Adarsha vidyalaya Exam -2025-26 Admit Card Released

Adarsha vidyalaya Exam -2025-26 Admit Card Released

Adarsha : 2010-11 ನೇ ಸಾಲಿನಿಂದ ಆದರ್ಶ ವಿದ್ಯಾಲಯಗಳು ಪ್ರಾರಂಭವಾಗಿದ್ದು, ಪ್ರತಿ ವರ್ಷದಂತೆ 2025-26ನೇ ಸಾಲಿನಲ್ಲೂ ಆದರ್ಶ ವಿದ್ಯಾಲಯಗಳಲ್ಲಿ 6ನೇ ತರಗತಿಗೆ ವಿದ್ಯಾರ್ಥಿಗಳ ದಾಖಲಾತಿಗಾಗಿ, ರಾಜ್ಯದ 5ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ಪ್ರವೇಶ ಪರೀಕ್ಷೆಯನ್ನು ನಡೆಸಲಾಗುತ್ತಿದೆ.

ಈ ಪ್ರವೇಶ ಪರೀಕ್ಷೆ ಮಾರ್ಚ್ 23, 2025ರಂದು ಬೆಳಿಗ್ಗೆ 10:30 ರಿಂದ ಮಧ್ಯಾಹ್ನ 1:00 ಗಂಟೆಯವರೆಗೆ ನಡೆಯುತ್ತಿದ್ದು, ಸದರಿ ಪರೀಕ್ಷೆಯನ್ನು ವ್ಯವಸ್ಥಿತವಾಗಿ ನಡೆಸಲು ಅಗತ್ಯವಿರುವ ಎಲ್ಲಾ ಪೂರ್ವ ಸಿದ್ಧತೆಗಳನ್ನು ಶಿಕ್ಷಣ ಇಲಾಖೆಯು ನಡೆಸುತ್ತಿದೆ.

ರಾಜ್ಯದ 74 ಶೈಕ್ಷಣಿಕವಾಗಿ ಹಿಂದುಳಿದ ಬ್ಲಾಕ್ ಗಳಲ್ಲಿ 74 ಆದರ್ಶ ವಿದ್ಯಾಲಯಗಳನ್ನು ನಡೆಸಲಾಗುತ್ತಿದ್ದು, ಈ ಶಾಲೆಗಳಲ್ಲಿ 6 ರಿಂದ 10ನೇ ತರಗತಿಯವರೆಗೆ ಆಂಗ್ಲ ಮಾಧ್ಯಮದಲ್ಲಿ ಬೋಧನೆ ಕಾರ್ಯ ನಡೆಯುತ್ತಿದೆ. ಪ್ರತಿಭಾವಂತ ಗ್ರಾಮೀಣ ವಿದ್ಯಾರ್ಥಿಗಳನ್ನು ಗುರುತಿಸಿ ವಿದ್ಯಾರ್ಥಿಗಳ ಸಮಗ್ರ ಹಾಗೂ ಬೌದ್ದಿಕ, ಮಾನಸಿಕ ಬೆಳವಣಿಗೆಗೆ ಪೂರಕವಾಗುವ ಅತ್ಯುತ್ತಮ ಗುಣಮಟ್ಟದ ಶಿಕ್ಷಣವನ್ನು ನೀಡುವುದು ಆದರ್ಶ ವಿದ್ಯಾಲಯಗಳ ಮುಖ್ಯ ಗುರಿಯಾಗಿದೆ.

ಪ್ರವೇಶ ಪರೀಕ್ಷೆಯ ವಿಧಾನ:

ಪ್ರಶ್ನೆಪತ್ರಿಕೆ ಮತ್ತು ಒ.ಎಂ.ಆರ್‌ನ ಸ್ವರೂಪ:-

ಪ್ರಶ್ನೆಪತ್ರಿಕೆಯು ಕನ್ನಡ ಮತ್ತು ಆಂಗ್ಲ ಮಾಧ್ಯಮದಲ್ಲಿ ಮುದ್ರಿತವಾಗಿರುತ್ತದೆ. ಇದು 100 ಪ್ರಶ್ನೆಗಳನ್ನೊಳಗೊಂಡ ಪ್ರಶ್ನೆಪತ್ರಿಕೆಯಾಗಿದ್ದು, ಪ್ರತಿ ಪ್ರಶ್ನೆಗೆ 1 ಅಂಕದಂತೆ 100 ಅಂಕಗಳನ್ನು ಹೊಂದಿರುತ್ತದೆ.

ಪ್ರಶ್ನೆಪತ್ರಿಕೆಯು ವಸ್ತುನಿಷ್ಠ (Objective Type) ಮಾದರಿಯ ಪ್ರಶ್ನೆಗಳನ್ನು ಹೊಂದಿರುತ್ತದೆ.

ಪ್ರವೇಶ ಪರೀಕ್ಷೆಯು 5ನೇ ತರಗತಿಯ ಪಠ್ಯ ವಸ್ತುವನ್ನು ಆಧರಿಸಿ, ಕನ್ನಡ ಭಾಷೆ(16%), ಆಂಗ್ಲ ಭಾಷೆ(16%), ಗಣಿತ(16%), ವಿಜ್ಞಾನ(16%), ಸಮಾಜ ವಿಜ್ಞಾನ(16%), ಸಾಮಾನ್ಯ ಜ್ಞಾನ(104) ಮತ್ತು ಸಾಮಾನ್ಯ ಮಾನಸಿಕ ಸಾಮರ್ಥ್ಯ (100) ವಿಷಯಗಳ ಪ್ರಶ್ನೆಗಳನ್ನು ಒಳಗೊಂಡಿರುತ್ತದೆ.

ಪರೀಕ್ಷೆಯ ಅವಧಿ 2 ಗಂಟೆ 30 ನಿಮಿಷಗಳಾಗಿರುತ್ತದೆ. ವಿದ್ಯಾರ್ಥಿಗಳು ಪರೀಕ್ಷೆ ಪ್ರಾರಂಭವಾಗುವ 30 ನಿಮಿಷಗಳು ಮುಂಚಿತವಾಗಿ ಪರೀಕ್ಷಾ ಕೊಠಡಿಯಲ್ಲಿ ಹಾಜರಿರಲು ತಿಳಿಸಲಾಗಿದೆ.

ವಿದ್ಯಾರ್ಥಿಗಳು ಉತ್ತರಿಸಲು ಒ.ಎಂ.ಆರ್ ಹಾಳೆಯನ್ನು ನೀಡಲಾಗುವುದು.

ಪ್ರಶ್ನೆಪತಿಕೆಯು A. B.C.D ಎಂಬ 4 ವರ್ಷನ್‌ ಗಳಲ್ಲಿ ಇರುತ್ತದೆ.

ವಿದ್ಯಾರ್ಥಿಗಳು ಒ.ಎಂ.ಆರ್‌ನಲ್ಲಿ ಉತ್ತರಗಳನ್ನು Shade ಮಾಡಲು ನೀಲಿ ಅಥವಾ ಕಪ್ಪು ಬಾಲ್ ಪಾಯಿಂಟ್ ಪೆನ್ನನ್ನು ಮಾತ್ರ ಬಳಸಲು ತಿಳಿಸಲಾಗಿದೆ.

ಸದರಿ ಪರೀಕ್ಷೆಗೆ ಹಾಜರಾಗಲು ಹಾಲ್ ಟಿಕೆಟ್ ಅವಶ್ಯ.

ಹಾಲ್ ಟಿಕೆಟ್ ಡೌನ್ಲೋಡ್ ಮಾಡಲು

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

5 thoughts on “Adarsha vidyalaya Exam -2025-26 Admit Card Released”

Leave a Comment

error: Content is protected !!