Deepika Scholarship:2025 ಅಜೀಂ ಪ್ರೇಮ್ಜಿ ಫೌಂಡೇಶನ್ ಹಾಗೂ ಉನ್ನತ ಶಿಕ್ಷಣ ಇಲಾಖೆ ‘ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮ|ಯಾರೆಲ್ಲ ಅರ್ಹರು

Deepika Scholarship:2025: ಹೆಣ್ಣು ಮಕ್ಕಳ ವಿದ್ಯಾಭ್ಯಾಸಕ್ಕಾಗಿ ಪ್ರತಿ ವರ್ಷ ವಿದ್ಯಾರ್ಥಿವೇತನ ನೀಡಲು ಅಜೀಂ ಪ್ರೇಮ್ಜಿ ಫೌಂಡೇಶನ್ ಹಾಗೂ ಉನ್ನತ ಶಿಕ್ಷಣ ಇಲಾಖೆ ‘ದೀಪಿಕಾ ವಿದ್ಯಾರ್ಥಿ ವೇತನ’ ಕಾರ್ಯಕ್ರಮ ರೂಪಿಸಿದೆ.
ಉನ್ನತ ಶಿಕ್ಷಣಕ್ಕೆ ಪ್ರವೇಶ ಪಡೆಯುವ ರಾಜ್ಯದ ಹೆಣ್ಣುಮಕ್ಕಳಿಗೆ ಇನ್ನು ಮುಂದೆ ಅಜೀಂ ಪ್ರೇಮ್ಜಿ ಫೌಂಡೇಶನ್ ಆರ್ಥಿಕ ನೆರವು ನೀಡಲಿದ್ದು, ಅದಕ್ಕಾಗಿ ₹2,000 ಕೋಟಿ ಹಾಗೂ ರಾಜ್ಯ ಸರ್ಕಾರ ₹200 ಕೋಟಿ ಒದಗಿಸಿದೆ.
ದೀಪಿಕಾ ವಿದ್ಯಾರ್ಥಿ ವೇತನ – ಗ್ರಾಮೀಣ ವಿದ್ಯಾರ್ಥಿನಿಯರ ಕನಸುಗಳಿಗೆ ಬಲ
ಶಿಕ್ಷಣವೆಂದರೆ ಪ್ರತಿಯೊಬ್ಬರ ಹಕ್ಕು. ಆದರೆ ಗ್ರಾಮೀಣ ಪ್ರದೇಶಗಳ ಅನೇಕ ವಿದ್ಯಾರ್ಥಿನಿಯರು ಆರ್ಥಿಕ ಅಡಚಣೆಯಿಂದ ತಮ್ಮ ವಿದ್ಯಾಭ್ಯಾಸವನ್ನು ಮುಂದುವರಿಸಲು ಕಷ್ಟಪಡುವುದು ಸಾಮಾನ್ಯ. ಇದೇ ಸಂದರ್ಭದಲ್ಲಿ, ಅಜೀಂ ಪ್ರೇಮ್ಜಿ ಫೌಂಡೇಶನ್ ಆರಂಭಿಸಿರುವ ದೀಪಿಕಾ ವಿದ್ಯಾರ್ಥಿ ವೇತನ ಯೋಜನೆ ಸಾವಿರಾರು ಮಕ್ಕಳಿಗೆ ಹೊಸ ಭರವಸೆಯಾಗಿದೆ.
ಈ ಯೋಜನೆಯಡಿ ಪದವಿ ವ್ಯಾಸಂಗ ಮಾಡುವ ಪ್ರತಿಯೊಬ್ಬ ವಿದ್ಯಾರ್ಥಿನಿಗೆ ಪ್ರತಿ ವರ್ಷ ರೂ.30,000 ಸಹಾಯಧನ ಲಭ್ಯವಾಗುತ್ತದೆ. 2025ರಲ್ಲಿ ಮಾತ್ರವೇ 37,000 ವಿದ್ಯಾರ್ಥಿನಿಯರು ಈ ಸದುದ್ದೇಶದ ಯೋಜನೆಯ ಲಾಭ ಪಡೆಯುತ್ತಿದ್ದಾರೆ. ಇದು ಗ್ರಾಮೀಣ ಭಾಗದ ಪ್ರತಿಭಾನ್ವಿತ ವಿದ್ಯಾರ್ಥಿನಿಯರು ಉನ್ನತ ಶಿಕ್ಷಣ ಪಡೆಯಲು ಮಹತ್ವದ ಹೆಜ್ಜೆಯಾಗಿದೆ.
ದೀಪಿಕಾ ವಿದ್ಯಾರ್ಥಿ ವೇತನ ಪಡೆಯಲು ಅರ್ಹತೆ ಏನು?
▪️ವಿದ್ಯಾರ್ಥಿನಿಯರು 10ನೇ ತರಗತಿ, 12ನೇ ತರಗತಿಯನ್ನು ಸರ್ಕಾರಿ ಶಾಲೆ ಮತ್ತು ಕಾಲೇಜುಗಳಲ್ಲಿ ಪೂರ್ಣಗೊಳಿಸಿರಬೇಕು.
▪️ವಿದ್ಯಾರ್ಥಿನಿಯರು ಪ್ರತಿ ವರ್ಷ ತಪ್ಪದೇ ಉತೀರ್ಣರಾಗಬೇಕು.
▪️State Syllabus, ICSE, CBSE, ISC ಈ ಯಾವುದೇ ಬೋಡ್‌ರ್ನಿಂದ 12ನೇ ತರಗತಿ ಅಥವಾ PUC ಪೂರ್ಣಗೊಳಿಸಿರಬಹುದು.
▪️2025-26ನೇ ಶೈಕ್ಷಣಿಕ ವರ್ಷದಲ್ಲಿ ನೀವು ಸಾಮಾನ್ಯ ಪದವಿ ಅಥವಾ ವೃತ್ತಿ ಶಿಕ್ಷಣ ಪದವಿ ಅಥವಾ ಇನ್ನಾವುದೇ ಪದವಿ ತರಗತಿಗೆ ಯಾವುದೇ ಶಿಕ್ಷಣ ಸಂಸ್ಥೆಯಲ್ಲಿ ಪ್ರವೇಶಾತಿ ಪಡೆದಿರಬೇಕು.
“ದೀಪಿಕಾ : ಉನ್ನತ ಶಿಕ್ಷಣ ವಿದ್ಯಾರ್ಥಿವೇತನ” ಯೋಜನೆಯ ಮೂಲಕ ಪ್ರತಿ ವಿದ್ಯಾರ್ಥಿನಿಗೆ ಪದವಿ ಶಿಕ್ಷಣ ಮುಗಿಯುವವರೆಗೆ ವಾರ್ಷಿಕ ₹30,000 ಸಿಗಲಿದ್ದು, ಶೈಕ್ಷಣಿಕ ಉದ್ದೇಶ ಹಾಗೂ ಪೂರಕ ಕಾರಣಗಳಿಗೆ ಬಳಸಿಕೊಳ್ಳಬಹುದು.
ಸರ್ಕಾರಿ ಶಾಲೆಗಳಲ್ಲಿ 10ನೇ ತರಗತಿ ಹಾಗೂ ದ್ವಿತೀಯ ಪಿಯು ಉತ್ತೀರ್ಣರಾಗಿ 2025- 26ನೇ ಸಾಲಿನಲ್ಲಿ ಸಾಮಾನ್ಯ ಪದವಿ ಅಥವಾ ವೃತ್ತಿ ಶಿಕ್ಷಣ ಪದವಿಗೆ ಸೇರುವ 37,000 ವಿದ್ಯಾರ್ಥಿನಿಯರಿಗೆ ವಿದ್ಯಾರ್ಥಿವೇತನದ ನೆರವು ಸಿಗಲಿದೆ. ಅರ್ಹ ವಿದ್ಯಾರ್ಥಿನಿಯರ ಸಂಖ್ಯೆ ಹೆಚ್ಚಾದರೆ, ಆ ಮೊತ್ತವನ್ನು ರಾಜ್ಯ ಸರ್ಕಾರವೇ ಭರಿಸಲಿದೆ.