Cabinet Decisions: ಇಂದು ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ದಿನಾಂಕ:11-09-2025
Cabinet Decisions: ಸಾರ್ವಜನಿಕ ಸರ್ಕಾರಿ ಕಾರ್ಯಕ್ರಮಗಳ ಆಹ್ವಾನ ಪತ್ರಿಕೆ ಮತ್ತು ವೇದಿಕೆ ಮೇಲೆ ಆಸೀನರಾಗುವ ಗಣ್ಯರ ಹೆಸರುಗಳನ್ನು ಸಂಬಂಧಪಟ್ಟ ಇಲಾಖೆಗಳ ಸಚಿವರು 9 ಅಥವಾ 9 ಅನ್ನು ಮೀರದಂತೆ, ಅನಿವಾರ್ಯ ಸಂದರ್ಭದಲ್ಲಿ 13ಕ್ಕೆ ಮೀರದಂತೆ ಆಯ್ಕೆಯ ಅವಕಾಶ ಕಲ್ಪಿಸಲು ನಿರ್ಧಾರ
▪️ಮಾಲೂರು, ಮಾಗಡಿ, ಕುಶಾಲನಗರ, ಕೊರಟಗೆರೆ, ಜಗಳೂರು, ಸವಣೂರು, ರಾಮದುರ್ಗ ಮತ್ತು ಸವದತ್ತಿ ತಾಲೂಕು ಮಟ್ಟದ ಆಸ್ಪತ್ರೆಗಳನ್ನು ಹಾಗೂ ದಾವಣಗೆರೆ ಜಿಲ್ಲಾ ಆಸ್ಪತ್ರೆ ಮತ್ತು ಮಂಗಳೂರಿನ ವೆನ್ಹಾಕ್ ಆಸ್ಪತ್ರೆಗಳ ನವೀಕರಣ ಕಾಮಗಾರಿಗಳನ್ನು ಒಟ್ಟು ₹542 ಕೋಟಿಗಳ ಅಂದಾಜು ವೆಚ್ಚದಲ್ಲಿ ಕೈಗೊಳ್ಳಲು ಅನುಮೋದನೆ
▪️₹12.25 ಕೋಟಿ ವೆಚ್ಚದಲ್ಲಿ 35 ಸಂಚಾರಿ ಆರೋಗ್ಯ ಘಟಕಗಳ ದುರಸ್ತಿ ಮತ್ತು ಹೊಸ ವೈದ್ಯಕೀಯ ಉಪಕರಣಗಳನ್ನು ಅಳವಡಿಸಿ ಸದರಿ ವಾಹನಗಳನ್ನು Connected Health Ecosystem ಘಟಕಗಳಾಗಿ ಪರಿವರ್ತಿಸಲು ನಿರ್ಧಾರ
▪️ರಾಜ್ಯಾದ್ಯಂತ “ಜಿಲ್ಲಾ ಕಾರ್ಮಿಕರ ಸೇವೆಗಳ ವಿವಿದೋದ್ದೇಶ ಸಹಕಾರ ಸಂಘ (ನಿಯಮಿತ)” ವನ್ನು ಸ್ಥಾಪಿಸಲು ನಿರ್ಧಾರ.
▪️ಬೆಂಗಳೂರಿನ ಯಲಹಂಕ ತಾಲೂಕು ಬೆಳ್ಳಹಳ್ಳಿಯಲ್ಲಿ ಮತ್ತು ಹೆಬ್ಬಾಳ ವಿಧಾನಸಭಾ ಕ್ಷೇತ್ರದ ಕೃಷಿ ಇಲಾಖೆ ಆವರಣದಲ್ಲಿ ತಲಾ ರೂ. 50 ಕೋಟಿಗಳ ಅಂದಾಜು ವೆಚ್ಚದಲ್ಲಿ ಪ್ರತ್ಯೇಕವಾಗಿ 100 ಹಾಸಿಗೆಗಳ ಸಾಮರ್ಥ್ಯದ 2 ಅತ್ಯಾಧುನಿಕ ಮತ್ತು ಸುಸಜ್ಜಿತ ಆಸ್ಪತ್ರೆ ಕಟ್ಟಡಗಳನ್ನು ನಿರ್ಮಿಸಲು ತೀರ್ಮಾನ
▪️ಮಂಡ್ಯ ಜಿಲ್ಲೆ ಶ್ರೀರಂಗಪಟ್ಟಣ ತಾಲೂಕು ವ್ಯಾಪ್ತಿಯ ಸಿಡಿಎಸ್ ನಾಲೆಯಡಿಯಲ್ಲಿ ಬರುವ ಪಿಕಪ್ ಮತ್ತು ತೂಬಿನ ನಾಲೆಗಳ ಅಭಿವೃದ್ಧಿ ಕಾಮಗಾರಿಗಳನ್ನು ರೂ.50 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
▪️₹391.82 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ಬೈರಮಂಗಲ ಕೆರೆಯ ದಡದಲ್ಲಿ 100 ಎ೦ಎಲ್ಡಿ ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಮತ್ತು 25 ಎಂಎಲ್ಡಿ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ
▪️ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ನಾಗನೂರು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹105.19 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
▪️ಹಾವೇರಿ ಜಿಲ್ಲೆ ಬಂಕಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ತೆವರಮಳ್ಳಿ ಹಳ್ಳಿ ಕೆರೆ ಸುಧಾರಣಾ ಕಾಮಗಾರಿಗಳನ್ನು ₹92.84 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
▪️ಹಾವೇರಿ ಜಿಲ್ಲೆಯ ಸವಣೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಮೋತಿ ತಲಾಬ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹153 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
▪️ ಬೆಂಗಳೂರಿನ ವಿಕ್ಟೋರಿಯಾ ಆಸ್ಪತ್ರೆ ಆವರಣದಲ್ಲಿ 1,000 ಹಾಸಿಗೆ ಸಾಮರ್ಥ್ಯದ ಹೆಚ್ಚುವರಿ ವಾರ್ಡ್ಗಳಿಗೆ ಅವಶ್ಯವಿರುವ ಉಪಕರಣಗಳು ಮತ್ತು ಪೀಠೋಪಕರಣಗಳನ್ನು ₹20 ಕೋಟಿ ವೆಚ್ಚದಲ್ಲಿ ಖರೀದಿಸಲು ಆಡಳಿತಾತ್ಮಕ ಅನುಮೋದನೆ
▪️₹398 ಕೋಟಿಗಳ ಅಂದಾಜು ಮೊತ್ತದಲ್ಲಿ ರಾಜ್ಯದ ಆಯ್ದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳ ಅತೀ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸಲು ಆಡಳಿತಾತ್ಮಕ ಅನುಮೋದನೆ
▪️ಪಿರಿಯಾಪಟ್ಟಣ ವಿಧಾನಸಭಾ ಕ್ಷೇತ್ರದ ಶ್ರೀ ಶಿಡ್ಲು ಮಲ್ಲಿಕಾರ್ಜುನ ಸ್ವಾಮಿ ದೇವಸ್ಥಾನಕ್ಕೆ ₹50 ಕೋಟಿಗಳ ಅಂದಾಜು ಮೊತ್ತದಲ್ಲಿ ರಸ್ತೆ ನಿರ್ಮಾಣ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ
▪️ಉತ್ತರ ಕನ್ನಡ ಜಿಲ್ಲೆಯ ಯಲ್ಲಾಪುರ ತಾಲೂಕಿನ ಗುಳ್ಳಾಪುರ ಗ್ರಾಮದಿಂದ ಹೆಗ್ಗಾರ ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ಮಾರ್ಗ ಮಧ್ಯದ ಗ೦ಗಾವಳಿ ನದಿಗೆ ಅಡ್ಡಲಾಗಿ ₹35 ಕೋಟಿ ಅಂದಾಜು ಮೊತ್ತದಲ್ಲಿ ಸೇತುವೆ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ.
▪️₹391.82 ಕೋಟಿ ವೆಚ್ಚದಲ್ಲಿ ಬೆಂಗಳೂರು ನಗರದ ಬೈರಮಂಗಲ ಕೆರೆಯ ದಡದಲ್ಲಿ 100 ಎ೦ಎಲ್ಡಿ ಸಾಮರ್ಥ್ಯದ ದ್ವಿತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ಮತ್ತು 25 ಎಂಎಲ್ಡಿ ಸಾಮರ್ಥ್ಯದ ತೃತೀಯ ಹಂತದ ತ್ಯಾಜ್ಯ ನೀರು ಸಂಸ್ಕರಣಾ ಘಟಕ ನಿರ್ಮಾಣ ಮಾಡಲು ಆಡಳಿತಾತ್ಮಕ ಅನುಮೋದನೆ
▪️ಹಾವೇರಿ ಜಿಲ್ಲೆಯ ಶಿಗ್ಗಾಂವ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ನಾಗನೂರು ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹105.19 ಕೋಟಿ ಅಂದಾಜು ಮೊತ್ತದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
▪️ಹಾವೇರಿ ಜಿಲ್ಲೆ ಬಂಕಾಪುರ ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ಮಾಡಲು ತೆವರಮಳ್ಳಿ ಹಳ್ಳಿ ಕೆರೆ ಸುಧಾರಣಾ ಕಾಮಗಾರಿಗಳನ್ನು ₹92.84 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ
▪️ಹಾವೇರಿ ಜಿಲ್ಲೆಯ ಸವಣೂರು ಪಟ್ಟಣಕ್ಕೆ ಕುಡಿಯುವ ನೀರು ಸರಬರಾಜು ವ್ಯವಸ್ಥೆಗಾಗಿ ಮೋತಿ ತಲಾಬ ಕೆರೆ ಅಭಿವೃದ್ಧಿ ಕಾಮಗಾರಿಗಳನ್ನು ₹153 ಕೋಟಿಗಳ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.
CLICK HERE TO DOWNLOAD