ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ-2025: ಸಮೀಕ್ಷಾದಾರರಿಗೆ ಗೌರವಧನ ಮೊತ್ತದ ಬಗ್ಗೆ ಆದೇಶ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸಮೀಕ್ಷಾದಾರರಿಗೆ ಗೌರವಧನ ಮೊತ್ತದ ಬಗ್ಗೆ ಹೊಸ ಆದೇಶ

ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ: ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ ನಡೆಸಿರುವ ಸಮೀಕ್ಷಾದಾರರಿಗೆ ಗೌರವಧನದ ಮೊತ್ತವನ್ನು ಪಾವತಿಸಲು ಜಿಲ್ಲಾಧಿಕಾರಿಗಳಿಗೆ ಅನುದಾನ ಬಿಡುಗಡೆ ಮಾಡುವ ಕುರಿತು.

ಪ್ರಸ್ತಾವನೆ :

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಉಲ್ಲೇಖ(1)ರ ಆದೇಶದನ್ವಯ ರಾಜ್ಯಾದ್ಯಂತ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯನ್ನು ಕೈಗೊಳ್ಳಲಾಗಿರುತ್ತದೆ.

ಉಲ್ಲೇಖ (2)ರ ಆದೇಶದಲ್ಲಿ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷಾ ಕಾರ್ಯಕ್ಕೆ ಅನುದಾನವನ್ನು ಬಿಡುಗಡೆ ಮಾಡಲಾಗಿದೆ.

ಉಲ್ಲೇಖ (3)ರ ಆದೇಶದಲ್ಲಿ ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ವತಿಯಿಂದ ರಾಜ್ಯದ ಎಲ್ಲಾ ನಾಗರಿಕರ ಸಾಮಾಜಿಕ ಮತ್ತು ಶೈಕ್ಷಣಿಕ ಸ್ಥಿತಿಗಳ ಬಗ್ಗೆ ಕೈಗೊಳ್ಳಲಾಗುವ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ ಸಮೀಕ್ಷಾದಾರರು ಮತ್ತು ಮೇಲ್ವಿಚಾರಕರಿಗೆ ಈ ಕೆಳಕಂಡಂತೆ ಗೌರವಧನವನ್ನು ನಿಗದಿಪಡಿಸಿ ಆದೇಶಿಸಿದೆ.

▪️ಸಮೀಕ್ಷಾದಾರರು:

ಗೌರವ ಸಂಭಾವನೆ: Lump-sum ₹5000/- ಹಾಗೂ ಪ್ರತಿ ಮನೆ ಸಮೀಕ್ಷೆಗೆ ರೂ.100/- ರಂತೆ

▪️ಮೇಲ್ವಿಚಾರಕರು:


ಗೌರವ ಸಂಭಾವನೆ: ₹10,000/-

ಉಲ್ಲೇಖ (4) ರಲ್ಲಿ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಪಾಲ್ಗೊಳ್ಳುವ 1,20,728 ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಮೊದಲನೇ ಕಂತಿನಲ್ಲಿ ಗೌರವಧನ ತಲಾ ರೂ.5000/- ಗಳಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ. 60,36,40,000/- (ರೂಪಾಯಿ ಅರವತ್ತು ಕೋಟಿ ಮೂವತ್ತಾರು ಲಕ್ಷದ ನಲವತ್ತು ಸಾವಿರಗಳು ಮಾತ್ರ) ಗಳನ್ನು ಬಿಡುಗಡೆ ಮಾಡಲಾಗಿದೆ. EDCS ನಿಂದ ಸಮೀಕ್ಷಾದಾರರು ಮತ್ತು ಸಮೀಕ್ಷೆ ಮಾಡಿರುವ ಮನೆಗಳ ವಿವರವನ್ನು ಅನುಬಂಧದಲ್ಲಿ ವಿವರಿಸಿರುವಂತೆ ಸಲ್ಲಿಸಿರುತ್ತಾರೆ. ಅದರಂತೆ, ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ (GBA ಹೊರತುಪಡಿಸಿ) ಒಟ್ಟು 1,46,48,053 ಮನೆಗಳ ಸಮೀಕ್ಷೆ ನಡೆಸಿದ್ದು, ಒಂದು ಮತ್ತು ಎರಡು ಸದಸ್ಯರಿರುವ ಮನೆಗಳಿಗೆ ತಲಾ ರೂ.50/- ರಂತೆ ಹಾಗೂ ಮೂರು ಮತ್ತು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.100/- ರಂತೆ ಪಾವತಿಸಲು ಉಲ್ಲೇಖ (5) ರಲ್ಲಿ ಸೂಚಿಸಲಾಗಿದೆ. ಅದರಂತೆ ಒಟ್ಟು ರೂ.1,27,73,45,200 (ನೂರ ಇಪ್ಪತ್ತೇಳು ಕೋಟಿ ಎಪ್ಪತ್ತೂರು ಲಕ್ಷಗಳ ನಲವತ್ತೈದು ಸಾವಿರದ ಇನ್ನೂರು ರೂಪಾಯಿಗಳು ಮಾತ್ರ) ಗಳನ್ನು ಅನುಬಂಧದಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಬಿಡುಗಡೆ ಮಾಡಬೇಕಾಗಿದ್ದು, ಅದರಂತೆ ಈ ಆದೇಶ.

ಆದೇಶದ ವಿವರ:

ಆದೇಶಸಂಖ್ಯೆ: ಕರಾಹಿಂವಆ/ಸಕೋ/ಸಿಆರ್-50/2025-26 ದಿನಾಂಕ:06.11.2025

ಪ್ರಸ್ತಾವನೆಯಲ್ಲಿ ವಿವರಿಸಿರುವಂತೆ, ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದಿಂದ ಕೈಗೊಂಡಿರುವ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆಯಲ್ಲಿ ಕಾರ್ಯನಿರ್ವಹಿಸಿರುವ ಸಮೀಕ್ಷಾದಾರರಿಗೆ (GBA ಹೊರತುಪಡಿಸಿ) ಅನುಬಂಧದಲ್ಲಿ ವಿವರಿಸಿರುವಂತೆ ರಾಜ್ಯದ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳಿಗೆ ಒಟ್ಟು ರೂ.1,27,73,45,200 (ನೂರ ಇಪ್ಪತ್ತೇಳು ಕೋಟಿ ಎಪ್ಪತ್ತೂರು ಲಕ್ಷಗಳ ನಲವತ್ತೈದು ಸಾವಿರದ ಇನ್ನೂರು ರೂಪಾಯಿಗಳು ಮಾತ್ರ) ಗಳನ್ನು ಈ ಕೆಳಗಿನ ಷರತ್ತುಗಳಿಗೆ ಒಳಪಟ್ಟು ಬಿಡುಗಡೆ ಮಾಡಿ ಆದೇಶಿಸಿದೆ.

ಷರತ್ತುಗಳು:

1. ಒಂದು ಮತ್ತು ಎರಡು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.50/-ರಂತೆ ಹಾಗೂ ಮೂರು ಮತ್ತು ಮೂರಕ್ಕಿಂತ ಹೆಚ್ಚು ಸದಸ್ಯರಿರುವ ಮನೆಗಳನ್ನು ಸಮೀಕ್ಷೆ ಮಾಡಿರುವ ಬಗ್ಗೆ ತಲಾ ರೂ.100/- ರಂತೆ ಪಾವತಿಸುವುದು.

2. EDCS ನಿಂದ ಪಡೆದಿರುವಂತೆ ಸಮೀಕ್ಷಾದಾರರ ಹೆಸರು ಮತ್ತು ಅವರಿಗೆ ಪಾವತಿಸಬೇಕಾಗಿರುವ ಮೊತ್ತದ ವಿವರವನ್ನು ಜಿಲ್ಲಾವಾರು ಪ್ರತ್ಯೇಕವಾಗಿ ನೀಡಲಾಗಿದೆ.

3. ಸಮೀಕ್ಷೆಗೆ ಸಂಬಂಧಿಸಿದಂತೆ ಬಿಡುಗಡೆ ಮಾಡಲಾಗುವ ಅನುದಾನ ಹಾಗೂ ವೆಚ್ಚದ ವಿವರಗಳನ್ನು ಪ್ರತ್ಯೇಕವಾಗಿ ನಿರ್ವಹಿಸುವುದು ಹಾಗೂ ನಿಯಮಾನುಸಾರ ವೆಚ್ಚಗಳನ್ನು ಭರಿಸಿದ ನಂತರ ಹಣ ವಿನಿಯೋಗ ಪ್ರಮಾಣ ಪತ್ರವನ್ನು ಆಯೋಗಕ್ಕೆ ಸಲ್ಲಿಸುವುದು.

ಈ ವೆಚ್ಚವನ್ನು ಆಯೋಗದ ಠೇವಣಿ ಖಾತೆ ಲೆಕ್ಕ ಶೀರ್ಷಿಕೆ ಸಂಖ್ಯೆ: 8449-00-120-

0-18-677 ಹಾಗೂ ಠೇವಣಿ ಸಂಖ್ಯೆ: 265721010 ಗೆ ಸಮೀಕ್ಷೆಯ ಉದ್ದೇಶಕ್ಕಾಗಿ ಬಿಡುಗಡೆಯಾಗಿರುವ ಅನುದಾನದಿಂದ ಭರಿಸುವುದು ಎಂದು ಆದೇಶದಲ್ಲಿ ತಿಳಿಸಲಾಗಿದೆ.


CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!