ನೇರ ನೇಮಕಾತಿ ಅಧಿಸೂಚನೆ ರದ್ದು: ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ.
ನೇರ ನೇಮಕಾತಿ ಅಧಿಸೂಚನೆ ರದ್ದು: ಸರ್ಕಾರದಿಂದ ಹೊಸ ಸುತ್ತೋಲೆ ಪ್ರಕಟ: ರಾಜ್ಯ ಸರ್ಕಾರವು ನೇರ ನೇಮಕಾತಿಗಾಗಿ ಈ ಹಿಂದೆ ಹೊರಡಿಸಿದ್ದ ಅಧಿಸೂಚನೆಗಳನ್ನು ರದ್ದುಪಡಿಸಿ ಸುತ್ತೋಲೆ ಹೊರಡಿಸಿದೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ನಡೆದ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ಅಕ್ಟೋಬರ್ 28, 2024ರ ನಂತರ ಯಾವುದೇ ಇಲಾಖೆ, ಮಂಡಳಿ ಅಥವಾ ಸಂಸ್ಥೆಗಳು ಹೊರಡಿಸಿದ್ದ ನೇರ ನೇಮಕಾತಿ ಅಧಿಸೂಚನೆಗಳು ರದ್ದುಗೊಳ್ಳಲಿವೆ.
ಪರಿಶಿಷ್ಟ ಜಾತಿಗಳಿಗೆ ಒಳಮೀಸಲಾತಿ ಅಳವಡಿಸಿಕೊಂಡು, ಹೊಸದಾಗಿ ನೇಮಕಾತಿ ಅಧಿಸೂಚನೆಗಳನ್ನು ಹೊರಡಿಸುವಂತೆ ಸರ್ಕಾರ ಸೂಚಿಸಿದೆ.
‘ಉಲ್ಲೇಖಿತ ಸುತ್ತೋಲೆಗಳಲ್ಲಿ ನೀಡಲಾಗಿರುವ ಸೂಚನೆಗಳ ಕಡೆಗೆ ಗಮನಸೆಳೆಯುತ್ತಾ, ದಿನಾಂಕ: 28.10.2024 ರಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದಂತೆ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಹೊರಡಿಸಿದ ಅಧಿಸೂಚನೆಗಳನ್ನು ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳಮೀಸಲಾತಿಯನ್ನು ಅಳವಡಿಸಿಕೊಂಡು ಕಾಲಬದ್ದವಾಗಿ (Time Bound) ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸುವಂತೆ ಸೂಚಿಸಿದೆ.
ಮುಂದುವರೆದು, ದಿನಾಂಕ: 28.10.2024ರ ಹಿಂದೆ ನೇರ ನೇಮಕಾತಿಗಾಗಿ ಅಧಿಸೂಚನೆ ಹೊರಡಿಸಿ, ದಿನಾಂಕ: 28.10.2024ರ ನಂತರ ಸರ್ಕಾರದ ಯಾವುದೇ ಇಲಾಖೆ/ಮಂಡಳಿ/ನಿಗಮ/ಸ್ವಾಯತ್ತ ಸಂಸ್ಥೆಗಳ ಹುದ್ದೆಗಳಿಗೆ ನೇರ ನೇಮಕಾತಿಗಾಗಿ ಸಂಬಂಧಿಸಿದ ನೇಮಕಾತಿ ಪ್ರಾಧಿಕಾರಗಳು ಯಾವುದಾದರೂ ತಿದ್ದುಪಡಿ ಅಧಿಸೂಚನೆಗಳನ್ನು ಹೊರಡಿಸಿದ್ದಲ್ಲಿ ಅಂತಹ ಎಲ್ಲಾ ನೇಮಕಾತಿ ಅಧಿಸೂಚನೆಗಳನ್ನೂ ಸಹ ರದ್ದುಗೊಳಿಸಿ, ಪರಿಶಿಷ್ಟ ಜಾತಿ ಒಳ ಮೀಸಲಾತಿಯನ್ನು ಅಳವಡಿಸಿಕೊಂಡು ಹೊಸದಾಗಿ ನೇಮಕಾತಿ ಅಧಿಸೂಚನೆ ಹೊರಡಿಸಬೇಕೆಂದೂ ಸಹ ಹಾಗು ಕಾಲಬದ್ದವಾಗಿ (Time Bound) ನೇಮಕಾತಿ ಪ್ರಕ್ರಿಯೆಗಳನ್ನು ಪೂರ್ಣಗೂಳಿಸಲು ಎಲ್ಲಾ ನೇಮಕಾತಿ ಪ್ರಾಧಿಕಾರಗಳಿಗೆ ಆಯ್ಕೆ ಪ್ರಾಧಿಕಾರಗಳಿಗೆ ಸೂಚಿಸಲಾಗಿದೆ.
