Annual Academic Guidelines for the year 2025-26: 2025-26ನೇ ಸಾಲಿನ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿ ಕುರಿತು ಮಹತ್ವದ ಮಾಹಿತಿ
Annual Academic Guidelines for the year 2025-26: ವಿಷಯಕ್ಕೆ ಸಂಬಂದಿಸಿದಂತೆ, ಉಲ್ಲೇಖಿತ ಪತ್ರದಲ್ಲಿ 2025-26ನೇ ಶೈಕ್ಷಣಿಕ ಸಾಲಿನ ಚಟುವಟಿಕೆಗಳನ್ನು ಪ್ರಾರಂಭಿಸಲು ಅಗತ್ಯ ಪೂರ್ವಸಿದ್ಧತೆಗಾಗಿ ದಿನಾಂಕ:29.05.2025ರಿಂದ ಶಾಲೆ ಪ್ರಾರಂಭಿಸಲು ಸೂಚಿಸಲಾಗಿದೆ. ಅದರಂತೆ ವಾರ್ಷಿಕ ಶೈಕ್ಷಣಿಕ ಕ್ರಿಯಾಯೋಜನೆಯ ವೇಳಾಪಟ್ಟಿಯನ್ನು ನಿಗಧಿಪಡಿಸಲಾಗಿದೆ.
ಪ್ರಯುಕ್ತ ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಮತ್ತು ಅನುದಾನ ರಹಿತ ಪ್ರಾಥಮಿಕ, ಪ್ರೌಢ ಶಾಲೆಗಳಲ್ಲಿ 2025-26ನೇ ಶೈಕ್ಷಣಿಕ ಸಾಲಿನಲ್ಲಿ ಏಕರೂಪದ ಶೈಕ್ಷಣಿಕ ಚಟುವಟಿಕೆಗಳನ್ನು ಅನುಷ್ಠಾನಗೊಳಿಸಲು ಸಹಾಯವಾಗುವಂತೆ ಒಟ್ಟು ವಾರ್ಷಿಕ ದಿನಗಳಲ್ಲಿ ಲಭ್ಯವಾಗುವ ಶೈಕ್ಷಣಿಕ ಚಟುವಟಿಕೆ ಅವಧಿಗಳು, ಕರ್ತವ್ಯದ ದಿನಗಳು ಮತ್ತು ರಜಾ ದಿನಗಳನ್ನಾಧರಿಸಿ ಅದಕ್ಕನುಗುಣವಾಗಿ ವಾರ್ಷಿಕ ಕಾರ್ಯಸೂಚಿಯನ್ನು ನಿಗದಿಪಡಿಸಿ, ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಗೊಳಿಸಲು ಮತ್ತು ಅನುಪಾಲನೆ ಮಾಡಲು ತಿಳಿಸಲಾಗಿದೆ.
ಮುಂದುವರೆದು, ರಾಜ್ಯದ ಎಲ್ಲಾ ರಾಜ್ಯ ಪಠ್ಯಕ್ರಮದ ಶಾಲೆಗಳಲ್ಲಿ 2025-26ನೇ ಸಾಲಿನ ಶೈಕ್ಷಣಿಕ ಚಟುವಟಿಕೆಗಳನ್ನು ಅತ್ಯಂತ ಪರಿಣಾಮಕಾರಿಯಾಗಿ ಆಯೋಜಿಸುವುದರೊಂದಿಗೆ ವಾರ್ಷಿಕ ಪಠ್ಯವಸ್ತು ಬೋಧನೆ, ಪಠೇತರ ಚಟುವಟಿಕೆಗಳು, ಮೌಲ್ಯಾಂಕನ ಕೈಗೊಳ್ಳಲು ಅನುವಾಗುವಂತೆ ಹಾಗೂ ವಾರ್ಷಿಕ ಪಾಠ ಹಂಚಿಕೆ ಕುರಿತು 2025-26ನೇ ವಾರ್ಷಿಕ ಶೈಕ್ಷಣಿಕ ಮಾರ್ಗಸೂಚಿಯನ್ನು ಸಿದ್ಧಪಡಿಸಲಾಗಿದೆ.
ಸದರಿ ಮಾರ್ಗಸೂಚಿಯಂತೆ ರಾಜ್ಯ ಪಠ್ಯಕ್ರಮದ ಎಲ್ಲಾ ಶಾಲೆಗಳಲ್ಲಿ ಅನುಷ್ಠಾನಿಸಲು ಕ್ರಮವಹಿಸಲು ಎಲ್ಲಾ ಕ್ಷೇತ್ರ ಶಿಕ್ಷಣಾಧಿಕಾರಿಗಳಿಗೆ ಮತ್ತು ಶಾಲಾ ಮುಖ್ಯ ಶಿಕ್ಷಕರಿಗೆ 302 ಕ್ರಮವಹಿಸಲು ಎಲ್ಲಾ ಉಪನಿರ್ದೇಶಕರು(ಆಡಳಿತ) ಮತ್ತು ಅಭಿವೃದ್ಧಿ, ಶಾಲಾ ಶಿಕ್ಷಣ ಇಲಾಖೆ ಹಾಗೂ ಪ್ರಾಂಶುಪಾಲರು, ಜಿಲ್ಲಾ ಶಿಕ್ಷಣ ತರಬೇತಿ ಸಂಸ್ಥೆ ಇವರುಗಳಿಗೆ ತಿಳಿಸಿದೆ.
ವಿಶೇಷ ಸೂಚನೆ: ಕಾಲಕಾಲಕ್ಕೆ ಸರ್ಕಾರದಿಂದ ನೀಡುವ ಸೂಚನೆಗಳನ್ನು ಮತ್ತು ನಿರ್ದೇಶನಗಳನ್ನು ಕಡ್ಡಾಯವಾಗಿ ಪಾಲಿಸುವಂತೆ ತಿಳಿಸಿದೆ.

CLICK HERE TO DOWNLOAD GUIDELINES
Send important hints it’s use full for me and employes