Bank of India Recuritment-2025: ಬ್ಯಾಂಕ್ ಆಫ್ ಇಂಡಿಯಾ ದಲ್ಲಿ ವಿವಿಧ ಹುದ್ದೆಗಳ ನೇಮಕಾತಿಗೆ ಅರ್ಜಿ ಅಹ್ವಾನ ಅರ್ಜಿ ಸಲ್ಲಿಕೆಗೆ ನೇರ ಲಿಂಕ್ ಇಲ್ಲಿದೆ.

Bank of India Recuritment-2025

Bank of India Recuritment-2025: ಭಾರತೀಯ ಸಾರ್ವಜನಿಕ ವಲಯದ ಬ್ಯಾಂಕ್ ಆಗಿರುವ ಬ್ಯಾಂಕ್ ಆಫ್ ಇಂಡಿಯಾವು (ಬಿಒಐ) ಭಾರತದಾದ್ಯಂತ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಿಕೊಳ್ಳಲು ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನ ಮಾಡಿದೆ. ಅಭ್ಯರ್ಥಿಗಳು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಎಲ್ಲ ಅರ್ಹತೆಯನ್ನು ಹೊಂದಿರುವವರಾದರೆ ಮಾ.23ರೊಳಗೆ ಆನ್‌ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ

 

ಒಟ್ಟು ಹುದ್ದೆಗಳ ಸಂಖ್ಯೆ: 180

 

ಶೈಕ್ಷಣಿಕ ಅರ್ಹತೆ:

ಹುದ್ದೆಗೆ ಅರ್ಜಿ ಸಲ್ಲಿಸಲು ಬಯಸುವ ಅಭ್ಯರ್ಥಿಗಳು ಹುದ್ದೆಗಳಿಗೆ ಅನುಗುಣವಾಗಿ ಬಿಎಸ್ಸಿ, ಬಿಇ ಅಥವಾ ಬಿಟೆಕ್, ಎಂಸಿಎ, ಎಂಎಸ್ಸಿ, ಎಂಟೆಕ್, ಬಿಎಸ್ಸಿ, ಕಾನೂನು ಪದವಿ, ಸಿಎ, ಐಸಿಡಬ್ಲ್ಯುಎ, ಎಂಬಿಎ ಅಥವಾ ತತ್ಸಮಾನ ವಿದ್ಯಾರ್ಹತೆಯನ್ನು ಪೂರ್ಣಗೊಳಿಸಿರಬೇಕು.

ವಯೋಮಿತಿ:

ಮುಖ್ಯ ವ್ಯವಸ್ಥಾಪಕರ ಹುದ್ದೆಗೆ ಕನಿಷ್ಠ 28,ಗರಿಷ್ಠ 45,

ಹಿರಿಯ ವ್ಯವಸ್ಥಾಪಕರ ಹುದ್ದೆಗೆ 25-40,

ಕಾನೂನು ಅಧಿಕಾರಿ ಹುದ್ದೆಗೆ 25-32,

ವ್ಯವಸ್ಥಾಪಕ ಹುದ್ದೆಗೆ ಕನಿಷ್ಠ 25 ಗರಿಷ್ಠ 35 ವರ್ಷ ನಿಗದಿ ಮಾಡಲಾಗಿದೆ.

ವಯೋಮಿತಿ ಸಡಿಲಿಕೆ:

ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿಯವರಿಗೆ 3 ವರ್ಷ, ಅಂಗವಿಕಲರಿಗೆ 10 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.

 

ಆಯ್ಕೆ ಪ್ರಕ್ರಿಯೆ ಹೇಗಿರುತ್ತೆ?

ಹುದ್ದೆಗೆ ಸಲ್ಲಿಕೆಯಾದ ಅರ್ಜಿಗಳನ್ನು ಆಧರಿಸಿ ಆನ್‌ಲೈನ್‌ ಪರೀಕ್ಷೆ ಮತ್ತು ವೈಯಕ್ತಿಕ ಸಂದರ್ಶನ ನಡೆಸುವ ಮೂಲಕ ಅಭ್ಯರ್ಥಿಗಳನ್ನು ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ. ಆನ್‌ಲೈನ್ ಪರೀಕ್ಷೆಯನ್ನು ಇಂಗ್ಲಿಷ್‌ ಭಾಷೆ 25 ಅಂಕ, ಹುದ್ದೆಗೆ ಸಂಬಂಧಿಸಿದ ಜ್ಞಾನ 100 ಅಂಕ, ಜನರಲ್ ಅವೇರ್‌ನೆಸ್‌ 25 ಅಂಕಕ್ಕೆ ನಡೆಸಲಾಗುತ್ತದೆ.

ಅರ್ಜಿ ಸಲ್ಲಿಕೆ:

ಆಸಕ್ತ ಅಭ್ಯರ್ಥಿಗಳು ಬ್ಯಾಂಕ್ ಆಫ್ ಇಂಡಿಯಾದ ಅಧಿಕೃತ ವೆಬ್ಸೈಟ್ bankofindia.co.in ಭೇಟಿ ನೀಡುವ ಮೂಲಕ ಆನ್‌ಲೈನ್ ಅರ್ಜಿ ಸಲ್ಲಿಸ ಬಹುದು. ಸಂವಹನ ಉದ್ದೇಶಕ್ಕಾಗಿ ಸರಿಯಾದ ಇ-ಮೇಲ್ ಐಡಿ, ಮೊಬೈಲ್ ನಂಬರ್, ಐಡಿ ಪ್ರೊಫ್, ವಯಸ್ಸು, ಶೈಕ್ಷಣಿಕ ಅರ್ಹತೆ, ರೆಸೂಮ್ ಇತ್ಯಾದಿ ದಾಖಲೆಗಳನ್ನು ಅಧಿಸೂಚನೆಯಲ್ಲಿ ತಿಳಿಸಿರುವಂತೆ ಭರ್ತಿ ಮಾಡಬೇಕು.

ಅರ್ಜಿ ಶುಲ್ಕದ ವಿವರ:

ಎಸ್ಸಿ/ಎಸ್ಟಿ/ಅಂಗವಿಕಲರು 175 ರೂ., ಸಾಮಾನ್ಯ ಮತ್ತು ಇತರ ವರ್ಗದ ಅಭ್ಯರ್ಥಿಗಳು 850 ರೂ. ಅರ್ಜಿ ಶುಲ್ಕ ಆನ್‌ಲೈನ್‌ ಮೂಲಕ ಪಾವತಿಸಬೇಕು.

 

ವೇತನ ವಿವರ :

ಮುಖ್ಯ ವ್ಯವಸ್ಥಾಪಕರ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ: 1,02,300-1,20,940 ರೂ

ಹಿರಿಯ ವ್ಯವಸ್ಥಾಪಕರು ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ: 85,920-1,05,280.ರೂ

ಕಾನೂನು ಅಧಿಕಾರಿ ಮತ್ತು ವ್ಯವಸ್ಥಾಪಕ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ: 64,820-93,960 ರೂ.ವೇತನವನ್ನು ನೀಡಲಾಗುತ್ತದೆ.

 

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಕೊನೇ ದಿನ: 23.03.2025

 

CLICK HERE TO DOWNLOAD NOTIFICATION

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!