Educational Programs: ಶೈಕ್ಷಣಿಕ ಕಾರ್ಯಕ್ರಮಗಳ ನಿರಂತರ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡುವ ಸಂಬಂಧ ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳ ನೇಮಕ:2025

Educational Programs: ಶೈಕ್ಷಣಿಕ ಕಾರ್ಯಕ್ರಮಗಳ ನಿರಂತರ ಮೇಲ್ವಿಚಾರಣೆ ಮತ್ತು ಮಾರ್ಗದರ್ಶನ ನೀಡುವ ಸಂಬಂಧ ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳ ನೇಮಕ:2025

Educational Programs: ರಾಜ್ಯ ಹಂತದಿಂದ ಶೈಕ್ಷಣಿಕ ಕಾರ್ಯಕ್ರಮಗಳ ನಿರಂತರ ಮೇಲ್ವಿಚಾರಣೆ ಹಾಗೂ ಮಾರ್ಗದರ್ಶನ ನಡೆಸಿದ್ದಲ್ಲಿ, ಕ್ಷೇತ್ರ ಮಟ್ಟದಲ್ಲಿ ಶೈಕ್ಷಣಿಕ ಕಾರ್ಯಕ್ರಮಗಳು ಸಮರ್ಪಕ ಅನುಷ್ಠಾನಗೊಳ್ಳುವಲ್ಲಿ ಸಹಕಾರಿಯಾಗಿರುತ್ತದೆ. ಪ್ರಸ್ತುತ ರಾಜ್ಯ ಹಂತದಿಂದ ಹಲವಾರು ಶೈಕ್ಷಣಿಕ ಕಾರ್ಯಕ್ರಮಗಳನ್ನು ಕ್ಷೇತ್ರ ಮಟ್ಟದಲ್ಲಿ ಅನುಷ್ಠಾನಗೊಳಿಸಲಾಗುತ್ತಿದ್ದು, ಇವುಗಳ ಪರಿಣಾಮಕಾರಿ ಅನುಷ್ಠಾನದ ಮೇಲ್ವಿಚಾರಣೆ ಹಾಗೂ ಮಾರ್ಗದರ್ಶನಕ್ಕಾಗಿ ಅಧಿಕಾರಿಗಳನ್ನು ಜಿಲ್ಲೆಗಳಿಗೆ ನೋಡಲ್ ಅಧಿಕಾರಿಗಳನ್ನಾಗಿ ನಿಯೋಜಿಸಲಾಗಿದೆ.

ನಿಯೋಜಿತ ಅಧಿಕಾರಿಗಳು ಅನುಬಂಧದಲ್ಲಿ ಸೂಚಿಸಿದಂತೆ ತಮಗೆ ಹಂಚಿಕೆ ಮಾಡಲಾಗಿರುವ ಜಿಲ್ಲೆಗಳಿಗೆ ಕನಿಷ್ಠ ತಿಂಗಳಿಗೊಮ್ಮೆ ಕಡ್ಡಾಯವಾಗಿ ಭೇಟಿ ನೀಡಿ ಜಿಲ್ಲೆಯಲ್ಲಿ ಅನುಷ್ಠಾನ ಮಾಡುತ್ತಿರುವ ಆಯವ್ಯಯ ಘೋಷಿತ ಹಾಗೂ ಇತರೇ ಶೈಕ್ಷಣಿಕ ಕಾರ್ಯಕ್ರಮಗಳನ್ನು ಪರಿಶೀಲಿಸಿ ಮಾರ್ಗದರ್ಶನ ನೀಡುವುದು ಪರಿಶೀಲಿಸಿದ ಅಂಶಗಳನ್ನು ಆಧರಿಸಿ ಸೂಕ್ತ ಅನುಪಾಲನೆಗೆ ಡಯಟ್ ಅಧಿಕಾರಿಗಳಿಗೆ ತಿಳಿಸುವುದು.

ಭೇಟಿಯ ಸಂದರ್ಭದಲ್ಲಿ ಶಾಲೆಗಳ ಭೇಟಿ ಹಾಗೂ ಡಯಟ್ ಬಿ.ಆರ್.ಸಿ / ಸಿ.ಆರ್.ಸಿ ಕೇಂದ್ರಗಳಲ್ಲಿ ಡಿ.ಎಸ್.ಇ.ಆರ್.ಟಿ, ಕಛೇರಿಯ ಎಲ್ಲಾ ವಿಭಾಗಗಳ ಕಾರ್ಯಚಟುವಟಿಕೆಗಳನ್ನು ಒಳಗೊಂಡ ಮಾಹಿತಿಯನ್ನು ಸಮಗ್ರವಾಗಿ ಪರಿಶೀಲಿಸಿ ಸೂಕ್ತ ಮಾರ್ಗದರ್ಶನ ನೀಡುವುದು ಹಾಗೂ ಮೇಲ್ಕಂಡ ಎಲ್ಲಾ ಅಂಶಗಳನ್ನು ನಡವಳಿಯಲ್ಲಿ ದಾಖಲಿಸಿ ಭೇಟಿ ನೀಡಿದ 03 ದಿನದೊಳಗೆ ವರದಿಯನ್ನು ಸಲ್ಲಿಸುವುದು.

ಡಯಟ್‌ಗಳಿಗೆ ನೋಡಲ್ ಅಧಿಕಾರಿಗಳಾಗಿ ನಿಯೋಜಿತವಾದ ಅಧಿಕಾರಿಗಳು ಡಿ..ಎಸ್.ಇ.ಆ‌ರ್.ಟಿ. ಕಛೇರಿಯಿಂದ ಅನುಷ್ಠಾನಗೊಳ್ಳತ್ತಿರುವ ಎಲ್ಲಾ ಚಟುವಟಿಕೆಗಳ ಅನುಷ್ಠಾನಕ್ಕೆ ಅನುಪಾಲನಾ ಮಾಹಿತಿ ಮತ್ತು ಅಂಕಿ ಅಂಶಗಳನ್ನು ಹೊಂದಿರಬೇಕು ಹಾಗೂ SSLC ಫಲಿತಾಂಶ ಉತ್ತಮಪಡಿಸಲು ಕೈಗೊಳ್ಳಲಾಗುವ ಕ್ರಮಗಳ ಬಗ್ಗೆ ಪರಿಶೀಲಸಿ ಸೂಕ್ತ ಮಾರ್ಗದರ್ಶನವನ್ನು ನೀಡುವುದು. ಒಟ್ಟಾರೆ ಜಿಲ್ಲೆಯಲ್ಲಿನ ಎಲ್ಲಾ ಶೈಕ್ಷಣಿಕ ಚಟುವಟಿಕೆಗಳ ಸಮಗ್ರ ಮಾಹಿತಿಯನ್ನು ಕ್ರೋಢೀಕರಿಸಿ ಕಾಲಕಾಲಕ್ಕೆ ಅನುಪಾಲಿಸಲು ತಿಳಿಸಿದೆ.

 

CLICK HERE TO DOWNLOAD MEMORANDUM

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!