CLT UPDATE:Computer literacy Test Slots will be opening shortly-2025

CLT UPDATE: Computer literacy Test Slots will be opening shortly.

Computer literacy Test: ಸರ್ಕಾರದ ಅಧಿಸೂಚನೆ ಸಂಖ್ಯೆ: ಸಿಆಸುಇ 103 ಸೇವನೆ 2024, ದಿನಾಂಕ: 06-02-2025ರಲ್ಲಿ ಕರ್ನಾಟಕ ನಾಗರಿಕ ಸೇವಾ (ಕಂಪ್ಯೂಟರ್ ಸಾಕ್ಷರತಾ) ಪರೀಕ್ಷೆ ನಿಯಮಗಳು 2012ರ ನಿಯಮ 3(ಬಿ)ಕ್ಕೆ ಮಾಡಿರುವ ತಿದ್ದುಪಡಿಯನ್ವಯ ದಿನಾಂಕವನ್ನು “31-12-2025 ರವರೆಗೆ” ರಾಜ್ಯದ ಸರ್ಕಾರಿ ಅಧಿಕಾರಿಗಳು ಮತ್ತು ನೌಕರರಿಗೆ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳಲು ಅವಕಾಶ ನೀಡಲಾಗಿರುತ್ತದೆ.

ಸುತ್ತೋಲೆ ಸಂಖ್ಯೆ: ಸಿಆಸುಇ 29 ಸೇವೆನೆ 2020, ದಿನಾಂಕ: 03-04-2023ರಲ್ಲಿ ದಿನಾಂಕ: 31-12-2023ರೊಳಗೆ ಅಥವಾ ತಮ್ಮ ಪರಿವೀಕ್ಷಣಾ ಅವಧಿಯೊಳಗೆ ಯಾವುದು ನಂತರವೋ ಅದರೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗುವುದು ಕಡ್ಡಾಯವಾಗಿರುತ್ತದೆ. ಸದರಿ ಅವಧಿಯೊಳಗಾಗಿ ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದ ನೌಕರರು ಪರಿವೀಕ್ಷಣಾ ಅವಧಿ, ಮುಂಬಡ್ತಿ ಹಾಗೂ ವಾರ್ಷಿಕ ವೇತನ ಬಡ್ತಿ ಇತ್ಯಾದಿಗಳನ್ನು ಪಡೆಯಲು ಅನರ್ಹರಾಗಿರುತ್ತಾರೆ.

ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯಲ್ಲಿ ಉತ್ತೀರ್ಣರಾಗದೆ ಇರುವ ಸರ್ಕಾರಿ ನೌಕರರು ದಿನಾಂಕ: 31-12-2025 ರ ಒಳಗೆ ಪರೀಕ್ಷೆ ತೆಗೆದುಕೊಂಡು ಉತ್ತೀರ್ಣರಾಗಲು ಸೂಚಿಸಲಾಗಿರುತ್ತದೆ.

ಆದುದರಿಂದ, ಕಂಪ್ಯೂಟರ್ ಸಾಕ್ಷರತಾ ಪರೀಕ್ಷೆಯನ್ನು ತೆಗೆದುಕೊಳ್ಳುವ ಅಧಿಕಾರಿ/ ನೌಕರರು https://clt.karnataka.gov.in ಹಾಗೂ ನಿಗಮ ಮಂಡಳಿಗಳ ಅಧಿಕಾರಿ/ ನೌಕರರು https://nkclt.clt.karnataka.gov.in ವಿವರಗಳನ್ನು ನೋಂದಾಯಿಸಿ ಪರೀಕ್ಷೆಯನ್ನು ತೆಗೆದುಕೊಳ್ಳಬಹುದು. ಹೆಚ್ಚಿನ ವಿವರಗಳಿಗೆ ಮೇಲ್ಕಂಡ ವೆಬ್‌ಸೈಟ್‌ನಿಂದ ಮಾಹಿತಿ ಪಡೆಯಬಹುದಾಗಿದೆ.

 

ಪತ್ರಿಕಾ ಮಾಹಿತಿಗಾಗಿ – CLICK HERE

ಹೆಚ್ಚಿನ ಮಾಹಿತಿಗಾಗಿ – CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!