Menstrual Leave Order 2025:ರಾಜ್ಯ ಮಹಿಳಾ ನೌಕರರಿಗೆ ಋತುಚಕ್ರ ರಜೆ ಯಾರು ಅರ್ಹರು? ಹೇಗೆ ಪಡೆಯುವುದು? ಷರತ್ತುಗಳೇನು?

Menstrual Leave Order 2025:ರಾಜ್ಯ ಮಹಿಳಾ ನೌಕರರಿಗೆ ಋತುಚಕ್ರ ರಜೆ ಯಾರು ಅರ್ಹರು? ಹೇಗೆ ಪಡೆಯುವುದು? ಷರತ್ತುಗಳೇನು?

Menstrual Leave Order -2025 ಕರ್ನಾಟಕ ಸರ್ಕಾರವು ಮಹಿಳಾ ಸರ್ಕಾರಿ ನೌಕರರ ಆರೋಗ್ಯ, ಕಲ್ಯಾಣ ಮತ್ತು ಮನೋಸ್ಥೈರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆ (Menstrual Leave) ಸೌಲಭ್ಯವನ್ನು ನೀಡಲು ಮಹತ್ವದ ತೀರ್ಮಾನ ಕೈಗೊಂಡಿದೆ. ಈ ಕುರಿತು ಸರ್ಕಾರವು ಅಧಿಕೃತ ಆದೇಶವನ್ನು ಹೊರಡಿಸಿದ್ದು, ರಾಜ್ಯದ ಎಲ್ಲಾ ಮಹಿಳಾ ಸರ್ಕಾರಿ ನೌಕರರಿಗೆ ಈ ಹೊಸ ಪಿರಿಯಡ್ ಲೀವ್ ನೀತಿ ಅನ್ವಯವಾಗಲಿದೆ.

ರಾಜ್ಯದಲ್ಲಿ ವಿವಿಧ ಕಾರ್ಮಿಕ ಕಾಯ್ದೆಗಳಡಿ ನೋಂದಣಿಯಾಗಿರುವ ಎಲ್ಲಾ ಕೈಗಾರಿಕೆಗಳು ಹಾಗೂ ಸಂಸ್ಥೆಗಳಲ್ಲಿ ಕಾರ್ಯನಿರ್ವಹಿಸುತ್ತಿರುವ 18 ರಿಂದ 52 ವರ್ಷದ ವಯೋಮಿತಿಯ ಎಲ್ಲಾ ಖಾಯಂ/ಗುತ್ತಿಗೆ/ಹೊರಗುತ್ತಿಗೆ ಮಹಿಳಾ ನೌಕರರಿಗೆ ಋತುಚಕ್ರದ ಸಮಯದಲ್ಲಿ ಪ್ರತಿ ತಿಂಗಳು ಒಂದು ದಿನದಂತೆ ವಾರ್ಷಿಕ 12 ದಿನಗಳ ವೇತನಸಹಿತ ರಜೆಯ ಸೌಲಭ್ಯವನ್ನು ಓದಲಾದ ಸರ್ಕಾರಿ ಆದೇಶದಲ್ಲಿ ಮಂಜೂರು ಮಾಡಲಾಗಿದೆ.

ರಾಜ್ಯ ಮಹಿಳಾ ಸರ್ಕಾರಿ ನೌಕರರ ಮನೋಸ್ಥೆರ್ಯವನ್ನು ಹೆಚ್ಚಿಸುವ ಉದ್ದೇಶದಿಂದ ಪ್ರತಿ ತಿಂಗಳು ಒಂದು ದಿನದ ಋತುಚಕ್ರ ರಜೆಯ ಸೌಲಭ್ಯವನ್ನು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೂ ಕಲ್ಪಿಸಲು ಸರ್ಕಾರವು ತೀರ್ಮಾನಿಸಿ ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರಿ ಆದೇಶ ಸಂಖ್ಯೆ: ಆಇ 10 ಸೇನಿಸೇ 2025, ಬೆಂಗಳೂರು, ದಿನಾಂಕ:2.12.2025

ಸರ್ಕಾರವು ರಾಜ್ಯದ ಮಹಿಳಾ ಸರ್ಕಾರಿ ನೌಕರರಿಗೆ ಪ್ರತಿ ತಿಂಗಳು ಒಂದು ದಿನದಂತೆ ಋತುಚಕ್ರ ರಜೆಯ ಸೌಲಭ್ಯವನ್ನು ಕೆಳಕಂಡ ಷರತ್ತುಗಳಿಗೊಳಪಟ್ಟು ತಕ್ಷಣದಿಂದ ಜಾರಿಗೆ ಬರುವಂತೆ ಮಂಜೂರು ಮಾಡಿ ಆದೇಶಿಸಿದೆ:

1. ಋತುಚಕ್ರ ಹೊಂದಿರುವ, 18 ರಿಂದ 52 ವಯಸ್ಸಿನ ಮಹಿಳಾ ಸರ್ಕಾರಿ ನೌಕರರು ಈ ರಜೆಯನ್ನು ಪಡೆಯಲು ಅರ್ಹರಿರುತ್ತಾರೆ.

2. ಸಾಂದರ್ಭಿಕ ರಜೆಯನ್ನು ಮಂಜೂರು ಮಾಡಲು ಸಕ್ಷಮವಾದ ಪ್ರಾಧಿಕಾರಿಯು ಋತುಚಕ್ರ ರಜೆಯನ್ನು ಮಂಜೂರು ಮಾಡಬಹುದು. ಈ ರಜೆಯನ್ನು ಪಡೆಯಲು ಯಾವುದೇ ವೈದ್ಯಕೀಯ ಪ್ರಮಾಣ ಪತ್ರವನ್ನು ಒದಗಿಸುವ ಅಗತ್ಯವಿಲ್ಲ.

3. ಈ ರಜೆಯನ್ನು ರಜೆ/ಹಾಜರಾತಿ ಪುಸ್ತಕದಲ್ಲಿ ಪ್ರತ್ಯೇಕವಾಗಿ ನಮೂದಿಸತಕ್ಕದ್ದು.

4. ಋತುಚಕ್ರ ರಜೆಯನ್ನು ಬೇರೆ ಯಾವುದೇ ರಜೆಯೊಂದಿಗೆ ಸಂಯೋಜಿಸತಕ್ಕದ್ದಲ್ಲ.

Menstrual Leave Order

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!