Age Relaxation for Class 1 Admissions 2026–27:1ನೇ ತರಗತಿ ವಯೋಮಿತಿ ಸಡಿಲಿಕೆ ಕುರಿತು ಸಂಪೂರ್ಣ ಮಾಹಿತಿ

Age Relaxation for Class 1 Admissions 2026–27:1ನೇ ತರಗತಿ ವಯೋಮಿತಿ ಸಡಿಲಿಕೆ ಕುರಿತು ಸಂಪೂರ್ಣ ಮಾಹಿತಿ

Age Relaxation for Class 1 Admissions 2026–27: ಪೋಷಕರಿಗೆ ಮುಖ್ಯ ಸುದ್ದಿ! 1ನೇ ತರಗತಿ ಪ್ರವೇಶ ವಯೋಮಿತಿ ಸಡಿಲಿಕೆ 2026-27ಕ್ಕೆ ಅನ್ವಯಿಸುತ್ತದೆ. ಯಾರು ಅರ್ಹರು? ಇಲ್ಲಿ ತಿಳಿದುಕೊಳ್ಳಿ.

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಸಂಖ್ಯೆ (೧)ರ ಆದೇಶದಲ್ಲಿ ಶಿಕ್ಷಣ ಹಕ್ಕು ಕಾಯ್ದೆ, 2009 ಮತ್ತು ಕಡ್ಡಾಯ ಶಿಕ್ಷಣ ನಿಯಮಗಳು, 2012ರಂತೆ ಶೈಕ್ಷಣಿಕ ವರ್ಷದ ಜೂನ್ 1ನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (21ರ ತಿದ್ದುಪಡಿ ಆದೇಶದಲ್ಲಿ ಶೈಕ್ಷಣಿಕ ವರ್ಷದ ಜೂನ್ ಒಂದನೇ ತಾರೀಖಿಗೆ ಕಡ್ಡಾಯವಾಗಿ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿರುವುದನ್ನು 2025-2026ನೇ ಶೈಕ್ಷಣಿಕ ಸಾಲಿನಿಂದ ಅನ್ವಯವಾಗುವಂತೆ ತಿದ್ದುಪಡಿ ಮಾಡಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3)ರ ಏಕ ಕಡತದಲ್ಲಿ ಒಂದನೇ ತರಗತಿ ಪ್ರವೇಶಾತಿಗೆ ಪ್ರಸ್ತುತ ನಿಗದಿಪಡಿಸಿರುವ ಕನಿಷ್ಠ 6 ವರ್ಷಗಳ ವಯೋಮಿತಿಯನ್ನು ಸಡಿಲಿಸಲು ರಾಜ್ಯಾದ್ಯಂತ ಪೋಷಕರಿಂದ ಹಲವಾರು ಮನವಿಗಳು ಸ್ವೀಕೃತವಾಗುತ್ತಿದ್ದು ಒಂದನೇ ತರಗತಿಗೆ 5 ವರ್ಷ 5 ತಿಂಗಳು ವಯೋಮಿತಿಯನ್ನು ಮರು ನಿಗದಿಪಡಿಸಲು ಸರ್ಕಾರಕ್ಕೆ ಪ್ರಸ್ತಾವನೆ ಸಲ್ಲಿಸಿರುವ ಮೇರೆಗೆ ಸದರಿ ಪ್ರಸ್ತಾವನೆಯನ್ನು ಪರಿಶೀಲಿಸಿ ಸಲಹೆ ನೀಡುವಂತೆ ರಾಜ್ಯ ಶಿಕ್ಷಣ ನೀತಿ ಆಯೋಗವನ್ನು ಕೋರಲಾಗಿದ್ದು, ಕ್ರಮಾಂಕ (4)ರಲ್ಲಿ ವಯೋಮಿತಿಯನ್ನು ನಿಗದಿಪಡಿಸುವ ಹಾಗೂ ಸಡಿಲಿಸುವ ಅಂಶಗಳಿಗೆ ರಾಜ್ಯ ಶಿಕ್ಷಣ ನೀತಿ ಆಯೋಗವು ಕೆಳಕಂಡಂತೆ ಅಭಿಪ್ರಾಯ ನೀಡಿರುತ್ತದೆ

ಸಂವಿಧಾನದ ಅನುಚ್ಛೇದ 21(ಎ), ಶಿಕ್ಷಣ ಹಕ್ಕು ಕಾಯ್ದೆ 2009, ಕಡ್ಡಾಯ ಶಿಕ್ಷಣ ನಿಯಮಗಳು, 2012 ಮತ್ತು ರಾಷ್ಟ್ರೀಯ ಶಿಕ್ಷಣ ನೀತಿ 2020ರನ್ವಯ 7ನೇ ತರಗತಿಯ ಪ್ರವೇಶಕ್ಕೆ 6(ಆರು) ವರ್ಷಗಳ ಕನಿಷ್ಠ ವಯೋಮಿತಿ ನಿಗದಿಪಡಿಸುವುದು ಅಗತ್ಯ ಮತ್ತು ಔಚಿತ್ಯಪೂರ್ಣ ಈ ವಿಷಯದಲ್ಲಿ ಅನುಸರಿಸಲಾಗುತ್ತಿರುವ ರಾಷ್ಟ್ರೀಯ ಮತ್ತು ಅಂತರಾಷ್ಟ್ರೀಯ ಪದ್ಧತಿಗಳು ಮಗುವಿನ ಮಾನಸಿಕ ಬೆಳವಣಿಗೆ ಮತ್ತು ಕೇಂದ್ರ ಸರ್ಕಾರ ಮತ್ತು ವಿವಿಧ ರಾಜ್ಯ ಸರ್ಕಾರಗಳು 1ನೇ ತರಗತಿಯ ದಾಖಲಾತಿಗೆ 6 ವರ್ಷಗಳ ಕನಿಷ್ಠ ವಯೋಮಿತಿಯನ್ನು ನಿಗದಿಪಡಿಸಿರುವುದು ಹಾಗೂ ಮಗುವಿನ ಒತ್ತಡ ರಹಿತ ಕಲಿಕೆಗೆ ಪೂರಕವಾಗಿ ರಾಜ್ಯ ಸರ್ಕಾರವು ನಿಗದಿಪಡಿಸಿರುವ 6 ವರ್ಷಗಳ ಕನಿಷ್ಠ ವಯೋಮಿತಿಯು ಸಮರ್ಪಕವಾಗಿರುತ್ತದೆ. ಅಲ್ಲದೇ ವೈಯಕ್ತಿಕ ತೊಡಕುಗಳನ್ನು ಪರಿಗಣಿಸಿ ಶಿಕ್ಷಣ ನೀತಿಯಲ್ಲಿ ಬದಲಾವಣೆ ಮಾಡಲಾಗದೆಂಬ ಅಂಶವನ್ನು ವಿವಿಧ ನ್ಯಾಯಾಲಯಗಳು ಎತ್ತಿ ಹಿಡಿದಿರುವುದಾಗಿ ತನ್ನ ವರದಿಯಲ್ಲಿ ಸ್ಪಷ್ಟಪಡಿಸಿ 2025-26ರ ಶೈಕ್ಷಣಿಕ ವರ್ಷಕ್ಕಿಂತ ಪೂರ್ವದಲ್ಲಿ ಪೂರ್ವ ಪ್ರಾಥಮಿಕ ತರಗತಿಗಳನ್ನು ಪೂರ್ಣಗೊಳಿಸಿರುವ ಮಕ್ಕಳ ಶೈಕ್ಷಣಿಕ ಹಿತದೃಷ್ಟಿಯಿಂದ ಈಗಾಗಲೇ ನಿಗದಿಪಡಿಸಿರುವ 6 ವರ್ಷಗಳ ಕನಿಷ್ಠ ವಯೋಮಿತಿಗೆ ವಿನಾಯತಿ ನೀಡಬಹುದೆಂದು ಅಭಿಪ್ರಾಯ ನೀಡಿರುತ್ತದೆ.”

ಮೇಲೆ ಓದಲಾದ ಕ್ರಮಸಂಖ್ಯೆ (5)ರ ಆದೇಶದನ್ವಯ ದಿನಾಂಕ: 26.07.2022ರ ಆದೇಶದಲ್ಲಿ ನಿಗದಿಪಡಿಸಿರುವ ವಯೋಮಿತಿಯನ್ನು ರಾಜ್ಯ ಶಿಕ್ಷಣ ನೀತಿ ಆಯೋಗವು ಮಾಡಿದ ಶಿಫಾರಸ್ಸಿನ ಮೇರೆಗೆ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ಪೂರ್ಣಗೊಳಿಸಿರುವ ಹಾಗೂ ಶೈಕ್ಷಣಿಕ ವರ್ಷದ ಜೂನ್ 1ನೇ ದಿನಾಂಕಕ್ಕೆ 5 ವರ್ಷ 5 ತಿಂಗಳು ಪೂರ್ಣಗೊಂಡಿರುವ ಮಕ್ಕಳಿಗೆ ಅನ್ವಯವಾಗುವಂತೆ ಮಾತ್ರ ಒಂದು ಬಾರಿಗೆ 2025-2026ನೇ ಶೈಕ್ಷಣಿಕ ವರ್ಷಕ್ಕೆ ಸೀಮಿತಗೊಳಿಸಿ ಒಂದನೇ ತರಗತಿಗೆ ದಾಖಲು ಮಾಡಿಕೊಳ್ಳಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಸಂಖ್ಯೆ (5)ರ ಅಧಿನಿಯಮದ ಕಲಂ 20ರಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ದಾಖಲಾಗುವ ಮಗುವಿನ ವಯಸ್ಸನ್ನು ಲೆಕ್ಕಹಾಕುವ ಬಗ್ಗೆ, ಕೆಳಕಂಡಂತೆ ಸ್ಪಷ್ಟಪಡಿಸಲಾಗಿದೆ.

‘ಮಗುವಿನ ವಯಸ್ಸನ್ನು, ಶೈಕ್ಷಣಿಕ ವರ್ಷದ ಪ್ರಾರಂಭದ ದಿನದಂದು ಅಥವಾ ಅದಕ್ಕೆ ಮುಂಚೆ, ಆ ಮಗುವಿಗೆ ತುಂಬುವ ಪೂರ್ಣ ವರ್ಷಗಳನ್ನು ಆಧರಿಸಿ ಲೆಕ್ಕ ಹಾಕತಕ್ಕದ್ದು

ಪರಂತು, ಮಗುವಿನ ಜನ್ಮ ದಿನವು ಶೈಕ್ಷಣಿಕ ವರ್ಷದ ಮೊದಲನೇ ದಿನಾಂಕದಿಂದ ಅರವತ್ತು ದಿನಗಳೊಳಗೆ ಬರುವಲ್ಲಿ ಮಗುವಿನ ವಯಸ್ಸನ್ನು ಲೆಕ್ಕ ಹಾಕುವ ಉದ್ದೇಶಕ್ಕಾಗಿ, ಅದರ ಜನ್ಮ ದಿನಾಂಕವು ಶೈಕ್ಷಣಿಕ ವರ್ಷದ ಮೊದಲನೇ ದಿನಾಂಕದಂದು ಬರುವುದಾಗಿ ಭಾವಿಸತಕ್ಕದ್ದು ‘

ಮೇಲೆ ಓದಲಾದ ಕ್ರಮಸಂಖ್ಯೆ (5)ರ ದಿನಾಂಕ 16:04 2025ರ ಆದೇಶದಲ್ಲಿ ಕಲ್ಪಿಸಿರುವ ವಯೋಮಿತಿಯ ಸಡಿಲಿಕೆಯನ್ನು 2026-27ನೇ ಶೈಕ್ಷಣಿಕ ವರ್ಷಕ್ಕೂ ಮುಂದುವರೆಸುವಂತೆ ಕೋರಿ ರಾಜ್ಯಾದ್ಯಂತ ಶೈಕ್ಷಣಿಕ ವರ್ಷದ ಪ್ರಾರಂಭದ ದಿನಾಂಕಕ್ಕೆ 06 ವರ್ಷಗಳು ಪೂರ್ಣಗೊಳ್ಳದ ಮಕ್ಕಳ ಪೋಷಕರು ಸರ್ಕಾರಕ್ಕೆ ಮನವಿ / ಅಹವಾಲುಗಳನ್ನು ಸಲ್ಲಿಸಿರುವ ಮೇರೆಗೆ ಕರ್ನಾಟಕ ಶಿಕ್ಷಣ ಅಧಿನಿಯಮ, 1983ರ ಕಲಂ 20ರಲ್ಲಿ ಪ್ರಾಥಮಿಕ ಶಿಕ್ಷಣಕ್ಕೆ ದಾಖಲಾಗುವ ಮಗುವಿನ ವಯಸ್ಸನ್ನು ಲೆಕ್ಕಹಾಕಲು ಕಲ್ಪಿಸಿರುವ ಅವಕಾಶದನ್ವಯ ಪ್ರಸ್ತಾವನೆಯನ್ನು ಕೂಲಂಕಷವಾಗಿ ಪರಿಶೀಲಿಸಿ, ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ EP 54 PGC 2026 ಬೆಂಗಳೂರು ದಿನಾಂಕ:10-04-2026

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯ ಶಿಕ್ಷಣ ನೀತಿ ಆಯೋಗದ ಶಿಫಾರಸ್ಸು / ಅಭಿಪ್ರಾಯವನ್ನು ಪರಿಗಣಿಸಿ ಸರ್ಕಾರದ ಆದೇಶ ಸಂಖ್ಯೆ: ಇಪಿ 260 ಪಿಜಿಸಿ 2021, ದಿನಾಂಕ 26.07.2022ರಲ್ಲಿ ಶೈಕ್ಷಣಿಕ ವರ್ಷದ ಜೂನ್ 1ನೇ ದಿನಾಂಕಕ್ಕೆ ನಿಗದಿಪಡಿಸಿರುವ ವಯೋಮಿತಿಯನ್ನು ಮುಂದುವರೆಸುತ್ತಾ, ಕನಿಷ್ಠ 06 ವರ್ಷಗಳು ಪೂರ್ಣಗೊಂಡಿರುವ ಮಗುವನ್ನು ಒಂದನೇ ತರಗತಿಗೆ ದಾಖಲಿಸಲು ವಯೋಮಿತಿಯನ್ನು ನಿಗದಿಪಡಿಸಿ ಆದೇಶಿಸಿದೆ.

ಮುಂದುವರೆದು, ಕರ್ನಾಟಕ ಶಿಕ್ಷಣ ಅಧಿನಿಯಮ, 1983ರ ಕಲಂ 20ರಲ್ಲಿ ಸ್ಪಷ್ಟಪಡಿಸಿರುವಂತೆ ಮಗುವಿನ ವಯಸ್ಸನ್ನು ಶೈಕ್ಷಣಿಕ ವರ್ಷದ ಪ್ರಾರಂಭದ ದಿನದಂದು ಅಥವಾ ಅದಕ್ಕೆ ಮುಂಚೆ. ಆ ಮಗುವಿಗೆ ತುಂಬುವ ಪೂರ್ಣ ವರ್ಷಗಳನ್ನು ಆಧರಿಸಿ ಲೆಕ್ಕ ಹಾಕತಕ್ಕನ್ನು ಶೈಕ್ಷಣಿಕ ವರ್ಷದ ಪ್ರಾರಂಭದ ದಿನವನ್ನಾಗಿ ಜೂನ್ ಒಂದನೇ ದಿನಾಂಕವನ್ನು ಪರಿಗಣಿಸತಕ್ಕದ್ದು

ಪರಂತು, ಮಗುವಿನ ಜನ್ಮ ದಿನವು ಶೈಕ್ಷಣಿಕ ವರ್ಷದ ಮೊದಲನೇ ದಿನಾಂಕದಿಂದ ಅರವತ್ತು ದಿನಗಳೊಳಗೆ ಬರುವಲ್ಲಿ ಮಗುವಿನ ವಯಸ್ಸನ್ನು ಲೆಕ್ಕ ಹಾಕುವ ಉದ್ಧೇಶಕ್ಕಾಗಿ ಮಗುವಿನ ಜನ್ಮ ದಿನಾಂಕವು ಶೈಕ್ಷಣಿಕ ವರ್ಷದ ಮೊದಲನೇ ದಿನಾಂಕದಂದು ಬರುವುದಾಗಿ ಭಾವಿಸತಕ್ಕದ್ದು.

ಅದರಂತೆ 2026-27 ನೇ ಶೈಕ್ಷಣಿಕ ಸಾಲಿಗೆ ಸೀಮಿತವಾಗಿ ಒಂದನೇ ತರಗತಿಗೆ ಮಕ್ಕಳನ್ನು ದಾಖಲು ಮಾಡಿಕೊಳ್ಳುವ ಸಂದರ್ಭದಲ್ಲಿ ಕರ್ನಾಟಕ ಶಿಕ್ಷಣ ಅಧಿನಿಯಮ, 1983ರ ಕಲಂ 20ರಲ್ಲಿ ಕಲ್ಪಿಸಿರುವ ಅವಕಾಶವನ್ನು ಪರಿಗಣಿಸಿ ಶೈಕ್ಷಣಿಕ ವರ್ಷದ ಜೂನ್ 1ರಿಂದ ಗರಿಷ್ಠ 60(ಅರವತ್ತು) ದಿನಗಳ ಸಡಿಲಿಕೆಯನ್ನು ನೀಡಿ ಮಗುವಿನ ವಯಸ್ಸನ್ನು ಲೆಕ್ಕಹಾಕಿ ಶಾಲಾ ದಾಖಲಾತಿಗೆ ಪರಿಗಣಿಸಲು ಆದೇಶಿಸಿದೆ.

ಈ ಆದೇಶವನ್ನು SATS (Student Achievement Tracking System) ತಂತ್ರಾಂಶದಲ್ಲಿ ಸೂಕ್ತ/ ಅವಶ್ಯಕ ಬದಲಾವಣೆಗಳನ್ನು ಮಾಡಿಕೊಳ್ಳುವ ಷರತ್ತಿನೊಂದಿಗೆ ಕಟ್ಟುನಿಟ್ಟಾಗಿ ಅನುಷ್ಠಾನ ಮಾಡುವಂತೆ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಮತ್ತು ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಮತ್ತು ಧಾರವಾಡ ಇವರಿಗೆ ನಿರ್ದೇಶಿಸಿದೆ.

Age Relaxation for Class 1 Admissions 2026–27

 

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!