BRO RECURITMENT-2025
ಗಡಿ ರಸ್ತೆ ಸಂಸ್ಥೆ (BRO) ಯು ಬಹು ಕುಶಲ ಕೆಲಸಗಾರರನ್ನು ನೇಮಿಸಿಕೊಳ್ಳುತ್ತಿದೆ. ಅಡುಗೆಯವರು, ಮೇಸ್ತಿ, ಕಮ್ಮಾರ ಹಾಗೂ ಮೆಸ್‌ಗಳಲ್ಲಿ ಪರಿಚಾರಕ (ವೇಟರ್) ಆಗಿ ಕೆಲಸ ಮಾಡಲು ಇಚ್ಛಿಸುವವರು ಈ ಹುದ್ದೆಗಳಿಗೆ ಅರ್ಜಿ ಸಲ್ಲಿಸಬಹುದು.
10ನೇ ತರಗತಿ ಮತ್ತು ಐಟಿಐ ಪೂರ್ಣಗೊಳಿಸಿದ ಪುರುಷ ಅಭ್ಯರ್ಥಿಗಳು ಅರ್ಜಿ ಸಲ್ಲಿಸಲು ಅರ್ಹರಾಗಿದ್ದಾರೆ. ಆಸಕ್ತ ಮತ್ತು ಅರ್ಹ ಅಭ್ಯರ್ಥಿಗಳು ಆಫ್‌ಲೈನ್ ಮೂಲಕ ಫೆ.24ರೊಳಗೆ ಅರ್ಜಿ ಸಲ್ಲಿಸಬಹುದು. BRO ಕೇಂದ್ರ ಸರ್ಕಾರದ ರಕ್ಷಣಾ ಸಚಿವಾಲಯದ ಅಧೀನದಲ್ಲಿ ಕಾರ್ಯನಿರ್ವಹಿಸುತ್ತಿರುವ ಸಂಸ್ಥೆಯಾಗಿದೆ.
ಶೈಕ್ಷಣಿಕ ಅರ್ಹತೆ:
ಹುದ್ದೆಗೆ ಅರ್ಜಿ ಸಲ್ಲಿಸಲು ಇಚ್ಛಿಸುವ ಅಭ್ಯರ್ಥಿಗಳು ಎಸ್ ಎಸ್‌ಎಲ್‌ಸಿ ಮತ್ತು ಐಟಿಐನಲ್ಲಿ ಉತ್ತೀರ್ಣರಾಗಿರಬೇಕು.
ವಯೋಮಿತಿ :
ಕನಿಷ್ಠ 18 ರಿಂದ ಗರಿಷ್ಠ 25 ವರ್ಷದೊಳಗಿರಬೇಕು. ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ, ಎಸ್ಸಿ/ಎಸ್ಟಿ ಅಭ್ಯರ್ಥಿಗಳಿಗೆ 5 ವರ್ಷ ವಯೋಸಡಿಲಿಕೆ ಅನ್ವಯವಾಗಲಿದೆ.
ವೇತನ ಶ್ರೇಣಿ:
ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ₹19,900 – 63,200. ವೇತನ ಶ್ರೇಣಿಯನ್ನು ನಿಗದಿಪಡಿಸಲಾಗಿದೆ.
ಹುದ್ದೆಗಳ ವಿವರ:
ಅಡುಗೆಯವರು- 153
ಮೇಸ್ತ್ರಿ (ಗಾರೆಯವರು)- 172
ಕಂಬಾರ- 75
ಪರಿಚಾರಕ (ಮೆಸ್) -11
ಅರ್ಜಿ ಶುಲ್ಕ:
ಸಾಮಾನ್ಯ/ಒಬಿಸಿ/ಇಡಬ್ಲ್ಯುಎಸ್/ಮಾಜಿ ಸೈನಿಕ ಅಭ್ಯರ್ಥಿಗಳು 50ರೂ. ಅರ್ಜಿ ಶುಲ್ಕವನ್ನು ಪಾವತಿಸಬೇಕು. ಇತರ ವರ್ಗದ ಅಭ್ಯರ್ಥಿಗಳಿಗೆ ಶುಲ್ಕದಿಂದ ವಿನಾಯಿತಿ ನೀಡಲಾಗಿದೆ.
ಆಯ್ಕೆ ವಿಧಾನ:
ಅಭ್ಯರ್ಥಿಗಳನ್ನು ಲಿಖಿತ ಪರೀಕ್ಷೆ, ದೈಹಿಕ ದಕ್ಷತೆಯ ಪರೀಕ್ಷೆ ಪ್ರಾಯೋಗಿಕ ಪರೀಕ್ಷೆ, ಪ್ರಾಥಮಿಕ ವೈದ್ಯಕೀಯ ಪರೀಕ್ಷೆ ಸಂದರ್ಶನದ ಮೂಲಕ ಹುದ್ದೆಗೆ ಆಯ್ಕೆ ಮಾಡಿಕೊಳ್ಳಲಾಗುತ್ತದೆ.
ಅರ್ಜಿ ಸಲ್ಲಿಕೆ ಮಾಡುವ ವಿಧಾನ:
ಆಸಕ್ತ ಅಭ್ಯರ್ಥಿಗಳು ಬಿಆರ್‌ಒ ವೆಬ್‌ಸೈಟ್‌ನಲ್ಲಿ ಅರ್ಜಿ ನಮೂನೆ ಡೌನ್ ಲೋಡ್ ಮಾಡಿಕೊಂಡು, ಇಂಗ್ಲಿಷ್ ಅಥವಾ ಹಿಂದಿಯಲ್ಲಿ ಅರ್ಜಿ ಭರ್ತಿ ಮಾಡಬೇಕು. ಭಾವಚಿತ್ರ ಮತ್ತು ಅಗತ್ಯ ದಾಖಲೆಗಳ ಮುದ್ರಿತ ಪ್ರತಿಯನ್ನು ಸ್ವಯಂ ದೃಢೀಕರಿಸಿ ಲಗತ್ತಿಸಬೇಕು. ನಂತರ ಅರ್ಜಿಯ ಲಕೋಟೆ ಮೇಲೆ ಯಾವ ಹುದ್ದೆಗೆ ಅರ್ಜಿ ಸಲ್ಲಿಸುತ್ತಿದ್ದೇವೆ ಎಂದು ಬರೆದು GREF Centre,Dighi Camp, Pune-411015 ಈ ವಿಳಾಸಕ್ಕೆ ಆಫ್‌ಲೈನ್ ಅರ್ಜಿ ಸಲ್ಲಿಸಬೇಕು.
ಅಧಿಸೂಚನೆ ಡೌನ್ಲೋಡ್ ಮಾಡಲು- CLICK HERE
ಹೆಚ್ಚಿನ ಮಾಹಿತಿಗಾಗಿ – marvels.bro.gov.in ಸಂಪರ್ಕಿಸಿ.