KSET EXAM-2025 Result Released
KSET EXAM-2025 Provisional Result Released: ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025ರ ಅಂತಿಮ ಕೀ ಉತ್ತರ ಮತ್ತು ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಕಟಿಸುವ ಬಗ್ಗೆ.
ಸಹಾಯಕ ಪ್ರಾಧ್ಯಾಪಕರ ಅರ್ಹತಾ ಪರೀಕ್ಷೆ (ಕೆಸೆಟ್)-2025ನ್ನು ದಿನಾಂಕ:02.11.2025 ರಂದು ನಡೆಸಲಾಗಿದ್ದು, ಸದರಿ ಪರೀಕ್ಷೆಯ ತಾತ್ಕಾಲಿಕ ಕೀ ಉತ್ತರಗಳನ್ನು ದಿನಾಂಕ:04.11.2025 ರಂದು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಿ, ಸದರಿ ಕೀ ಉತ್ತರಗಳಿಗೆ ಆಕ್ಷೇಪಣೆಗಳಿದ್ದಲ್ಲಿ, ದಿನಾಂಕ:06.11.2025ರ ಸಂಜೆ 5.00 ಗಂಟೆಯೊಳಗೆ ಸಲ್ಲಿಸಲು ಅವಕಾಶ ನೀಡಲಾಗಿತ್ತು.
ಪ್ರಕಟಿತ ಕೀ ಉತ್ತರಗಳಿಗೆ ಅಭ್ಯರ್ಥಿಗಳಿಂದ ಸ್ವೀಕೃತವಾದ ಆಕ್ಷೇಪಣೆಗಳನ್ನು ವಿಷಯ ತಜ್ಞರ ಸಮಿತಿಯ ಮೂಲಕ ಪರಿಶೀಲಿಸಿ, ವಿಷಯ ತಜ್ಞರ ಶಿಫಾರಸ್ಸಿನಂತೆ ಪರಿಷ್ಕೃತ ಕೀ ಉತ್ತರಗಳನ್ನು ದಿನಾಂಕ: 12.11.2025 ರಂದು ಮತ್ತು ಅಂತಿಮ ಕೀ ಉತ್ತರಗಳನ್ನು ದಿನಾಂಕ:15.11.2025 ರಂದು ವೆಬ್ ಸೈಟ್‌ನಲ್ಲಿ ಪ್ರಕಟಿಸಲಾಗಿದೆ.
ಅಂತಿಮ ಕೀ ಉತ್ತರಗಳನ್ವಯ ಅಭ್ಯರ್ಥಿಗಳು ಪರೀಕ್ಷೆಯಲ್ಲಿ ಗಳಿಸಿದ ತಾತ್ಕಾಲಿಕ ಅಂಕಪಟ್ಟಿಯನ್ನು ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಪ್ರಕಟಿಸಲಾಗಿದ್ದು, ಸದರಿ ತಾತ್ಕಾಲಿಕ ಅಂಕಪಟ್ಟಿಗೆ ಆಕ್ಷೇಪಣೆಗಳಿದ್ದಲ್ಲಿ ಪ್ರಾಧಿಕಾರದ ವೆಬ್‌ಸೈಟ್‌ನಲ್ಲಿ ಒದಗಿಸಲಾದ ಲಿಂಕ್ ಮೂಲಕ ದಿನಾಂಕ:17.11.2025ರ ಮಧ್ಯಾಹ್ನ 12.00 ರೊಳಗೆ ಪೂರಕ ದಾಖಲೆಗಳೊಂದಿಗೆ ಆಕ್ಷೇಪಣೆ ಸಲ್ಲಿಸಬಹುದಾಗಿದೆ.
ಕೀ ಉತ್ತರಗಳಿಗೆ ಸಂಬಂಧಿಸಿದ ಅಥವಾ ಪೂರಕ ದಾಖಲೆಗಳಿಲ್ಲದೆ ಸಲ್ಲಿಸಲಾಗುವ ಆಕ್ಷೇಪಣೆಗಳನ್ನು ಪರಿಗಣಿಸಲಾಗುವುದಿಲ್ಲ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

KSET -2025 PROVISIONAL SCORE OBJECTIONS FORM
ಇದನ್ನೂ ನೋಡಿ…..Teacher Recruitment-2025 14,967 ಶಿಕ್ಷಕ/ಶಿಕ್ಷಕೇತರ ಸಿಬ್ಬಂದಿ ನೇಮಕಾತಿಗೆ ಅರ್ಜಿ ಆಹ್ವಾನ.