BPL CARD: BPL ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಸದ್ಯಕ್ಕಿಲ್ಲ! ಆರೋಗ್ಯ ಸಮಸ್ಯೆಯುಳ್ಳವರಿಗೆ ಮಾತ್ರ ಕಾರ್ಡ್ ಸೌಲಭ್ಯ -2025

BPL CARD: BPL ಪಡಿತರ ಕಾರ್ಡ್ ಗೆ ಅರ್ಜಿ ಸಲ್ಲಿಕೆ ಸದ್ಯಕ್ಕಿಲ್ಲ!

BPL CARD: ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ BPL ಕಾರ್ಡ್‌ಗಳಿಗೆ ಅರ್ಜಿ ಸಲ್ಲಿಸುವ ಆನ್‌ಲೈನ್ ಪೋರ್ಟಲ್ ಅನ್ನು ಎರಡು ವರ್ಷಗಳಿಂದಲೂ ಪುನಾರಂಭಿಸಿಲ್ಲ. ಹೊಸ ಅರ್ಜಿಗೂ ಸಧ್ಯಕ್ಕೆ ಅವಕಾಶ ನೀಡಲಾಗಿಲ್ಲ! ರಾಜ್ಯಾದ್ಯಂತ ಬಿಪಿಎಲ್ ಪಡಿತರ ಚೀಟಿಗಾಗಿ ಅರ್ಜಿ ಸಲ್ಲಿಸಿದ ಸುಮಾರು 2.94 ಲಕ್ಷ ಮಂದಿ ಕಾರ್ಡ್‌ಗಾಗಿ ಕಾಯುತ್ತಿದ್ದಾರೆ. ಆದರೆ ಹೊಸ ಅರ್ಜಿದಾರರರಿಗೆ ಅವಕಾಶವಿಲ್ಲ ಎನ್ನುತ್ತಿದೆ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ.

ಈ ಮೊದಲು  ಸ್ಥಗಿತಗೊಳಿಸಿದ್ದ ಪೋರ್ಟಲ್ ಅನ್ನು ಈವರೆಗೂ ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯು ಮುಕ್ತಗೊಳಿಸಿಲ್ಲ. ಆದರೆ, ಆರೋಗ್ಯ ತುರ್ತು ಇರುವವರಿಗೆ ಹಾಗೂ ಕಾರ್ಮಿಕರಿಗೆ ಮಾತ್ರ ವೆಬ್‌ಸೈಟ್ ತೆರೆದುಕೊಳ್ಳುತ್ತದೆ. ಹೀಗೆ ಬಂದ ಅರ್ಜಿಗಳನ್ನು ಆಯಾ ಜಿಲ್ಲೆಗಳ ಉಪನಿರ್ದೇಶಕರ ಶಿಫಾರಸಿನ ಮೇರೆಗೆ ಆಹಾರ ಇಲಾಖೆದು ಆಯುಕ್ತರು ಅನುಮೋದನೆ ನೀಡಲಿದ್ದಾರೆ.

ಸದ್ಯ ಈ ಹಿಂದೆ ಅರ್ಜಿ ಸಲ್ಲಿಸಲು ಯಾವ ನಿದುಮಗಳು ಜಾರಿಯಲ್ಲಿದ್ದವೋ ಅದೇ ನಿದುಮಗಳನ್ನು ಅನುಸರಿಸಲಾಗುವುದು. ಒಂದು ವೇಳೆ ಹೊಸದಾಗಿ ಮಾರ್ಗಸೂಚಿ ಬಂದರೆ, ಸರಕಾರದ ಸೂಚನೆ ಮೇರೆಗೆ ಅವುಗಳನ್ನು ಅಳವಡಿಸಲಾಗುವುದು ಎಂಬುದು ರಾಜ್ಯ ಆಹಾರ ಮತ್ತು ನಾಗರಿಕರ ಸರಬರಾಜು ಇಲಾಖೆಯ ಅಭಿಮತವಾಗಿದೆ.

2.94 ಲಕ್ಷ ಅರ್ಜಿದಾರರಿಗೆ ಕಾರ್ಡ್ ಬರಬೇಕು!

ಚುನಾವಣೆ ನೀತಿ ಸಂಹಿತೆಗೂ ಮೊದಲು, ಅಂದರೆ 2022-23ರಲ್ಲಿ ಬಿಪಿಎಲ್ ಕಾರ್ಡ್‌ಗಾಗಿ 2.94 ಲಕ್ಷ ಅರ್ಜಿಗಳು ಬಂದಿವೆ. ಇವುಗಳ ಪರಿಶೀಲನೆ ನಡೆಯುತ್ತಿದೆ. ಕಾರು, ಸ್ವಂತ ಮನೆ, ತೆರಿಗೆ ಪಾವತಿಸುವವರನ್ನು ಹೊರತುಪಡಿಸಿ, ಅರ್ಹತೆ ಹೊಂದಿರುವವರಿಗೆ ಪಡಿತರ ಕಾರ್ಡ್ ಗಳನ್ನು ನೀಡಲಾಗುವುದು. ರಾಜ್ಯದಲ್ಲಿ ಸದ್ಯ ಬಿಪಿಎಲ್, ಅಂತ್ಯೋದಯ ಅನ್ನ ಯೋಜನೆ ಕಾರ್ಡ್‌ಗಳೂ ಸೇರಿ 1.28 ಕೋಟಿ ಕಾರ್ಡ್ಗಳಿವೆ. 4.42 ಕೋಟಿಗೂ ಅಧಿಕ ಫಲಾನುಭವಿಗಳಿದ್ದಾರೆ.

ಹೊಸ ಪಡಿತರ ಕಾರ್ಡ್ ಸದ್ಯಕ್ಕಿಲ್ಲ!
ಹೊಸ ಕಾರ್ಡ್ ಇಲ್ಲ :

ಸದ್ಯ ಹೊಸ BPL ಕಾರ್ಡ್‌ಗಳನ್ನು ನೀಡುವುದಿಲ್ಲ. ಆದರೆ ತುರ್ತು ಆರೋಗ್ಯ ಸಮಸ್ಯೆಯುಳ್ಳವರಿಗೆ ಮಾತ್ರ ಅಗತ್ಯತೆ ಪರಿಶೀಲಿಸಿ ಕಾರ್ಡ್‌ಗಳನ್ನು ನೀಡಲಾಗುವುದು ಎಂದು ರಾಜ್ಯ ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

 

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!