Cabinet decisions- 04-09-2025: ಇಂದು ಜರುಗಿದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು.

Cabinet decisions- 04-09-2025: ಇಂದು ಜರುಗಿದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು

Cabinet decisions- 04-09-2025: ಇಂದು ಜರುಗಿದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು ಈ ಕೆಳಗೆ ನೀಡಲಾಗಿದೆ.

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಅಧ್ಯಕ್ಷತೆಯಲ್ಲಿ ನಡೆದ ಸಚಿವ ಸಂಪುಟ ಸಭೆಯ ಪ್ರಮುಖ ನಿರ್ಣಯಗಳು. ದಿನಾಂಕ:04.09.2025

▪️ಸರ್ಕಾರಿ ಮತ್ತು ಅನುದಾನಿತ ಶಾಲೆಗಳಲ್ಲಿ 1 ರಿಂದ 10ನೇ ತರಗತಿವರೆಗೆ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳಿಗೆ ವಾರದಲ್ಲಿ 3 ದಿನ ವಿತರಣೆ ಮಾಡುತ್ತಿರುವ ರಾಗಿ ಮಾಲ್ಟ್ ಅನ್ನು ವಾರದಲ್ಲಿ 5 ದಿನ ವಿತರಣೆಗೆ ನಿರ್ಧಾರ ಮತ್ತು ಇದರ ಶೇ.25 ವೆಚ್ಚವಾದ ₹27 ಕೋಟಿಯನ್ನು ಭರಿಸಲು ತೀರ್ಮಾನ

▪️ಬೆಂಗಳೂರು ನಗರದ ವಿವಿಧ ಸ್ಥಳಗಳಲ್ಲಿ ಹೊಸದಾಗಿ 6 ತ್ಯಾಜ್ಯ ನೀರು ಸಂಸ್ಕರಣಾ ಘಟಕಗಳ ನಿರ್ಮಾಣ ಹಾಗೂ ಕಾರ್ಯಾಚರಣೆ ಮತ್ತು ನಿರ್ವಹಣೆಗೆ ತಗಲುವ ₹956.67 ಕೋಟಿ ವೆಚ್ಚದ ವಿಸ್ತ್ರತ ಯೋಜನಾ ವರದಿಗೆ ಆಡಳಿತಾತ್ಮಕ ಅನುಮೋದನೆ

▪️ಭದ್ರಾ ಮೇಲ್ದಂಡೆ ಯೋಜನೆಯ ತುಮಕೂರು ಶಾಖಾ ಕಾಲುವೆಯ ಕಾಮಗಾರಿಗಳಿಗೆ ಚಿಕ್ಕಮಗಳೂರು ಜಿಲ್ಲೆಯಲ್ಲಿ ಅಗತ್ಯವಿರುವ 271 ಎಕರೆ ಜಮೀನನ್ನು ₹77.35 ಕೋಟಿ ವೆಚ್ಚದಲ್ಲಿ ಖರೀದಿಸಲು ನಿರ್ಧಾರ

▪️ಬೇಡ್ತಿ ನದಿಯಿ೦ದ ನೀರನ್ನು ಎತ್ತಿ ಧಾರವಾಡ ಜಿಲ್ಲೆಯ ಕಲಘಟಗಿ ತಾಲೂಕಿನ 107 ಕೆರೆಗಳನ್ನು ತುಂಬಿಸುವ ₹179.50 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ

▪️ಗುಡ್ಡದಮಲ್ಲಾಪುರ ಏತ ನೀರಾವರಿ ಯೋಜನೆಯ ಮೂಲಕ ಹಾವೇರಿ ಜಿಲ್ಲೆಯ ಬ್ಯಾಡಗಿ ಮತ್ತು ಹಾನಗಲ್‌ ತಾಲೂಕಿನ 137 ಕೆರೆಗಳನ್ನು ತುಂಬಿಸುವ ₹115.60 ಕೋಟಿ ವೆಚ್ಚದ ಕಾಮಗಾರಿಗೆ ಆಡಳಿತಾತ್ಮಕ ಅನುಮೋದನೆ.

▪️ಬಸವನಬಾಗೇವಾಡಿ ಅಭಿವೃದ್ಧಿ ಪ್ರಾಧಿಕಾರ (ತಿದ್ದುಪಡಿ) ವಿಧೇಯಕ 2025ಕ್ಕೆ ಘಟನೋತ್ತರ ಅನುಮೋದನೆ

▪️ಕರ್ನಾಟಕ ಭೂ ಕಂದಾಯ (ತಿದ್ದುಪಡಿ) ವಿಧೇಯಕ 2025ಕ್ಕೆ ಘಟನೋತ್ತರ ಅನುಮೋದನೆ

▪️ರಾಯಚೂರು ಜಿಲ್ಲೆಯ ಲಿಂಗಸೂಗೂರು ತಾಲೂಕು ಆಸ್ಪತ್ರೆಯ ಆವರಣದಲ್ಲಿ 50 ಹಾಸಿಗೆಗಳ ತೀವ್ರ ನಿಗಾ ಘಟಕ ನಿರ್ಮಾಣ ಕಾಮಗಾರಿಯನ್ನು ₹24.22 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ.

▪️ವಿಜಯಪುರ ಜಿಲ್ಲೆಯ ಸಿಂದಗಿ ಪುರಸಭೆಯನ್ನು, ಬೆಳಗಾವಿ ಜಿಲ್ಲೆಯ ಸವದತ್ತಿ ಯಲ್ಲಮ್ಮ ಪುರಸಭೆಯನ್ನು ಹಾಗೂ ಬೀದ‌ರ್ ಜಿಲ್ಲೆಯ ಹೂಮ್ನಾಬಾದ್‌ ಪುರಸಭೆಯನ್ನು ನಗರಸಭೆಯಾಗಿ ಮೇಲ್ದರ್ಜೆಗೇರಿಸಲು ನಿರ್ಧಾರ

▪️ರಾಜ್ಯದ 22 ವಿಧಾನಸಭಾ ಕ್ಷೇತ್ರಗಳಲ್ಲಿ ಅಲ್ಪಸಂಖ್ಯಾತರು ವಾಸಿಸುತ್ತಿರುವ ನಗರ ಪ್ರದೇಶಗಳಲ್ಲಿನ ಅತಿ ಹಿಂದುಳಿದ ಕಾಲೋನಿಗಳನ್ನು ಮಾದರಿ ಕಾಲೋನಿಗಳಾಗಿ ಅಭಿವೃದ್ಧಿಪಡಿಸಲು ಕ398 ಕೋಟಿ ಅಂದಾಜು ವೆಚ್ಚದಲ್ಲಿ ಕಾಮಗಾರಿ ಕೈಗೆತ್ತಿಕೊಳ್ಳಲು ಆಡಳಿತಾತ್ಮಕ ಅನುಮೋದನೆ

▪️ಬೆಂಗಳೂರು ನಗರದಲ್ಲಿ ಧಾರ್ಮಿಕ ದತ್ತಿ ಇಲಾಖೆಯ ಸ್ವಂತ ಕಟ್ಟಡ “ಧಾರ್ಮಿಕ ಸೌಧ’ವನ್ನು ₹27.70 ಕೋಟಿ ಅಂದಾಜು ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ.

▪️ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ₹100 ಕೋಟಿ ವೆಚ್ಚದಲ್ಲಿ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆ ಸ್ಥಾಪನೆಗೆ ಆಡಳಿತಾತ್ಮಕ ಅನುಮೋದನೆ

▪️ಪರಿಶಿಷ್ಟ ಪಂಗಡದ ಮೆಟ್ರಿಕ್ ನಂತರದ ನೂತನ 20 ವಿದ್ಯಾರ್ಥಿನಿಲಯಗಳನ್ನು ರಾಜ್ಯದ 14 ಜಿಲ್ಲೆಗಳಲ್ಲಿ ಒಟ್ಟು ₹15.45 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ನಿರ್ಧಾರ

▪️ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನಲ್ಲಿ ನೂತನ ಸರ್ಕಾರಿ ಉಪಕರಣಾಗಾರ ಮತ್ತು ತರಬೇತಿ ಕೇಂದ್ರದ ಕಟ್ಟಡ ನಿರ್ಮಾಣ ಹಾಗೂ ಮೂಲಸೌಕರ್ಯ ಅಭಿವೃದ್ಧಿ ಕಾಮಗಾರಿಗಳನ್ನು ₹73.75 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

▪️817 ನಗರ ಆರೋಗ್ಯ ಮತ್ತು ಕ್ಷೇಮ ಕೇಂದ್ರ – ನಮ್ಮ ಕ್ಲಿನಿಕ್‌ಗಳಿಗೆ ರೂ.78.43 ಕೋಟಿ ವೆಚ್ಚದಲ್ಲಿ ಅವಶ್ಯವಿರುವ ಔಷಧ ಖರೀದಿ ಮತ್ತು ಸರಬರಾಜು ಮಾಡಲು ಆಡಳಿತಾತ್ಮಕ ಅನುಮೋದನೆ.

 

ಮತ್ತಷ್ಟು ಮಾಹಿತಿಗಾಗಿ – CLICK HERE

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

error: Content is protected !!