Teaching Recruitment Rules 2026:ಹೊಸ ವಿಶೇಷ ನೇಮಕಾತಿ ನಿಯಮಗಳು ಪ್ರಕಟ – ಸಂಪೂರ್ಣ ಮಾಹಿತಿ ಇಲ್ಲಿದೆ.

Teaching Recruitment Rules 2026:ಹೊಸ ವಿಶೇಷ ನೇಮಕಾತಿ ನಿಯಮಗಳು ಪ್ರಕಟ – ಸಂಪೂರ್ಣ ಮಾಹಿತಿ ಇಲ್ಲಿದೆ.

Teaching Recruitment Rules 2026:ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ) (ವಿಶೇಷ) ನಿಯಮಗಳು, 2026 ಕರಡು ಪ್ರಕಟ

ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ) (ವಿಶೇಷ) ನಿಯಮಗಳು, 2026ನ್ನು ಪ್ರಸ್ತಾಪಿಸಿದಂತೆ ಕರ್ನಾಟಕ ರಾಜ್ಯ ನಾಗರಿಕ ಸೇವೆಗಳ ಅಧಿನಿಯಮ 1978 (1990ರ ಕರ್ನಾಟಕ ಅಧಿನಿಯಮ 14) ರ ಕಲಂ 3 ಉಪ ಕಲಂ (1) ರೊಂದಿಗೆ ಓದಿಕೊಂಡ ಕಲಂ 8 ರಂತೆ ಪ್ರದತ್ತವಾದ ಅಧಿಕಾರದನ್ವಯ ಕರ್ನಾಟಕ ಸರ್ಕಾರವು ಉದ್ದೇಶಿಸಿದ್ದು ಅದರಿಂದ ಬಾಧಿತರಾಗಲು ಸಂಭವವಿರುವ ಎಲ್ಲಾ ವ್ಯಕ್ತಿಗಳ ಮಾಹಿತಿಗಾಗಿ ಸದರಿ ಅಧಿನಿಯಮದ ಕಲಂ-3 ರ ಉಪ ಕಲಂ (2) ರ ಖಂಡ (ಎ) ರಲ್ಲಿ ಅಗತ್ಯಪಡಿಸಿರುವಂತೆ ಈ ಮೂಲಕ ಪ್ರಕಟಿಸಿದೆ ಹಾಗೂ ಸದರಿ ಕರಡು ತಿದ್ದುಪಡಿ ನಿಯಮಗಳನ್ನು ಅವುಗಳು ಕರ್ನಾಟಕ ರಾಜ್ಯಪತ್ರದಲ್ಲಿ ಪ್ರಕಟಗೊಂಡ ದಿನಾಂಕದಿಂದ 15 ದಿನಗಳ ನಂತರ ಪರಿಗಣನೆಗೆ ತೆಗೆದುಕೊಳ್ಳಲಾಗುವುದೆಂದು ಈ ಮೂಲಕ ತಿಳಿಸಲಾಗಿದೆ.

ಸದರಿ ಕರಡು ತಿದ್ದುಪಡಿ ನಿಯಮಗಳ ಕುರಿತಂತೆ ಯಾವುದೇ ವ್ಯಕ್ತಿಯಿಂದ ನಿಗದಿತ ಅವಧಿಯೊಳಗೆ ಸ್ವೀಕೃತವಾಗುವ ಯಾವುದೇ ಆಕ್ಷೇಪಣೆ ಅಥವಾ ಸಲಹೆಗಳನ್ನು ರಾಜ್ಯ ಸರ್ಕಾರವು ಪರಿಗಣಿಸುವುದು. ಆಕ್ಷೇಪಣೆ ಮತ್ತು ಸಲಹೆಗಳನ್ನು ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ, ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ, 6ನೇ ಮಹಡಿ, ಬಹುಮಹಡಿಗಳ ಕಟ್ಟಡ, ಡಾ|| ಬಿ.ಆರ್. ಅಂಬೇಡ್ಕರ್ ವೀದಿ, ಬೆಂಗಳೂರು -560 001 ಇವರ ವಿಳಾಸಕ್ಕೆ ಕಳುಹಿಸತಕ್ಕದ್ದು.

ಕರಡು ನಿಯಮಗಳು

1. ಶೀರ್ಷಿಕೆ ಪ್ರಾರಂಭ ಮತ್ತು ಅನ್ವಯ- (1) ಈ ನಿಯಮಗಳನ್ನು ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು

(ಸಾರ್ವಜನಿಕ ಶಿಕ್ಷಣ ಇಲಾಖೆ) (ಕೆಲವು ಬೋಧನಾ ಹುದ್ದೆಗಳಿಗೆ ನೇಮಕಾತಿ) (ವಿಶೇಷ) ನಿಯಮಗಳು, 2026 ಎಂದು ಕರೆಯತಕ್ಕದ್ದು.

(2) ಈ ನಿಯಮಗಳು ಕರ್ನಾಟಕ ರಾಜ್ಯ ಪತ್ರದಲ್ಲಿ ಪ್ರಕಟಣೆಗೊಂಡ ದಿನಾಂಕದಿಂದ ಜಾರಿಯಾಗತಕ್ಕದ್ದು.

(3) ಕರ್ನಾಟಕ ನಾಗರಿಕ ಸೇವೆಗಳು (ಸಾಮಾನ್ಯ ನೇಮಕಾತಿ) ನಿಯಮಗಳು 1977 ಅಥವಾ ಕರ್ನಾಟಕ ಶಿಕ್ಷಣ ಇಲಾಖೆಯ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು 1967ಕ್ಕೆ ಅಥವಾ ಕರ್ನಾಟಕ ನಾಗರಿಕ ಸೇವಾ (ವರ್ಗೀಕರಣ, ನಿಯಂತ್ರಣ ಮತ್ತು ಮೇಲ್ಮನವಿ) ನಿಯಮ 1957 ಅಥವಾ ಕರ್ನಾಟಕ ರಾಜ್ಯ ನಾಗರಿಕ ಸೇವಾ ಕಾಯಿದೆ 1978 (1990 ರ ಕರ್ನಾಟಕ ಕಾಯಿದೆ 14) ಅಡಿಯಲ್ಲಿ ಮಾಡಲಾದ ಅಥವಾ ಮಾಡಲಾಗಿದೆ ಎಂದು ಭಾವಿಸಲಾದ ಯಾವುದೇ ನೇಮಕಾತಿ ನಿಯಮಗಳಲ್ಲಿ ಏನೇ ಒಳಗೊಂಡಿದ್ದರೂ ಈ ನಿಯಮಗಳ ಉಪಬಂಧಗಳು ನಿರ್ದಿಷ್ಟಪಡಿಸಿದ ಹುದ್ದೆಗಳ ನೇಮಕಾತಿಗೆ ಅನ್ವಯಿಸುತ್ತವೆ.

(4) ಈ ನಿಯಮಗಳ ಉಪಬಂಧಗಳು ಒಂದಕ್ಕಿಂತ ಹೆಚ್ಚು ನೇಮಕಾತಿಗಳಿಗೆ ಅನ್ವಯಿಸುವುದಿಲ್ಲ.

2. ವ್ಯಾಖ್ಯೆಗಳು- (1) ಈ ನಿಯಮಗಳಲ್ಲಿ ಸಂದರ್ಭವು ಅನ್ಯಥಾ ಅಗತ್ಯಪಡಿಸಿದ ಹೊರತು.

(ಎ) “ನೇಮಕಾತಿ ಪ್ರಾಧಿಕಾರ” ಎಂದರ ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5 ನೇ ತರಗತಿ), ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6 ರಿಂದ 8 ನೇ ತರಗತಿ), ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್ – 11) (1 ರಿಂದ 8 ನೇ ತರಗತಿ), ಗಣಕ ವಿಜ್ಞಾನ ಶಿಕ್ಷಕರು (1 ರಿಂದ 8 ನೇ ತರಗತಿ), ಪ್ರೌಢ ಶಾಲಾ ಸಹ ಶಿಕ್ಷಕರು ಮತ್ತು ಪ್ರೌಢ ಶಾಲಾ ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1ರ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯಾ ಜಿಲ್ಲಾ ಉಪನಿರ್ದೇಶಕರು (ಆಡಳಿತ), ಶಾಲಾ ಶಿಕ್ಷಣ ಇಲಾಖೆರವರು.

(ಬಿ) “ಪರೀಕ್ಷಾ ಪ್ರಾಧಿಕಾರ” ಎಂದರೆ, ನಿಯಮ 3 ರಡಿ ನಿರ್ದಿಷ್ಟಪಡಿಸಿದ ಈ ನಿಯಮಗಳ ಅಡಿಯಲ್ಲಿ ನೇಮಕಾತಿ ಉದ್ದೇಶಕ್ಕಾಗಿ ರಚಿಸಲಾದ ಕೇಂದ್ರೀಕೃತ ದಾಖಲಾತಿ ಘಟಕ.

(ಸಿ) ‘ಅರ್ಹತಾ ಪರೀಕ್ಷೆ’ ಎಂದರೆ ಅನುಸೂಚಿ-1ರ ಕಾಲಂ (3) ರಲ್ಲಿ ನಿರ್ದಿಷ್ಟಪಡಿಸಿದ ಪ್ರತಿಯೊಂದು ಹುದ್ದೆಗಳಿಗೆ ನೇಮಕಾತಿಗಾಗಿ ಕಾಲಂ (2) ರಲ್ಲಿ ನಿರ್ದಿಷ್ಟಪಡಿಸಿದ ಕನಿಷ್ಕ ಅರ್ಹತೆ;

(ಡಿ) ‘ಆಯ್ಕೆ ಪ್ರಾಧಿಕಾರ’ ಎಂದರೆ.-

(i) ಪ್ರಾಥಮಿಕ ಶಾಲಾ ಶಿಕ್ಷಕರು (1 ರಿಂದ 5 ನೇ ತರಗತಿ), ಪದವೀಧರ ಪ್ರಾಥಮಿಕ ಶಾಲಾ ಶಿಕ್ಷಕರು (6 ರಿಂದ 8 ನೇ ತರಗತಿ), ದೈಹಿಕ ಶಿಕ್ಷಣ ಶಿಕ್ಷಕರು (ಗ್ರೇಡ್ – 11) (1 ರಿಂದ 8 ನೇ ತರಗತಿ) ಮತ್ತು ಗಣಕ ವಿಜ್ಞಾನ ಶಿಕ್ಷಕರು (1 ರಿಂದ 8 ನೇ ತರಗತಿ ವೃಂದಗಳಲ್ಲಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಸಂಬಂಧಿತ ಶೈಕ್ಷಣಿಕ ಜಿಲ್ಲೆಯ ಪ್ರಭಾರ ಹೊಂದಿರುವ ಶಾಲಾ ಶಿಕ್ಷಣ ಇಲಾಖೆಯ ಉಪನಿರ್ದೇಶಕರು (ಆಡಳಿತ); ಮತ್ತು

(i) ಪ್ರೌಢ ಶಾಲಾ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರು ಗ್ರೇಡ್-1ರ ವೃಂದಗಳಲ್ಲಿನ ಹುದ್ದೆಗಳಿಗೆ ಸಂಬಂಧಿಸಿದಂತೆ ಆಯಾ ಶೈಕ್ಷಣಿಕ ವಿಭಾಗದ ಪ್ರಭಾರ ಹೊಂದಿರುವ ಶಾಲಾ ಶಿಕ್ಷಣ ಇಲಾಖೆಯ ವಿಭಾಗೀಯ ಜಂಟಿ ನಿರ್ದೇಶಕರು.

(ಇ) “ಅನುಸೂಚಿ” ಎಂದರೆ ಈ ನಿಯಮಗಳಿಗೆ ಲಗತ್ತಿಸಲಾದ ಅನುಸೂಚಿ;

(ಎಫ್) “ಖಾಲಿ ಹುದ್ದೆಗಳು” ಎಂದರೆ ಅನುಸೂಚಿ-1ರ ಕಾಲಂ (4) ರಲ್ಲಿ ನಿರ್ದಿಷ್ಟಪಡಿಸಿದ ಖಾಲಿ ಹುದ್ದೆಗಳ ಸಂಖ್ಯೆ

(ಜಿ) ಈ ನಿಯಮಗಳಲ್ಲಿ ಬಳಸಲಾದ ಆದರೆ ಅದರಲ್ಲಿ ವಾಖ್ಯಾನಿಸದ ಪದಗಳು ಮತ್ತು ಅಭಿವ್ಯಕ್ತಿಗಳು ಸಂದರ್ಭಾನುಸಾರ ಕರ್ನಾಟಕ ನಾಗರಿಕ ಸೇವಾ (ಸಾಮಾನ್ಯ ನೇಮಕಾತಿ) ನಿಯಮಗಳು, 1977 ಅಥವಾ ಕರ್ನಾಟಕ ಶಿಕ್ಷಣ ಇಲಾಖೆ ಸೇವೆಗಳು (ಸಾರ್ವಜನಿಕ ಶಿಕ್ಷಣ ಇಲಾಖೆ) (ನೇಮಕಾತಿ) ನಿಯಮಗಳು, 1967 ರಲ್ಲಿ ಅವುಗಳಿಗೆ ನಿಗದಿಪಡಿಸಿದ ಅರ್ಥವನ್ನು ಹೊಂದಿರುತ್ತವೆ.


Teaching Recruitment Rules

CLICK HERE TO DOWNLOAD DRAFT RULES

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!