eChallan: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ

eChallan: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ

eChallan: ಕರ್ನಾಟಕ ರಾಜ್ಯದಲ್ಲಿ ಪೋಲಿಸ್ ಇಲಾಖೆಯವರು ಸಂಚಾರಿ ಇ-ಚಲನ್ ಮೂಲಕ ವಿಧಿಸಿದ ದಂಡದ ಮೊತ್ತದಲ್ಲಿ ರಿಯಾಯಿತಿ: ಮೇಲೆ ಓದಲಾದ ಕ್ರಮ ಸಂಖ್ಯೆ: (1)ರ ಸರ್ಕಾರದ ಆದೇಶದಲ್ಲಿ, ದಿನಾಂಕ:11.02.2023ರ

ಒಳಗಾಗಿ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ ಒಂದು ಬಾರಿಯ ಕ್ರಮವಾಗಿ (onetime measure) ಮಾತ್ರ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಮೇಲೆ ಓದಲಾದ ಕ್ರಮ ಸಂಖ್ಯೆ: (2)ರ ಸರ್ಕಾರದ ಆದೇಶದಲ್ಲಿ, ಪೊಲೀಸ್ ಇಲಾಖೆಯಲ್ಲಿ

ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು ರಿಯಾಯಿತಿ ನೀಡಿ ಆದೇಶಿಸಲಾಗಿತ್ತು.

ಮೇಲೆ ಓದಲಾದ ಕ್ರಮ ಸಂಖ್ಯೆ: (3)ರ ಸರ್ಕಾರದ ಆದೇಶದಲ್ಲಿ ಪೊಲೀಸ್ ಇಲಾಖೆಯಲ್ಲಿ

ಸಂಚಾರಿ ಇ-ಚಲನ್‌ನಲ್ಲಿ ದಿನಾಂಕ:11.02.2023 ರೊಳಗೆ ದಾಖಲಾದ ಪ್ರಕರಣಗಳಿಗೆ ಮಾತ್ರ ಅನ್ವಯವಾಗುವಂತೆ, ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ಬಾಕಿ ಪ್ರಕರಣಗಳ ದಂಡದ ಮೊತ್ತದಲ್ಲಿ ಮತ್ತೊಂದು ಬಾರಿಗೆ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ಆದೇಶಿಸಲಾಗಿತ್ತು ಹಾಗೂ ಈ ರಿಯಾಯಿತಿಯು ದಿನಾಂಕ:09.09.2023ರವರೆಗೆ ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಮೇಲೆ ಓದಲಾದ ಕ್ರಮ ಸಂಖ್ಯೆ: (4)ರ ಸರ್ಕಾರದ ಆದೇಶದಲ್ಲಿ ಪೊಲೀಸ್ ಇಲಾಖೆಯ

ಸಂಚಾರಿ e-Challan ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 2018-19ನೇ ಸಾಲಿನ ಪೂರ್ವದಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಗೊಳ್ಳುವ ಪ್ರಕರಣಗಳಿಗೆ ಮಾತ್ರ ಅನ್ವಯವಾಗುತ್ತದೆ ಎಂದು ತಿಳಿಸಲಾಗಿತ್ತು.

ಮೇಲೆ ಓದಲಾದ ಕ್ರಮ ಸಂಖ್ಯೆ: (5) ರ ಪತ್ರದಲ್ಲಿ ಪೊಲೀಸ್ ಇಲಾಖೆಯ ಸಂಚಾರಿ e-Challan

ಗಳಲ್ಲಿ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ (ಕನಿಷ್ಠ 1991 ರಿಂದ 2020 ರವರೆಗೆ) ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ.50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥ ಪಡಿಸಿಕೊಳ್ಳಲು ಹಾಗೂ ಈ 50% ವಿನಾಯಿತಿಯನ್ನು ದಿನಾಂಕ:10.11.2025ರಿಂದ 12.12.2025ರವರೆಗಿನ ನಿರ್ದಿಷ್ಟ ಅವಧಿಗೆ ವಿಸ್ತರಿಸಲು ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮ ಸಂಖ್ಯೆ: (6)ರ ಪ್ರಸ್ತಾವನೆಯಲ್ಲಿ, ಆಯುಕ್ತರು, ಸಾರಿಗೆ ಮತ್ತು ರಸ್ತೆ ಸುರಕ್ಷತೆ, ಬೆಂಗಳೂರು ಇವರ ಪೊಲೀಸ್ ಇಲಾಖೆಯ e-challan ಗಳಲ್ಲಿ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಹಾಗೂ ಸಾರಿಗೆ ಇಲಾಖೆಯಲ್ಲಿ 1991 ಯಿಂದ 2020 ರ ಸಾಲಿನಲ್ಲಿ ದಾಖಲಾಗಿರುವ ಪ್ರಕರಣಗಳಲ್ಲಿ ವಾಹನ ಮಾಲೀಕರುಗಳಿಂದ ಶೇ 50% ರಷ್ಟು ರಿಯಾಯಿತಿ ನೀಡಿ ಪ್ರಕರಣಗಳನ್ನು ಇತ್ಯರ್ಥಪಡಿಸಿಕೊಳ್ಳಲು ಅವಕಾಶ ಕಲ್ಪಿಸಿ ಆದೇಶ ಹೊರಡಿಸುವಂತೆ ಕೋರಿರುತ್ತಾರೆ.

ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ ಸರ್ಕಾರವು ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಟಿಡಿ 27 ಟಿಡಿಓ 2023 ಬೆಂಗಳೂರು ದಿನಾಂಕ:20.11.2025

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ಪೊಲೀಸ್ ಇಲಾಖೆಯ ಸಂಚಾರಿ ಇ-ಚಲನ್‌ನಲ್ಲಿ ದಾಖಲಾಗಿರುವ ದಂಡದ ಪ್ರಕರಣಗಳು ಹಾಗೂ ಸಾರಿಗೆ ಇಲಾಖೆಯಲ್ಲಿ 1991-92 ರಿಂದ 2019-20 ರ ಅವಧಿಯಲ್ಲಿ ದಾಖಲಾಗಿ, ಪಾವತಿಗೆ ಬಾಕಿ ಇರುವ ಪ್ರಕರಣಗಳ ದಂಡದ ಮೊತ್ತದಲ್ಲಿ ಶೇಕಡಾ 50 ರಷ್ಟು (ಐವತ್ತರಷ್ಟು ಮಾತ್ರ) ರಿಯಾಯಿತಿ ನೀಡಿ ದಿನಾಂಕ:21.11.2025 ರಿಂದ ದಿನಾಂಕ:12.12.2025 ರವರೆಗೆ ಕಾಲಾವಕಾಶ ನೀಡಿ ಆದೇಶಿಸಿದೆ.

ಈ ಆದೇಶವನ್ನು ಆರ್ಥಿಕ ಇಲಾಖೆಯು ಟಿಪ್ಪಣಿ ಸಂಖ್ಯೆ ಆಇ 52 ವೆಚ್ಚ-11 2023 (ಇ), ದಿನಾಂಕ:19.11.2025 ರಲ್ಲಿ ನೀಡಿರುವ ಸಹಮತಿಯನ್ನಯ ಹೊರಡಿಸಿದೆ.

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!