MDM RECENT NEWS: ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಬಗ್ಗೆ.-2025

MDM: ಮಧ್ಯಾಹ್ನ ಉಪಹಾರ ಯೋಜನೆಯ ನೂತನ ಆದೇಶ.

MDM RECENT ORDER: ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಬಗ್ಗೆ.

ಪ್ರಸ್ತಾವನೆ:

ಮೇಲೆ ಓದಲಾದ ಕ್ರಮಾಂಕ (1)ರ ಸರ್ಕಾರದ ಆದೇಶದಲ್ಲಿ 2022-23ನೇ ಸಾಲಿನಲ್ಲಿ ಪ್ರಧಾನ ಮಂತ್ರಿ ಪೋಷಣ ಶಕ್ತಿ ನಿರ್ಮಾಣ ಯೋಜನೆ (ಮಧ್ಯಾಹ್ನ ಉಪಹಾರ ಯೋಜನೆ) ರಡಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿ 1 ರಿಂದ 8ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ 46 ದಿನಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣು/ಚಿಕ್ಕಿಯನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (2)ರ ಸರ್ಕಾರದ ಆದೇಶದಲ್ಲಿ 2023-24ನೇ ಸಾಲಿನ ಜುಲೈ ಆಯವ್ಯಯ ಭಾಷಣದ ಕಂಡಿಕೆ-91ರಲ್ಲಿನ ಘೋಷಣೆಯಂತೆ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ, (ಪ್ರತಿ ವಿದ್ಯಾರ್ಥಿಯ ಒಂದು ದಿನದ ಘಟಕ ವೆಚ್ಚ ರೂ 6/- ರಂತೆ) 80 ದಿನಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ (Supplementary Nutrition) ಮೊಟ್ಟೆ /ಶೇಂಗಾ ಚಿಕ್ಕಿ/ಬಾಳೆಹಣ್ಣನ್ನು ವಿತರಿಸಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (3)ರ ಸರ್ಕಾರದ ಆದೇಶದಲ್ಲಿ ಅಜೀಂ ಪ್ರೇಮ್‌ಜಿ ಫೌಂಡೇಷನ್, ಬೆಂಗಳೂರು ಇವರ ಸಹಭಾಗಿತ್ವದಲ್ಲಿ ರಾಜ್ಯದ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ (ಈಗಾಗಲೇ ವಾರದಲ್ಲಿ ಎರಡು ದಿನ ನೀಡಲಾಗುತ್ತಿರುವ ಪೂರಕ ಪೌಷ್ಠಿಕ ಆಹಾರದ ಹೊರತಾಗಿ) ವಾರದಲ್ಲಿ ನಾಲ್ಕು ದಿನ ಪೂರಕ ಪೌಷ್ಠಿಕ ಆಹಾರವನ್ನು ಉಚಿತವಾಗಿ ವಿತರಿಸುವ ಕಾರ್ಯಕ್ರಮವನ್ನು ಅನುಷ್ಠಾನ ಮಾಡಲು ಬ್ಯಾಂಕ್ ಖಾತೆಗಳನ್ನು ತೆರೆಯಲು ಆದೇಶಿಸಲಾಗಿರುತ್ತದೆ.

ಮೇಲೆ ಓದಲಾದ ಕ್ರಮಾಂಕ (4)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಕಲಬುರಗಿ ಇವರ ಪತ್ರದಲ್ಲಿ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮಕ್ಕಳಿಗೆ ವಿತರಿಸಲಾಗುತ್ತಿರುವ ಚಿಕ್ಕಿಯಲ್ಲಿ ಮಕ್ಕಳ ಆರೋಗ್ಯಕ್ಕೆ ಹಾನಿಕಾರಕ

ಎನ್ನಬಹುದಾದಂತಹ ಅಪರ್ಯಾಪ್ತ ಕೊಬ್ಬಿನಾಂಶ (Unsaturated fats) ಹೆಚ್ಚಿಗೆ ಇದ್ದು, ಇದರಲ್ಲಿನ ಸಕ್ಕರೆ ಅಂಶ ಕೂಡ ಅಧಿಕವಾಗಿದ್ದು, ಚಿಕ್ಕಿಯನ್ನು ಸರಿಯಾಗಿ ಸಂಗ್ರಹಿಸದಿದ್ದಲ್ಲಿ ಕಲುಷಿತವಾಗಿ ಮಕ್ಕಳ ಆರೋಗ್ಯಕ್ಕೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆಗಳಿರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ, ಮೊಟ್ಟೆ ಅಥವಾ ಬಾಳೆಹಣ್ಣು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.

ಮೇಲೆ ಓದಲಾದ ಕ್ರಮಾಂಕ (5)ರ ಅಪರ ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ, ಧಾರವಾಡ. ಇವರ ಪತ್ರದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಪೂರಕ ಪೌಷ್ಠಿಕ ಆಹಾರವಾಗಿ ಮೊಟ್ಟೆ ಬದಲಾಗಿ ಶಾಲೆಗಳಲ್ಲಿ ವಿತರಣೆ ಮಾಡಲಾಗುತ್ತಿರುವ ಚಿಕ್ಕಿಯು ನಿಗದಿತ ಪ್ರಮಾಣದಲ್ಲಿ ಇಲ್ಲದಿರುವುದು. ಸಮರ್ಪಕವಾಗಿ ಸಂಗ್ರಹಿಸದೇ ಇರುವುದು ಹಾಗೂ ಅವಧಿ ಮೀರಿದ ಚಿಕ್ಕಿಗಳನ್ನು ಸಂಗ್ರಹಿಸಿ ವಿದ್ಯಾರ್ಥಿಗಳಿಗೆ ವಿತರಿಸುತ್ತಿರುವುದು ಕಂಡು ಬಂದಿರುವುದರಿಂದ ಹಾಗೂ ಅಂತಹ ಚಿಕ್ಕಿಗಳನ್ನು ಸೇವಿಸಿದಲ್ಲಿ ಮಕ್ಕಳ ಆರೋಗ್ಯದ ಮೇಲೆ ವ್ಯತಿರಿಕ್ತ ಪರಿಣಾಮ ಬೀರುವ ಸಾಧ್ಯತೆ ಇರುವುದರಿಂದ ಚಿಕ್ಕಿ ವಿತರಣೆಯನ್ನು ಸ್ಥಗಿತಗೊಳಿಸಿ ಮೊಟ್ಟೆ ಅಥವಾ ಬಾಳೆಹಣ್ಣುಗಳನ್ನು ಮಾತ್ರ ವಿತರಿಸುವ ಕುರಿತು ಕ್ರಮವಹಿಸಲು ಕೋರಿರುತ್ತಾರೆ.

ಈ ಪ್ರಸ್ತಾವನೆಯಲ್ಲಿ ವಿವರಿಸಲಾದ ಮೇಲ್ಕಂಡ ಅಂಶಗಳನ್ನು ಸರ್ಕಾರವು ಕೂಲಂಕಷವಾಗಿ ಪರಿಶೀಲಿಸಿ, ಈ ಕೆಳಕಂಡಂತೆ ಆದೇಶಿಸಿದೆ.

ಸರ್ಕಾರದ ಆದೇಶ ಸಂಖ್ಯೆ: ಇಪಿ 99 ಎಂಎಂಎಸ್ 2024,ಬೆಂಗಳೂರು, 2:17.02.2025.

ಪ್ರಸ್ತಾವನೆಯಲ್ಲಿ ವಿವರಿಸಿರುವ ಅಂಶಗಳ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಟಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸಲು ಅನುಮತಿ ನೀಡಿ ಆದೇಶಿಸಿದೆ.

ಆಯುಕ್ತರು, ಶಾಲಾ ಶಿಕ್ಷಣ ಇಲಾಖೆ ಇವರು. ಮಧ್ಯಾಹ್ನ ಉಪಹಾರ ಯೋಜನೆಯಡಿ ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪೂರಕ ಪೌಷ್ಠಿಕಾಂಶದ ರೂಪದಲ್ಲಿ ಮೊಟ್ಟೆ ಅಥವಾ ಬಾಳೆಹಣ್ಣನ್ನು ಮಾತ್ರ ವಿತರಿಸುವ ಕುರಿತು ಪ್ರತ್ಯೇಕವಾದ ಮಾರ್ಗಸೂಚಿಯನ್ನು ಹೊರಡಿಸತಕ್ಕದ್ದು;

ಈ ಆದೇಶವನ್ನು ಸರ್ಕಾರದ ಆದೇಶ ಸಂಖ್ಯೆ: ಎಫ್‌ಡಿ 07 ಟಿ.ಎಫ್.ಪಿ 2024. ದಿನಾಂಕ: 03.01.2025 ರಲ್ಲಿ ಸರ್ಕಾರದ ಪ್ರಧಾನ ಕಾರ್ಯದರ್ಶಿಯವರಿಗೆ ಪ್ರತ್ಯಾಯೋಜಿಸಿರುವ ಅಧಿಕಾರದನ್ವಯ ಹೊರಡಿಸಿದೆ.

 

CLICK HERE TO DOWNLOAD ORDER

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!