SSLC 3rd Language Hindi Marks: ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶನ

SSLC 3rd Language Hindi Marks: ಎಸ್‌ಎಸ್‌ಎಲ್‌ಸಿ ತೃತೀಯ ಭಾಷೆ ಹಿಂದಿಗೆ ಅಂಕ ನೀಡಲು ಹೈಕೋರ್ಟ್ ನಿರ್ದೇಶನ

SSLC 3rd Language Hindi Marks: ಎಸ್‌ಎಸ್‌ಎಲ್‌ಸಿ ವಿದ್ಯಾರ್ಥಿಗಳಿಗೆ 2026ರ ಪರೀಕ್ಷೆಯಿಂದಲೇ ಅನ್ವಯವಾಗುವಂತೆ ಮೂರನೇ ಭಾಷಾ ವಿಷಯಗಳಿಗೆ ಅಂಕ ನೀಡುವ ಪದ್ಧತಿ ಕೈಬಿಟ್ಟು, ಗ್ರೇಡ್ ನಮೂದಿಸಲು ಶಾಲಾ ಶಿಕ್ಷಣ ಇಲಾಖೆ ನಿರ್ಧರಿಸಿತ್ತು.

ಹಿಂದಿನ ವರ್ಷಗಳಂತೆ 100 ಅಂಕಗಳಿಗೆ ಪ್ರಶ್ನೆಪತ್ರಿಕೆ ಇದ್ದರೂ ಮೌಲ್ಯ ಮಾಪನದ ನಂತರ ಅಂಕಪಟ್ಟಿಯಲ್ಲಿ ಅಂಕಗಳನ್ನು ನಮೂದಿಸದೆ ಗ್ರೇಡ್ ಎ, ಬಿ, ಸಿ ಎಂದು ನಮೂದಿಸಲಾಗುತ್ತದೆ.

ಇದು ವರೆಗೂ ಮಕ್ಕಳು 625 ಅಂಕಗಳಿಗೆ ಪರೀಕ್ಷೆ ಬರೆಯುತ್ತಿದ್ದರು. ಈಗಲೂ ಅಷ್ಟೇ ಅಂಕಗಳಿಗೆ ಪರೀಕ್ಷೆ ಬರೆಯುತ್ತಾರೆ. ಆದರೆ, ತೃತೀಯ ಭಾಷೆ ಹೊರತುಪಡಿಸಿ ಉಳಿದ ವಿಷಯಗಳ ಗರಿಷ್ಠ 525 ಅಂಕಗಳನ್ನಷ್ಟೇ ಪರಿಗಣಿಸಿ, ಪ್ರತಿ ವಿದ್ಯಾರ್ಥಿಯ ಶೇಕಡವಾರು ಅಂಕಗಳನ್ನು ಲೆಕ್ಕ ಹಾಕಲಾಗುತ್ತದೆ ಎಂದು ಕರಡು ಅಧಿಸೂಚನೆಯಲ್ಲಿ ವಿವರಿಸಲಾಗಿತ್ತು.

ತೃತೀಯ ಭಾಷೆಗೆ ಅಂಕಗಳ ಬದಲು ಗ್ರೇಡ್ ನೀಡುವ ರಾಜ್ಯ ಸರ್ಕಾರದ ನಿರ್ಧಾರ ಪ್ರಶ್ನಿಸಿ ಕೆಲವರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಸಲ್ಲಿಸಿದ್ದರು. 2025ರ ಪರೀಕ್ಷೆ ವೇಳೆ ಜಾರಿಯಲ್ಲಿದ್ದ ನಿಯಮವನ್ನು ಅನುಸರಿಸಲು ಕೋರ್ಟ್ ಸೂಚಿಸಿದೆ.

2025-26ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ ಮಾರ್ಚ್18ಏ.1ರವರೆಗೆ ನಡೆದಿತ್ತು. ಏ.24ರಂದು ಫಲಿತಾಂಶ ಪ್ರಕಟಿಸುವುದಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯನಿರ್ಣಯ ಮಂಡಳಿ ಘೋಷಿಸಿತ್ತು.

SSLC ಹಿಂದಿ ಪರೀಕ್ಷೆ ಉತ್ತರ ಪತ್ರಿಕೆಗಳನ್ನು ಹಿಂದಿನ ವರ್ಷಗಳಂತೆಯೇ ಮೌಲ್ಯಮಾಪನ ಮಾಡಬೇಕು. ಅಂಕಗಳನ್ನು ನೀಡಬೇಕು ಎಂಬ ಹೈಕೋರ್ಟ್ ನಿರ್ದೇಶನ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿದ್ದ ಮರುಪರಿಶೀಲನಾ ಅರ್ಜಿಯ ವಿಚಾರಣೆ 21ರಂದು ನಡೆದು ರಾಜ್ಯ ಹೈಕೋರ್ಟ್ ಅಂಕಗಳನ್ನು ನೀಡುವಂತೆ  ನಿರ್ದೇಶನ ನೀಡಿದೆ.

ಹೈಕೋರ್ಟ್ ಆದೇಶದ ಮರುಪರಿಶೀಲನೆಗಾಗಿ ಸರ್ಕಾರ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಇ.ಎಸ್. ಇಂದಿರೇಶ್ ಅವರ ಪೀಠ, ಪ್ರಸ್ತುತ ಶೈಕ್ಷಣಿಕ ಸಾಲಿನಲ್ಲಿ ಹಿಂದಿ ವಿಷಯಕ್ಕೆ ಗ್ರೇಡ್ ಬದಲು ಅಂಕಗಳನ್ನು ನೀಡುವಂತೆ ನಿರ್ದೇಶನ ನೀಡಿತು. ಸರ್ಕಾರದ ಪರವಾಗಿ ಅಡ್ವೊಕೆಟ್ ಜನರಲ್ ಶಶಿಕಿರಣ್ ಶೆಟ್ಟಿ ವಾದ ಮಂಡಿಸಿದರು. ಆದರೆ, ಇದೇ ವಿಚಾರಕ್ಕೆ ಸಂಬಂಧಿಸಿದ ಪಿಐಎಲ್ ಅರ್ಜಿಯನ್ನು ಹೈಕೋರ್ಟ್ ವಿಭಾಗೀಯ ಪೀಠ ವಜಾಗೊಳಿಸಿದೆ.

SSLC 3rd Language Hindi

 

 

CLICK HERE MORE NEWS

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!