Army Training 2025-26 ಭಾರತೀಯ ಸೇನೆ /ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಅರ್ಜಿ ಆಹ್ವಾನ.
Army Training 2025-26: ಭಾರತೀಯ ಸೇನೆ /ಯುನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025-26 ಸಾಲಿನಲ್ಲಿ ಉಚಿತವಾಗಿ ಆಯ್ಕೆ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು ಅರ್ಹ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.
ರಾಜ್ಯದ ಹಿಂದುಳಿದ ವರ್ಗಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯಿಂದ 2025–26ನೇ ಸಾಲಿನಲ್ಲಿ ಉಚಿತವಾಗಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ, ವ್ಯತ್ತಿ ಮಾರ್ಗದರ್ಶನ ಹಾಗೂ ತರಬೇತಿ ನೀಡುತ್ತಿದ್ದು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಅಹ್ವಾನಿಸಿದೆ (ಬಾಲಕರಿಗೆ ಮಾತ್ರ)
ಈ ಒಂದು ಘಟಕದ ಮುಖ್ಯ ಉದ್ದೇಶ ಅಭ್ಯರ್ಥಿಗಳಿಗೆ ಉತ್ತಮ ಗುಣಮಟ್ಟದ ತರಬೇತಿಯನ್ನು ಒದಗಿಸುವುದು, ಇದರಿಂದಾಗಿ ಅವರು ಸ್ಪರ್ಧಾತ್ಮಕ ಪರೀಕ್ಷೆಗಳಲ್ಲಿ ಭಾಗವಹಿಸಲು ಮತ್ತು ಸಾರ್ವಜನಿಕ/ಖಾಸಗಿ ವಲಯದಲ್ಲಿ ಸೂಕ್ತವಾದ ಉದ್ಯೋಗವನ್ನು ಪಡೆಯುವಲ್ಲಿ ಯಶಸ್ವಿಯಾಗಲು ಸಾಧ್ಯವಾಗುತ್ತದೆ.
ಭಾರತೀಯ ಸೇನೆ/ಇತರೆ ಯೂನಿಫಾರ್ಮ್ ಸೇವೆಗಳಿಗೆ ಸೇರ ಬಯಸುವ ಕರ್ನಾಟಕ ರಾಜ್ಯದ ಹಿಂದುಳಿದ ವರ್ಗಗಳ ಪ್ರವರ್ಗ-1, 2(ಎ), 3(ಎ) ಹಾಗೂ 3(ಬಿ) ಗಳ ಅರ್ಹ ಅಭ್ಯರ್ಥಿಗಳಿಗೆ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಯು 2025-26ನೇ ಸಾಲಿನಲ್ಲಿ ಆಯ್ಕೆಯ ಪೂರ್ವ ಸಿದ್ಧತೆ ಬಗ್ಗೆ ವೃತ್ತಿ ಮಾರ್ಗದರ್ಶನ ಹಾಗೂ ತರಬೇತಿಯನ್ನು ಉಚಿತವಾಗಿ ನೀಡುತ್ತಿದ್ದು, ತರಬೇತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ (ಬಾಲಕರಿಗೆ ಮಾತ್ರ).
ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ನಿಗದಿಗೊಳಿಸಿರುವ ಸಾಮಾನ್ಯ ಅರ್ಹತೆಗಳು:
ಅಭ್ಯರ್ಥಿ ಮತ್ತು ಕುಟುಂಬದ ಒಟ್ಟು ಗರಿಷ್ಠ ವಾರ್ಷಿಕ ಆದಾಯ ಮಿತಿ- (ಪ್ರವರ್ಗ-1 ಕ್ಕೆ ರೂ.2.50 ಲಕ್ಷಗಳು ಹಾಗೂ ಪ್ರವರ್ಗ-2(ಎ), 3(ಎ) ಮತ್ತು 3(ಬಿ) ಗಳಿಗೆ ರೂ.1.00 ಲಕ್ಷಗಳು)!
ಕನಿಷ್ಠ ವಿದ್ಯಾರ್ಹತೆ – ಅಭ್ಯರ್ಥಿಯು 10ನೇ ತರಗತಿಯನ್ನು ಉತ್ತೀರ್ಣವಾಗಿದ್ದು, ಪ್ರತಿ ವಿಷಯದಲ್ಲಿ ಕನಿಷ್ಠ 33 ಅಂಕಗಳು ಮತ್ತು ಸರಾಸರಿ ಶೇ.45 ರಷ್ಟು ಅಂಕಗಳನ್ನು ಪಡೆದಿರಬೇಕು. ಗ್ರೇಡಿಂಗ್ ಸಿಸ್ಟಮ್ ಇದ್ದಲ್ಲಿ ಮೇಲ್ಕಂಡಂತೆ ಸಮಾನವಾದ ಗ್ರೇಡ್ ಪಡೆದಿರಬೇಕು.
ನಿಗದಿ ಮಾಡಿದ ಜಿಲ್ಲೆಗಳಲ್ಲಿ ಮಾತ್ರ ನೀಡಲಾಗುವುದು. ಅಭ್ಯರ್ಥಿಗಳು ಸದರಿ ಮೂರು ಜಿಲ್ಲೆಗಳಲ್ಲಿ ಯಾವುದಾದರು ಒಂದು ಜಿಲ್ಲೆಯನ್ನು ತರಬೇತಿಗೆ ಆಯ್ಕೆ ಮಾಡಿಕೊಂಡು ಸದರಿ ಜಿಲ್ಲೆಯ ಜಿಲ್ಲಾ ಹಿಂದುಳಿದ ವರ್ಗಗಳ ಕಲ್ಯಾಣಾಧಿಕಾರಿಗಳ ಕಛೇರಿಗೆ ಅರ್ಜಿಯನ್ನು ಖುದ್ದಾಗಿ ಅಥವಾ ನೋಂದಾಯಿತ ಅಂಚೆ ಮೂಲಕ ಸಲ್ಲಿಸಬಹುದು.
ನಮೂನೆ ಹಾಗೂ ಹೆಚ್ಚಿನ ಮಾಹಿತಿಯನ್ನು ಇಲಾಖಾ ವೆಬ್-ಸೈಟ್ https://bcwd.karnataka.gov.in ದಿಂದ ಪಡೆಯಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ – CLICK HERE