Admission-2025: ಸುತ್ತೂರು ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ.

Admission-2025: ಸುತ್ತೂರು ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ ಪ್ರವೇಶಕ್ಕೆ ಅರ್ಜಿ ಆಹ್ವಾನ.

Admission: ಮೈಸೂರು ಜಿಲ್ಲೆಯ ನಂಜನಗೂಡು ತಾಲೂಕು ಸುತ್ತೂರು ಶ್ರೀಕ್ಷೇತ್ರದ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ 2025- 26ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಸುತ್ತೂರು ಶ್ರೀಕ್ಷೇತ್ರದ ಜೆಎಸ್ಎಸ್ ಶಾಲೆ ಹಾಗೂ ಉಚಿತ ವಿದ್ಯಾರ್ಥಿನಿಲಯದ 2025-26ನೇ ಸಾಲಿನ ಪ್ರವೇಶಕ್ಕಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಕನ್ನಡ ಮಾಧ್ಯಮದ 1ರಿಂದ 8ನೇ ತರಗತಿಯವರೆಗೆ ಮತ್ತು ಇಂಗ್ಲಿಷ್ ಮಾಧ್ಯಮದ 1, 5, 6 ಹಾಗೂ 8ನೇ ತರಗತಿಗಳಿಗೆ ಪ್ರವೇಶಕ್ಕೆ ಅವಕಾಶವಿದೆ. ಗ್ರಾಮಾಂತರ ಪ್ರದೇಶದ ಆರ್ಥಿಕವಾಗಿ ಹಿಂದುಳಿದ ಕುಟುಂಬಗಳ ಬಾಲಕ ಹಾಗೂ ಬಾಲಕಿಯರಿಗೆ ಪ್ರವೇಶ ನೀಡಲಾಗುವುದು ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.

ಅರ್ಜಿಯನ್ನು ದಿನಾಂಕ: 2.4.2025 ರಿಂದ ಶಾಲಾ ಕಛೇರಿಯಲ್ಲಿ ಖುದ್ದಾಗಿ ಪಡೆಯಬಹುದು ಅಥವಾ www.jssschoolsuttur.org ಹಾಗೂ www.jssonline.org https://jsskvk.icar.gov.in ವೆಬ್‌ಸೈಟ್‌ನಿಂದ ಡೌನ್‌ ಲೋಡ್ ಮಾಡಿಕೊಳ್ಳಬಹುದು. ಮೊಬೈಲ್‌ನಲ್ಲಿ ಸಂಪರ್ಕಿಸಿದರೆ WhatsApp ಮೂಲಕವೂ ಅರ್ಜಿಯನ್ನು ಕಳುಹಿಸಿಕೊಡಲಾಗುವುದು. ಕ್ಯೂ.ಆರ್. ಕೋಡ್ ಮೂಲಕವೂ ಅರ್ಜಿಗಳನ್ನು ಡೌನ್‌ಲೋಡ್ ಮಾಡಿಕೊಳ್ಳಬಹುದು.

 

ಭರ್ತಿ ಮಾಡಿದ ಅರ್ಜಿಗಳನ್ನು 2025 ಮೇ 15ರ ಒಳಗಾಗಿ ಸಲ್ಲಿಸಬೇಕು.

ಪ್ರಮುಖ ದಾಖಲೆಗಳು:

 

ಭರ್ತಿ ಮಾಡಿದ ಅರ್ಜಿಯ ಜೊತೆಗೆ ವಿದ್ಯಾರ್ಥಿಯ ಭಾವಚಿತ್ರ, ಹಿಂದಿನ ತರಗತಿಯ ಅಂಕಪಟ್ಟಿ, ವಿದ್ಯಾರ್ಥಿಗಳ ಮತ್ತು ಪೋಷಕರ ಆಧಾರ್ ಕಾರ್ಡ್, ರೇಷನ್ ಕಾರ್ಡ್, ಜಾತಿ ಮತ್ತು ಆದಾಯ ಪ್ರಮಾಣಪತ್ರದ ಜೆರಾಕ್ಸ್ ಪ್ರತಿಗಳನ್ನು ಲಗತ್ತಿಸಿ ಆಡಳಿತಾಧಿಕಾರಿಗಳು, ಜೆಎಸ್ಎಸ್ ಸಂಸ್ಥೆಗಳು, ಸುತ್ತೂರು-571129. ನಂಜನಗೂಡು ತಾಲ್ಲೂಕು, ಮೈಸೂರು ಜಿಲ್ಲೆ ಈ ವಿಳಾಸಕ್ಕೆ ಕಳುಹಿಸಬೇಕು.

ಅರ್ಜಿ ಪಡೆಯಲು, ಹೆಚ್ಚಿನ ಮಾಹಿತಿ ಪಡೆಯಲು ಅಥವಾ ಪ್ರವೇಶಕ್ಕೆ ಸಂಬಂಧಿಸಿದಂತೆ ಯಾವುದೇ ಮಾಹಿತಿಯ ಅಗತ್ಯವಿದ್ದಲ್ಲಿ ಪೋಷಕರು ಅಥವಾ ಪಾಲಕರು ನೇರವಾಗಿ ಶಾಲಾ ಕಛೇರಿಯನ್ನು ಸಂಪರ್ಕಿಸಬೇಕಾಗಿ ಕೋರಿದೆ. ಯಾವುದೇ ಮಧ್ಯವರ್ತಿಗಳನ್ನು ಸಂಪರ್ಕಿಸುವ ಅಗತ್ಯವಿಲ್ಲ. ಹೆಚ್ಚಿನ ಮಾಹಿತಿಗಾಗಿ

ವಸತಿ ಶಾಲೆ ವಾಟ್ಸಪ್ ನಂಬರ್: 74114 86938

ಹಿರಿಯ ಪ್ರಾಥಮಿಕ ಶಾಲೆ: 08221-232054

ಪ್ರೌಢ ಶಾಲೆ: 08221-232653

ಬಸವೇಶ್ವರ ವಿದ್ಯಾರ್ಥಿನಿಲಯ: 08221-232332

ಸಂಯೋಜನಾಧಿಕಾರಿಗಳ ಕಛೇರಿ:  08221-232217

CLICK HERE TO DOWNLOAD APPLICATION FORM

 

ಇದನ್ನೂ ನೋಡಿ….2025-26ನೇ ಸಾಲಿನ ಆದರ್ಶ ವಿದ್ಯಾಲಯಗಳ 6ನೇ ತರಗತಿ ದಾಖಲಾತಿಗಾಗಿ ನಡೆಸಲಾದ ಪ್ರವೇಶ ಪರೀಕ್ಷೆಯ ಪರಿಷ್ಕೃತ ಕೀ ಉತ್ತರ ಪ್ರಕಟ

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!