Government School Admission- ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ

School Admission- ಸರ್ಕಾರಿ ಶಾಲೆ ಪ್ರವೇಶ 15 ವರ್ಷದಲ್ಲಿ 30% ಕುಸಿತ,ಉಚಿತ ಪ್ರವೇಶ, ಸಮವಸ್ತ್ರ, ಪುಸ್ತಕ, ಬಿಸಿಯೂಟ ಕೊಟ್ಟರೂ ಬರುತ್ತಿಲ್ಲ ಮಕ್ಕಳು । 38% ಮಕ್ಕಳಷ್ಟೇ ಸರ್ಕಾರಿ ಶಾಲೆಗೆ ದಾಖಲು

Government School Admission- ಉಚಿತ ಪ್ರವೇಶ, ಪ್ರತೀ ವರ್ಷ ಎರಡು ಜೊತೆ ಸಮವಸ್ತ್ರ ಮತ್ತು ಪಠ್ಯ ಪುಸ್ತಕ ವಿತರಣೆ, ಕ್ಷೀರಭಾಗ್ಯ, ಮಧ್ಯಾಹ್ನದ ಬಿಸಿಯೂಟ ಸೇರಿದಂತೆ ರಾಜ್ಯ ಸರ್ಕಾರ ನೀಡುತ್ತಿರುವ ಹಲವು ಯೋಜನೆಗಳ ನಡುವೆಯೂ ರಾಜ್ಯದ ಸರ್ಕಾರಿ ಶಾಲೆಗಳಿಗೆ ಕಳೆದ ಒಂದೂವರೆ ದಶಕದಲ್ಲಿ ಮಕ್ಕಳ ದಾಖಲಾತಿ ಪ್ರಮಾಣ ಶೇ.30ರಷ್ಟು ಕುಸಿದಿದೆ. 2010-11ನೇ ಸಾಲಿನಲ್ಲಿಸರ್ಕಾರಿಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ಪ್ರವೇಶ ಪಡೆಯುತ್ತಿದ್ದ ಮಕ್ಕಳ ಸಂಖ್ಯೆ ಸುಮಾರು 55 ಲಕ್ಷದಷ್ಟಿತ್ತು. ಆದರೆ, ಇದು 2025-26ನೇ ಸಾಲಿನ ವೇಳೆಗೆ 38 ಲಕ್ಷಕ್ಕೆ ಇಳಿದಿದೆ. ಅರ್ಥಾತ್ ಹದಿನೈದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳಿಗೆ ಸೇರುವ ಮಕ್ಕಳ ಸಂಖ್ಯೆ 17 ಲಕ್ಷಕ್ಕೂ ಹೆಚ್ಚು ಕಡಿಮೆಯಾಗಿದೆ. ತನ್ಮೂಲಕ ರಾಜ್ಯದಲ್ಲಿ ಶಾಲಾ ಶಿಕ್ಷಣಕ್ಕೆ ಪ್ರವೇಶ ಪಡೆಯುವ ಮಕ್ಕಳ ಒಟ್ಟು ದಾಖಲಾತಿಯಲ್ಲಿ ಶೇ.54ರಷ್ಟಿದ್ದ ಸರ್ಕಾರಿ ಶಾಲೆಗಳ ಪಾಲು ಈಗ ಶೇ.38ಕ್ಕೆ ಕುಸಿದಿದೆ.

ಇವು ಯಾವುದೋ ಸಂಘ-ಸಂಸ್ಥೆಯ ಸಮೀಕ್ಷೆಯಲ್ಲಿ ಬಹಿರಂಗವಾದ ಅಂಶಗಳಲ್ಲ. ಸ್ವತಃ ಶಿಕ್ಷಣ ಇಲಾಖೆಯ ಹತ್ತು ಹದಿನೈದು ವರ್ಷಗಳ ಶೈಕ್ಷಣಿಕ ಮಾಹಿತಿ ವಿಶ್ಲೇಷಣಾ ವರದಿಗಳನ್ನು ಅವಲೋಕಿಸಿದಾಗ ಕಂಡುಬರುವ ಸತ್ಯ. ಅಲ್ಲದೆ, ರಾಜ್ಯದಲ್ಲಿ ಪ್ರಸಕ್ತ ಸಾಲಿನಲ್ಲೇ ಇನ್ನೂ 800 ಕರ್ನಾಟಕ ಪಬ್ಲಿಕ್ ಶಾಲೆಗಳನ್ನು ಆರಂಭಿಸಲು ಅಧಿಕೃತ ಆದೇಶ ಹೊರಡಿಸಿದ 15 ವರ್ಷಗಳ ಹಿಂದೆ ಖಾಸಗಿ ಶಾಲೆಗಳಲ್ಲಿ ಸುಮಾರು 30 ಲಕ್ಷದ ಆಸು ಪಾಸಿನಲ್ಲಿರುತ್ತಿದ್ದ ಮಕ್ಕಳ ಸಂಖ್ಯೆ ಈಗ 47 ಲಕ್ಷಕ್ಕೆ ಏರಿಕೆಯಾಗಿದೆ. ಅಂದರೆ ಖಾಸಗಿ ಶಾಲೆಗಳಲ್ಲಿ ದಾಖಲಾತಿ ಶೇ.30ಕ್ಕಿಂತ ಹೆಚ್ಚಾಗಿದೆ.

ಪ್ರಾಥಮಿಕ ಸರ್ಕಾರಿ ಶಾಲೆಗಳು, ಶಿಕ್ಷಕರ ಸಂಖ್ಯೆಯೂ ಇಳಿಕೆ.

ಇನ್ನು, ಮಕ್ಕಳ ಸಂಖ್ಯೆ ಕಡಿಮೆಯಾದಂತೆ ಹದಿನೈದು ವರ್ಷಗಳಲ್ಲಿ ಸರ್ಕಾರಿ ಶಾಲೆಗಳ ಸಂಖ್ಯೆ ಮತ್ತು ಅವುಗಳಲ್ಲಿ ಕಾರ್ಯನಿರ್ವಹಿಸುತ್ತಿದ್ದ ಕಾಯಂ ಶಿಕ್ಷಕರ ಸಂಖ್ಯೆಯೂ ಇಳಿಕೆಯಾಗುತ್ತಾ ಸಾಗಿದೆ.

“ಸರ್ಕಾರಗಳ ಪಾಲಿಗೆ ಸರ್ಕಾರಿ ಶಾಲೆಗಳು ಪ್ರಯೋಗ ಶಾಲೆಗಳಾಗಿವೆ. ನಲಿಕಲಿ ಯಂತಹ ಅವೈಜ್ಞಾನಿಕ ಕಲಿಕಾ ಕಾರ್ಯಕ್ರಮಗಳನ್ನು ತೆಗೆದು ಆಧುನಿಕ ಕಾಲಕ್ಕೆ ತಕ್ಕಂತೆ ಸರ್ಕಾರಿ ಶಾಲೆಗಳನ್ನು ತಾಂತ್ರಿಕ ಮೂಲಸೌಲಭ್ಯಗಳು, ಕಾಲ ಕಾಲಕ್ಕೆ ಪಠ್ಯ ಪರಿಷ್ಕರಣೆಯೊಂದಿಗೆ ಬಲಗೊಳಿಸಬೇಕು. ಪ್ರತೀ ವರ್ಷ ಖಾಲಿಯಾಗುವ ಶಿಕ್ಷಕರ ಹುದ್ದೆಗಳ ನೇಮಕಾತಿ ಮಾಡಿಕೊಳ್ಳಬೇಕು. ಕನಿಷ್ಠ ವಿಷಯಕ್ಕೊಬ್ಬರಲ್ಲದಿದ್ದರೂ ತರಗತಿಗೆ ಒಬ್ಬ ಶಿಕ್ಷಕರನ್ನಾದರೂ ನೀಡಬೇಕು. ಜೊತೆಗೆ ಪ್ರತೀ ವರ್ಷ ಹೊಸ ಖಾಸಗಿ ಶಾಲೆಗಳ ಆರಂಭಕ್ಕೆ ಅವಕಾಶ ನೀಡುವುದು ನಿಲ್ಲಬೇಕು.”

▪️ಚಂದ್ರಶೇಖರ ನುಗ್ಗಲಿ. ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!