BOB Assistant Jobs: ಬ್ಯಾಂಕ್ ಆಫ್ ಬರೋಡದಲ್ಲಿ 10ನೇ ತರಗತಿ ಪಾಸಾದವರಿಗೆ  ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ-2025

BOB Assistant Jobs: ಬ್ಯಾಂಕ್ ಆಫ್ ಬರೋಡದಲ್ಲಿ 10ನೇ ತರಗತಿ ಪಾಸಾದವರಿಗೆ  ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ-2025

BOB Assistant Jobs: ದೇಶದ ಪ್ರತಿಷ್ಠಿತ ಬ್ಯಾಂಕುಗಳಲ್ಲಿ ಒಂದಾದ ಬ್ಯಾಂಕ್ ಆಫ್ ಬರೋಡದಲ್ಲಿ ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

 

BOB Assistant Jobs: ಆಫ್ ಬರೋಡಾ ಕರ್ನಾಟಕ ಸೇರಿದಂತೆ ದೇಶದಾದ್ಯಂತ ತನ್ನ ವಿವಿಧ ಘಟಕಗಳಲ್ಲಿ ನೇಮಕಾತಿ ನಡೆಸುತ್ತಿದೆ. ಒಟ್ಟು 500 ಕಚೇರಿ ಸಹಾಯಕ ಹುದ್ದೆಗಳಿಗೆ ನೇಮಕಾತಿ ನಡೆಯಲಿದ್ದು, ಅರ್ಹ ಅಭ್ಯರ್ಥಿಗಳು ಮೇ 23ರ ಒಳಗೆ ಅರ್ಜಿ ಸಲ್ಲಿಸಲು ಅವಕಾಶ ನೀಡಲಾಗಿದೆ. ಒಟ್ಟು ಹುದ್ದೆಗಳಲ್ಲಿ ರಾಜ್ಯಕ್ಕೆ 31 ಹುದ್ದೆಗಳನ್ನು ಮೀಸಲು ಇಡಲಾಗಿದೆ.

ಹುದ್ದೆಗಳ ಹೆಸರು: ಕಛೇರಿ ಸಹಾಯಕ [Office Assistant]

ಒಟ್ಟು ಹುದ್ದೆಗಳ ಸಂಖ್ಯೆ:500
ಕರ್ನಾಟಕದಲ್ಲಿ ಮೀಸಲು:31 ಹುದ್ದೆಗಳು

ವಿದ್ಯಾರ್ಹತೆ:

ಮಾನ್ಯತೆ ಪಡೆದ ವಿದ್ಯಾಸಂಸ್ಥೆಗಳಿಂದ 10ನೇ ತರಗತಿ ಅಥವಾ ಮೆಟ್ರಿಕ್ಯುಲೇಷನ್ ಪಾಸಾಗಿರಬೇಕು.

ಮುಖ್ಯ ಮಾಹಿತಿ:

ಅಭ್ಯರ್ಥಿಗಳು ಯಾವ ರಾಜ್ಯಗಳ ಹುದ್ದೆಗಳಿಗೆ ಅರ್ಜಿ ಸಲ್ಲಿಸುವವರೋ ಆ ರಾಜ್ಯಗಳ ಸ್ಥಳೀಯ ಭಾಷೆಯನ್ನು ಓದಲು, ಬರೆಯಲು, ಮಾತನಾಡಲು ತಿಳಿದಿರಬೇಕು.

ವಯೋಮಿತಿ:

ಕನಿಷ್ಠ 18 ವರ್ಷ, ಗರಿಷ್ಠ 26 ವರ್ಷ ವಯೋಮಿತಿ ನಿಗದಿಪಡಿಸಲಾಗಿದೆ.

ವಯೋಮಿತಿ ಸಡಿಲಿಕೆ:

ನಿಯಮಾನುಸಾರ ಮೀಸಲಾತಿ ವ್ಯಾಪ್ತಿಗೆ ಒಳಪಡುವ ಎಸ್‌ಸಿ, ಎಸ್‌ಟಿ ಅಭ್ಯರ್ಥಿಗಳಿಗೆ ಐದು ವರ್ಷ, ಇತರೆ ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಮೂರು ವರ್ಷ ವಯೋಮಿತಿ ಸಡಿಲಿಕೆ ಇದೆ.

ಆಯ್ಕೆ ಪ್ರಕ್ರಿಯೆ:

ಆನ್‌ಲೈನ್ ಪರೀಕ್ಷೆ ಮತ್ತು ಸಂದರ್ಶನದ ಮೂಲಕ ಅಭ್ಯರ್ಥಿಗಳ ಆಯ್ಕೆ ನಡೆಸಲಾಗಿತ್ತದೆ. ಮೊದಲಿಗೆ ಆನ್‌ಲೈನ್ ಪರೀಕ್ಷೆ ನಡೆಯಲಿದ್ದು, ಇಂಗ್ಲಿಷ್ ನಾಲೆಜ್, ಜನರಲ್ ಅವೇರ್ನೆಸ್, ಎಲಿಮೆಂಟ್ರಿ ಅರಿಥ್‌ಮೆಟಿಕ್, ರೀಸನಿಂಗ್ ಸಂಬಂಧಿತ 100 ಅಂಕಗಳ 100 ಪ್ರಶ್ನೆಗಳನ್ನು ಕೇಳಲಾಗುತ್ತದೆ.

ಅರ್ಜಿ ಶುಲ್ಕದ ವಿವರ:

ಎಸ್‌ಸಿ, ಎಸ್‌ಟಿ, ವಿಶೇಷಚೇತನ, ಮಾಜಿ ಸೈನಿಕರು, ಮಹಿಳಾ ಅಭ್ಯರ್ಥಿಗಳು ಆನ್ ಲೈನ್ ಮೂಲಕ 100 ರೂ., ಉಳಿದ ಎಲ್ಲ ವರ್ಗದ ಅಭ್ಯರ್ಥಿಗಳು 600 ರೂ. ಅರ್ಜಿ ಶುಲ್ಕ ಪಾವತಿಸಬೇಕು.

ವೇತನ ವಿವರ:

ಮಾಸಿಕ ವೇತನ ₹19,500- ₹ 37,815

 

ಪರೀಕ್ಷೆ ಯಾವ ಭಾಷೆಯಲ್ಲಿ ನಡೆಯುತ್ತೆ?

ಆಯಾ ರಾಜ್ಯಗಳಲ್ಲಿ ವಿವಿಧ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದ್ದು, ಕರ್ನಾಟಕದಲ್ಲಿ ಕನ್ನಡ, ಇಂಗ್ಲಿಷ್, ಹಿಂದಿ ಹಾಗೂ ಕೊಂಕಣಿ ಭಾಷೆಗಳಲ್ಲಿ ಪರೀಕ್ಷೆ ನಡೆಯಲಿದೆ.

ಪರೀಕ್ಷಾ ಕೇಂದ್ರಗಳ ವಿವರ:

ರಾಜ್ಯದ ಧಾರವಾಡ/ಹುಬ್ಬಳ್ಳಿ, ಬೆಂಗಳೂರು, ಮಂಗಳೂರಿನಲ್ಲಿ ಪರೀಕ್ಷಾ ಕೇಂದ್ರಗಳು ಇರಲಿವೆ. ಆಯ್ಕೆಯಾದ ಅಭ್ಯರ್ಥಿಗಳಿಗೆ ಕೆಲಸಕ್ಕೆ ಸೇರಿದ ದಿನದಿಂದ ಆರು ತಿಂಗಳವರೆಗೆ ಪ್ರೊಬೆಷನರಿ ಅವಧಿ ಇರಲಿದೆ.

BOB Assistant Jobs ವಿಶೇಷ ಮಾಹಿತಿ:

ಅಲ್ಲದೆ, ಎಸ್‌ಸಿ, ಎಸ್‌ಟಿ, ಒಬಿಸಿ ವಿಶೇಷಚೇತನ ವರ್ಗದ ಅಭ್ಯರ್ಥಿಗಳಿಗೆ ಪರೀಕ್ಷಾ ಪೂರ್ವ ಆನ್‌ಲೈನ್ ತರಬೇತಿಯನ್ನು ನೀಡಲು ಬ್ಯಾಂಕ್ ಯೋಜಿಸಿದೆ. ಪರೀಕ್ಷಾ ಪೂರ್ವ ತರಬೇತಿ ಪಡೆಯಲು ಇಚ್ಛಿಸುವವರು ಅರ್ಜಿ ಸಲ್ಲಿಸುವಾಗ ಸಂಬಂಧಿತ ಕಾಲಂನಲ್ಲಿ ನಮೂದಿಸಬೇಕು.

ಪ್ರಮುಖ ದಿನಾಂಕಗಳು:

ಅರ್ಜಿ ಸಲ್ಲಿಸಲು ಮೇ 23 ಕೊನೆಯ ದಿನವಾಗಿದೆ.

ಹೆಚ್ಚಿನ ವಿವರ ಪಡೆಯಲು ಈ ಕೆಳಗಿನ ವೆಬ್ಸೈಟ್ ಗೆ ಭೇಟಿ ನೀಡಿ.

www.bankofbaroda.in

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

2 thoughts on “BOB Assistant Jobs: ಬ್ಯಾಂಕ್ ಆಫ್ ಬರೋಡದಲ್ಲಿ 10ನೇ ತರಗತಿ ಪಾಸಾದವರಿಗೆ  ಕಚೇರಿ ಸಹಾಯಕ ಹುದ್ದೆಗಳ ನೇಮಕಾತಿಗೆ ಅರ್ಜಿ-2025”

Leave a Comment

You cannot copy content of this page

error: Content is protected !!