Best Revenue Officer of the Year-2024 award.
“ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡುವ ಕುರಿತು.
ಕಂದಾಯ ಇಲಾಖೆಯ ವಿವಿಧ ಸೇವೆಗಳನ್ನು ಸಾರ್ವಜನಿಕರಿಗೆ ಅತ್ಯುತ್ತಮವಾಗಿ ಒದಗಿಸಿರುವ ಕಂದಾಯ ಅಧಿಕಾರಿಗಳ ಶ್ರೇಷ್ಠ ಸೇವೆಯನ್ನು ಗುರುತಿಸಿ ಜಿಲ್ಲಾಧಿಕಾರಿಗಳಿಗೆ, ಸಹಾಯಕ ಆಯುಕ್ತರುಗಳಿಗೆ, ತಹಶೀಲ್ದಾರಗಳಿಗೆ ಹಾಗೂ ಗ್ರಾಮ ಆಡಳಿತ ಅಧಿಕಾರಿಗಳಿಗೆ ಸರ್ಕಾರವು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ಹರ್ಷಿಸುತ್ತದೆ
ಈ ಹಿನ್ನೆಲೆಯಲ್ಲಿ ದಿನಾಂಕ:27.09.2024 ರಂದು ಬೆಳಿಗ್ಗೆ 10 ಗಂಟೆಗೆ ಮಾನ್ಯ ಕಂದಾಯ ಸಚಿವರ ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ, ಕೊಠಡಿ ಸಂಖ್ಯೆ 419 ರಲ್ಲಿ ನಡೆಯಲಿರುವ ಕಂದಾಯ ಇಲಾಖೆಯ ಪ್ರಗತಿ ಪರಿಶೀಲನಾ ಸಭೆ ಹಾಗೂ ಅಭಿನಂದನಾ ಸಭೆಯಲ್ಲಿ “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024” ಪ್ರಶಸ್ತಿಯನ್ನು ನೀಡಲು ತೀರ್ಮಾನಿಸಲಾಗಿದೆ.
ಈ ಕೆಳಕಂಡ ಅಧಿಕಾರಿಗಳನ್ನು “ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ-2024 ಪ್ರಶಸ್ತಿಗೆ ಆಯ್ಕೆ ಮಾಡಿ ಆದೇಶಿಸಿದೆ.
ಕಂದಾಯ ಇಲಾಖೆಯ 2023-24 ನೇ ಸಾಲಿನ ಅತ್ಯುತ್ತಮ ಕಂದಾಯ ಅಧಿಕಾರಿಗಳ ಪಟ್ಟಿ ಇಲ್ಲಿದೆ.