Karnataka SSLC Preparatory Examination-1 2025–26: ಮಾರ್ಗಸೂಚಿ ಪ್ರಕಟ
Karnataka SSLC Preparatory Examination-1 2025–26: 2025 26 ನೇ ಸಾಲಿನ SSLC ಪೂರ್ವ ಸಿದ್ಧತಾ ಪರೀಕ್ಷೆ-1ನ್ನು ದಿನಾಂಕ: 05.01.2026 ದಿನಾಂಕ:10.01.2026 ರ ವರೆಗೆ ನಡೆಸಲು ತೀರ್ಮಾನಿಸಲಾಗಿದ್ದು
ವೇಳಾಪಟ್ಟಿಯನ್ನು ಮಂಡಲಿಯ ಜಾಲತಾಣದಲ್ಲಿ ಪ್ರಕಟಿಸಲಾಗಿದೆ. ಪೂರ್ವ ಸಿದ್ಧತಾ ಪರೀಕ್ಷೆಗೆ ಮುಖ್ಯ ಪರೀಕ್ಷೆಯ ಮಾದರಿಯಂತೆ ಪ್ರಶ್ನೆ ಪತ್ರಿಕೆಗಳನ್ನು ಸಿದ್ದಪಡಿಸಿ, ಅಯಾ ದಿನದ ಪ್ರಶ್ನೆಪತ್ರಿಕೆಯನ್ನು ವೇಳಾಪಟ್ಟಿಯಂತೆ ವಿಷಯವಾರು ಪ್ರಶ್ನೆಪತ್ರಿಕೆಯನ್ನು ಪರೀಕ್ಷಾ ದಿನದಂದು ಪೂರ್ವಾಹ್ನ 07.00 ಗಂಟೆಗೆ ಪ್ರೌಢಶಾಲೆಗಳ ಮುಖ್ಯಶಿಕ್ಷಕರ ಶಾಲಾ ಲಾಗಿನ್‌ನಲ್ಲಿ ಅಪ್‌ಲೋಡ್ ಮಾಡಲಾಗುವುದು. ಸಂಬಂಧಿಸಿದ ಪ್ರೌಢ ಶಾಲಾ ಮುಖ್ಯ ಶಿಕ್ಷಕರು ಪ್ರಶ್ನೆಪತ್ರಿಕೆಯನ್ನು ಮುದ್ರಿಸಿಕೊಂಡು ಪೂರ್ವ ಸಿದ್ಧತಾ ಪರೀಕ್ಷೆಯನ್ನು ನಡೆಸಲು ಅಗತ್ಯ ಕ್ರಮವಹಿಸುವುದು.
ಎಸ್.ಎಸ್.ಎಲ್.ಸಿ. ಪೂರ್ವಸಿದ್ಧತಾ ಪರೀಕ್ಷೆಯು ವಿದ್ಯಾರ್ಥಿಗಳಿಗೆ ಹಾಗೂ ಶಿಕ್ಷಕರಿಗೆ ಮುಖ್ಯ ಪರೀಕ್ಷೆಗೆ ಸಂಬಂಧಿಸಿದಂತೆ ದಿಕ್ಕೂಚಿಯಾಗಿರುತ್ತದೆ. ಆದ್ದರಿಂದ ಪೂರ್ವಸಿದ್ಧತಾ ಪರೀಕ್ಷೆಯನ್ನು ಮುಖ್ಯ ಪರೀಕ್ಷೆಯನ್ನು ನಡೆಸುವ ರೀತಿಯಲ್ಲಿಯೇ ಶಿಸ್ತುಬದ್ಧವಾಗಿ, ಹಾಗೂ ಪಾರದರ್ಶಕವಾಗಿ ನಡೆಸಲು, ಜಿಲ್ಲಾ ಉಪನಿರ್ದೇಶಕರು (ಆಡಳಿತ)ರವರು ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯಶಿಕ್ಷಕರುಗಳಿಗೆ ಸೂಕ್ತ ಮಾರ್ಗದರ್ಶನ ನೀಡಿ ಪರೀಕ್ಷೆಯನ್ನು ಯಶಸ್ವಿಯಾಗಿ ನಡೆಸುವುದು.
ಪರೀಕ್ಷೆ ನಡೆದ ಮರುದಿನ ಉತ್ತರ ಪತ್ರಿಕೆಗಳ ಮೌಲ್ಯಮಾಪನವನ್ನು ಮಾಡಿ, ಫಲಿತಾಂಶ ಮತ್ತು ಕಲಿಕೆಯ ಕೊರತೆಯನ್ನು ವಿದ್ಯಾರ್ಥಿ ಮತ್ತು ಪೋಷಕರ ಗಮನಕ್ಕೆ ತರುವುದು. ನಂತರದ ಉಳಿದ ದಿನಗಳಲ್ಲಿ ವಿದ್ಯಾರ್ಥಿಯು ಕಲಿಯದೇ ಇರುವ ಅಂಶಗಳ ಬಗ್ಗೆ ಕಲಿಕೆಯಾಗುವಂತೆ ಅಗತ್ಯ ಕ್ರಮವಹಿಸುವುದು. ಪ್ರಸ್ತುತ ವಾರ್ಷಿಕವಾಗಿ ಮೂರು ಪೂರ್ವಸಿದ್ಧತಾ ಪರೀಕ್ಷೆಗಳನ್ನು ನಡೆಸಲಾಗುತ್ತಿದ್ದು, ಸದರಿ ಅವಕಾಶಗಳನ್ನು ಸದುಪಯೋಗಪಡಿಸಿಕೊಂಡು ಫಲಿತಾಂಶದ ಸುಧಾರಣೆಗೆ ಅಗತ್ಯಕ್ಕಮ ಕೈಗೊಳ್ಳುವುದು.
ಒಂದು ವೇಳೆ ಪ್ರಶ್ನೆಪತ್ರಿಕೆ ಸೋರಿಕೆ, ಪರೀಕ್ಷಾ ಸಮಯದಲ್ಲಿ ನಕಲು ಮಾಡುವುದು, ಪ್ರಶ್ನೆಪತ್ರಿಕೆಯ ಫೋಟೋ ತೆಗೆಯುವುದು ಮತ್ತು ಪ್ರಶ್ನೆ ಪತ್ರಿಕೆಯನ್ನು ಸಾಮಾಜಿಕ ಜಾಲತಾಣದಲ್ಲಿ /ವಾಟ್ಸಾಪ್ ಮುಖಾಂತರ ಹರಿಬಿಡುವುದು, ಪರೀಕ್ಷಾ ಕೇಂದ್ರಗಳಲ್ಲಿ ಚೀಟಿಗಳನ್ನು ಸರಬರಾಜು ಮಾಡುವುದು ಇನ್ನಿತರ ಯಾವುದೇ ಪರೀಕ್ಷಾ ಅವ್ಯವಹಾರದ ಅಪರಾಧಕೃತ್ಯಕ್ಕೆ ಸಂಬಂಧಿಸಿದವರ ವಿರುದ್ಧ ಮಂಡಳಿ ಕಾಯ್ದೆ 1966, ಕರ್ನಾಟಕ ಶಿಕ್ಷಣ ಕಾಯ್ದೆ Karnataka Act No.18 of 2017 The Karnataka Education (Amendment) Act, 2017 ಮತ್ತು ಉಲ್ಲೇಖಿತ-2ರ ಸರ್ಕಾರದ ಆದೇಶ ಸಂಖ್ಯೆ:ಇಡಿ 24 ಎಸ್ಎಲ್‌ಬಿ 2020 ದಿನಾಂಕ:18.03.2020 ರನ್ವಯ ಕ್ರಮ ಕೈಗೊಳ್ಳಲಾಗುವುದು.
SSLC ಪೂರ್ವಸಿದ್ಧತಾ ಪರೀಕ್ಷೆಯ ಪ್ರಶ್ನೆ ಪತ್ರಿಕೆಗಳನ್ನು ಗೌಪ್ಯತೆ ಮತ್ತು ಪಾರದರ್ಶಕತೆಯೊಂದಿಗೆ ಮುದ್ರಣಕ್ಕೆ ಕ್ರಮ ಕೈಗೊಂಡು ಪರೀಕ್ಷೆ ನಡೆಸಲು ಕೈಗೊಳ್ಳಬೇಕಾದ ಕ್ರಮಗಳು:
1. 2025-26 ನೇ ಸಾಲಿನ ರಾಜ್ಯಮಟ್ಟದ ಎಸ್.ಎಸ್.ಎಲ್.ಸಿ. ಪರೀಕ್ಷೆಗೆ ನೋಂದಾಯಿಸಿರುವ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರು ಮಂಡಲಿ ಜಾಲತಾಣದಿಂದ ಪೂರ್ವಸಿದ್ಧತಾ ಪರೀಕ್ಷೆ-1ರ ವೇಳಾಪಟ್ಟಿಯನ್ನು ಡೌನ್ ಲೋಡ್ ಮಾಡಿಕೊಳ್ಳುವುದು.
2. 2025-26ನೇ ಸಾಲಿನ ಪೂರ್ವಸಿದ್ಧತಾ ಪರೀಕ್ಷೆ – 1ರ ಪ್ರಶ್ನೆಪತ್ರಿಕೆಗಳನ್ನು ಆಯಾ ವಿಷಯದ ಪರೀಕ್ಷಾ ದಿನದಂದು ಪೂರ್ವಾಹ್ನ 07.00 ಗಂಟೆಗೆ ಮಂಡಲಿಯಿಂದ ಶಾಲಾ ಮುಖ್ಯಶಿಕ್ಷಕರ ಲಾಗಿನ್‌ಗೆ ಅಪ್ ಲೋಡ್ ಮಾಡಲಾಗುವುದು. ಅಪ್‌ಲೋಡ್ ಮಾಡಲಾಗುವ ಪ್ರಶ್ನೆಪತ್ರಿಕೆಗಳನ್ನು ಸ್ವತ: ಶಾಲಾ ಮುಖ್ಯಶಿಕ್ಷಕರೇ ತಮ್ಮ ಶಾಲಾ ಲಾಗಿನ್ ಮಾಡಿ ಮೊಬೈಲ್ ಸಂಖ್ಯೆಗೆ ಬರುವ ಓ.ಟಿ.ಪಿ ನಮೂದಿಸುವ ಮೂಲಕ ಪ್ರಶ್ನೆಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳತಕ್ಕದು. ಆಯಾ ದಿನದ ಎಲ್ಲಾ ವಿಷಯದ ಪ್ರಶ್ನೆಪತ್ರಿಕೆಗಳು ಲಾಗಿನ್‌ನಲ್ಲಿ ಲಭ್ಯವಿರುವುದನ್ನು ಖಾತರಿಪಡಿಸಿಕೊಂಡು, ಗೌಪ್ಯತೆ ಕಾಪಾಡಿಕೊಂಡು ವಿದ್ಯಾರ್ಥಿಗಳ ಸಂಖ್ಯೆಗನುಗುಣವಾಗಿ ಮುದ್ರಿಸಿಕೊಳ್ಳುವುದು.
3. ಪ್ರಶ್ನೆಪತ್ರಿಕೆಗಳ ಮುದ್ರಣ ಸಂದರ್ಭದಲ್ಲಿ ಪೆನ್‌ಡ್ರೈವ್ / ಹಾರ್ಡ್ ಡಿಸ್ಕ್ / ಮೊಬೈಲ್ ಫೋನ್ ಇತ್ಯಾದಿಗಳನ್ನು ಬಳಸದಂತೆ ಕ್ರಮವಹಿಸುವುದು.
4. ಮುದ್ರಣ ಕಾರ್ಯ ಮುಗಿದ ನಂತರ ಹೆಚ್ಚುವರಿಯಾಗಿ ಪ್ರಶ್ನೆಪತ್ರಿಕೆಗಳು ಉಳಿದಿದ್ದಲ್ಲಿ ಅವುಗಳನ್ನು ಸೂಕ್ತ ಭದ್ರತೆಯೊಂದಿಗೆ ಸುರಕ್ಷಿತವಾಗಿ ಸಂರಕ್ಷಿಸಿಕೊಂಡು ಪರೀಕ್ಷೆ ಮುಗಿದ ನಂತರ ಅವುಗಳನ್ನು ನಿಯಮಾನುಸಾರ ವಿಲೇ ಮಾಡುವುದು.
5. ಪ್ರಶ್ನೆಪತ್ರಿಕೆಗಳು ಮುದ್ರಣ ಕಾರ್ಯ ಪೂರ್ಣಗೊಂಡ ನಂತರ ಪ್ರಶ್ನೆಪತ್ರಿಕೆಗಳ ಎಲ್ಲಾ ಮಾಹಿತಿಗಳನ್ನು ಅಳಿಸಿ ಹಾಕಿರುವುದನ್ನು ಮತ್ತು ಯಾವುದೇ ಮಾಹಿತಿಯು ಗಣಕಯಂತ್ರದಲ್ಲಿ ಉಳಿದುಕೊಳ್ಳದಿರುವ ಬಗ್ಗೆ ಖಾತ್ರಿಪಡಿಸಿಕೊಳ್ಳುವುದು.
6. ಮುದ್ರಣ ಕಾರ್ಯ ನಿರ್ವಹಿಸುವಾಗ ಸರಿಯಾಗಿ ಮುದ್ರಣ ಆಗದಿರುವ, ಬಳಸಲು ಯೋಗ್ಯವಲ್ಲದ ಅಥವಾ ಅಪೂರ್ಣವಾಗಿ ಮುದ್ರಿತವಾಗಿರುವ ಕಾಗದಗಳನ್ನು ಸಂಪೂರ್ಣವಾಗಿ ನಾಶಮಾಡುವುದು.
7. ಪರೀಕ್ಷಾ ನಂತರ ಉತ್ತರಪತ್ರಿಕೆಗಳ ಮೌಲ್ಯಮಾಪನವನ್ನು ಶಾಲಾ ಹಂತದಲ್ಲಿ ಮಾಡುವುದು.
ವಿಶೇಷ ಸೂಚನೆ:
ಪ್ರಶ್ನೆಪತ್ರಿಕೆಗಳನ್ನು ಡೌನ್ ಲೋಡ್ ಮಾಡಿಕೊಳ್ಳುವ ಸಂದರ್ಭದಲ್ಲಿ ಶಾಲೆಯ ಮುಖ್ಯ ಶಿಕ್ಷಕರ ನೋಂದಾಯಿತ ಮೊಬೈಲ್ ಸಂಖ್ಯೆಗೆ ಮಂಡಲಿಯಿಂದ ಓ.ಟಿ.ಪಿ ರವಾನಿಸಲಾಗುತ್ತದೆ. ಸದರಿ ಓ.ಟಿ.ಪಿ.ಯನ್ನು ಬಳಸಿಕೊಂಡು ಪ್ರಶ್ನೆಪತ್ರಿಕೆಗಳನ್ನು ಡೌನ್‌ಲೋಡ್ ಮಾಡಿಕೊಳ್ಳುವುದು. ಡೌನ್‌ಲೋಡ್ ಮಾಡಿಕೊಂಡಿರುವ ಪ್ರಶ್ನೆಪತ್ರಿಕೆಯ ಮೇಲೆ ಲಾಗಿನ್ ಶಾಲಾ ಸಂಕೇತ Watermark ಆಗುವುದು. ಯಾವುದಾದರೂ ಶಾಲೆಯ ಪ್ರಶ್ನೆಪತ್ರಿಕೆಗಳು ಪರೀಕ್ಷಾ ಪೂರ್ವದಲ್ಲಿ ಮತ್ತು ಪರೀಕ್ಷಾ ಸಂದರ್ಭದಲ್ಲಿ ಸೋರಿಕೆಯಾದಲ್ಲಿ ಸಂಬಂಧಿಸಿದ ಶಾಲಾ ಮುಖ್ಯ ಶಿಕ್ಷಕರ ಮೇಲೆ ನಿಯಮಾನುಸಾರ ಕ್ರಮ ಜರುಗಿಸಲಾಗುವುದು. ಆದ್ದರಿಂದ 2025-26ನೇ ಸಾಲಿನ ಪೂರ್ವಸಿದ್ಧತಾ ಪರೀಕ್ಷೆಯಲ್ಲಿ ಯಾವುದೇ ವ್ಯತ್ಯಾಸಗಳಾಗದಂತೆ ಜಿಲ್ಲಾ ಉಪನಿರ್ದೇಶಕರು (ಆಡಳಿತ) ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ತಮ್ಮ ಜಿಲ್ಲಾ/ತಾಲ್ಲೂಕು ವ್ಯಾಪ್ತಿಯ ಎಲ್ಲಾ ಶಾಲೆಗಳ ಮುಖ್ಯ ಶಿಕ್ಷಕರಿಗೆ ಸೂಕ್ತ ಮಾರ್ಗದರ್ಶನ ನೀಡುವುದರ ಮೂಲಕ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಸೂಕ್ತ ಕ್ರಮವಹಿಸುವಂತೆ ಈ ಮೂಲಕ ತಿಳಿಸಿದೆ. ಹಾಗೆಯೇ, ಮೌಲ್ಯಮಾಪನದ ನಂತರ ವಿದ್ಯಾರ್ಥಿಗಳ ಅಂಕಗಳನ್ನು ಸ್ಮಾಟ್ಸ್ ತಂತ್ರಾಂಶದಲ್ಲಿ ಅಪ್ ಲೋಡ್ ಮಾಡಿ, ಕಲಿಕೆಯಲ್ಲಿ ಹಿಂದುಳಿದ ವಿದ್ಯಾರ್ಥಿಗಳ ಕಲಿಕೆಗೆ ಗಮನಹರಿಸುವಂತೆ ತಿಳಿಸಿದೆ.

CLICK HERE TO DOWNLOAD GUIDELINES