ ಹಿನ್ನೆಲೆಯಲ್ಲಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯು ಪ್ರಸ್ತಾಪಿಸಿರುವಂತೆ ಸದರಿ ಸಮಿತಿಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಬದಲಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ಮಾಡುವುದು ಸೂಕ್ತವೆಂದು ನಿರ್ಧರಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಆದೇಶ ವಿವರಣೆ:

ಪ್ರಸ್ತಾವನೆಯಲ್ಲಿ ವಿವರಿಸಿದಂತೆ ಸರ್ಕಾರಿ ಆದೇಶ ಸಂಖ್ಯೆ: ಸಿಆಸುಇ 16 ಎಸ್ ಎಂಆರ್ 2020 (ಭಾ-18), ದಿನಾಂಕ:27.09.2024 ರನ್ವಯ ರಚಿಸಲಾಗಿರುವ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿ (KASS HIGH LEVEL POLICY COMMITTEE)ಗೆ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರ ಬದಲಾಗಿ ಸರ್ಕಾರದ ಪ್ರಧಾನ ಕಾರ್ಯದರ್ಶಿ, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಇವರನ್ನು ಸಮಿತಿಯ ಅಧ್ಯಕ್ಷರನ್ನಾಗಿ ನೇಮಕ ಮಾಡಿ ಆಯುಕ್ತರು, ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೇವೆಗಳು ಇವರನ್ನು ಸಮಿತಿಯ ಸದಸ್ಯರನ್ನಾಗಿ ನೇಮಿಸಿ ಸರ್ಕಾರವು ಆದೇಶಿಸಿದೆ.

ಈ ಹಿನ್ನಲೆಯಲ್ಲಿ ಕೆಳಕಂಡ ಸದಸ್ಯರನ್ನು ಒಳಗೊಂಡ KASS ಉನ್ನತ ಮಟ್ಟದ ಕಾರ್ಯನೀತಿ ಸಮಿತಿಯನ್ನು (KASS HIGH LEVEL POLICY COMMITTEE) ಪುನರ್ ರಚಿಸಲಾಗಿದೆ:

(KASS HIGH LEVEL POLICY COMMITTEE)

ಸಮಿತಿ ಸಂಯೋಜನೆ:

 

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!