Cabinet meeting-2025: ಇಂದು ತೆಗೆದುಕೊಳ್ಳಲಾದ ಪ್ರಮುಖ ನಿರ್ಣಯಗಳ ಸಂಪೂರ್ಣ ವಿವರ.

Cabinet meeting-2025: ಇಂದು ತೆಗೆದುಕೊಳ್ಳಲಾದ ಪ್ರಮುಖ ನಿರ್ಣಯಗಳ ಸಂಪೂರ್ಣ ವಿವರ ಈ ಕೆಳಗೆ ನೀಡಲಾಗಿದೆ.

Cabinet Meeting-2025: ಕೊಪ್ಪಳ ಜಿಲ್ಲೆಯ ಯಲಬುರ್ಗಾ ತಾಲೂಕಿನ ಯಡೋಣಿಯಲ್ಲಿ ಮಹರ್ಷಿ ವಾಲ್ಮೀಕಿ ಆದಿವಾಸಿ ಬುಡಕಟ್ಟು ವಸತಿ ಶಾಲೆಗೆ ₹30 ಕೋಟಿ ವೆಚ್ಚದಲ್ಲಿ ಶಾಲಾ ಸಂಕೀರ್ಣ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ

▪️ರಾಜ್ಯದಾದ್ಯಂತ 334 ಆಯುಷ್ಮಾನ್ ಆರೋಗ್ಯ ಮಂದಿರಗಳನ್ನು ₹217 ಕೋಟಿ ವೆಚ್ಚದಲ್ಲಿ ನಿರ್ಮಿಸಲು ತೀರ್ಮಾನ

▪️ರಾಜ್ಯದ 22 ನಗರ ಪ್ರಾಥಮಿಕ ಆರೋಗ್ಯ ಕೇಂದ್ರಗಳನ್ನು ₹22 ಕೋಟಿ ವೆಚ್ಚದಲ್ಲಿ ನಿರ್ಮಿಸಲು ಆಡಳಿತಾತ್ಮಕ ಅನುಮೋದನೆ

▪️25 ಪ್ರಾಥಮಿಕ ಆರೋಗ್ಯ ಕೇಂದ್ರಗಳ ನಿರ್ಮಾಣ ಕಾಮಗಾರಿಯನ್ನು ₹80 ಕೋಟಿ ವೆಚ್ಚದಲ್ಲಿ ಕೈಗೊಳ್ಳಲು ಆಡಳಿತಾತ್ಮಕ ಅನುಮೋದನೆ

▪️ಹಾಸನ ಜಿಲ್ಲೆಯ ಅರಸೀಕೆರೆ ತಾಲೂಕಿನ ಬಾಣಾವರ ಹಾಗೂ ಗಂಡಸಿಯ ಜನವಸತಿಗಳಿಗೆ ಬಹುಗ್ರಾಮ ಕುಡಿಯುವ ನೀರಿನ ಯೋಜನೆಯನ್ನು ₹73.22 ಕೋಟಿ ವೆಚ್ಚದಲ್ಲಿ ಅನುಷ್ಠಾನಗೊಳಿಸಲು ಆಡಳಿತಾತ್ಮಕ ಅನುಮೋದನೆ

▪️ಕಲಬುರಗಿ, ಗದಗ, ದಾವಣಗೆರೆ, ಮಂಗಳೂರು, ಬೆಂಗಳೂರು ಕೆಂಗೇರಿ ಸಮೀಪದ ಭೀಮನಕುಪ್ಪೆ ಮತ್ತು ಮೈಸೂರಿನಲ್ಲಿ ಅತ್ಯಾಧುನಿಕ ಕೌಶಲ್ಯ ಪ್ರಯೋಗಾಲಯಗಳನ್ನು ₹452.89 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಅನುಮೋದನೆ

▪️ಕೊಪ್ಪಳ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಅಧೀನದಲ್ಲಿ ಜಿಲ್ಲಾಸ್ಪತ್ರೆ ಆವರಣದಲ್ಲಿ ತೀವ್ರ ನಿಗಾ ಘಟಕವನ್ನು ₹28.69 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ

▪️ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆಯಡಿ ಕಾರ್ಯನಿರ್ವಹಿಸುತ್ತಿರುವ 19 ಮೊರಾರ್ಜಿ ದೇಸಾಯಿ ವಸತಿ ಶಾಲೆಗಳಿಗೆ ₹304 ಕೋಟಿ ವೆಚ್ಚದಲ್ಲಿ ಸ್ವಂತ ಕಟ್ಟಡ ನಿರ್ಮಾಣಕ್ಕೆ ಆಡಳಿತಾತ್ಮಕ ಅನುಮೋದನೆ

▪️ಹೆಬ್ಬಾಳದ ಪಶು ಆರೋಗ್ಯ ಮತ್ತು ಜೈವಿಕ ಸಂಸ್ಥೆ ಆವರಣದಲ್ಲಿ ಕುರಿ ಮತ್ತು ಮೇಕೆಗಳ ನೀಲಿ ನಾಲಗೆ ರೋಗ ಹಾಗೂ ಇನ್ನಿತರೆ ರೋಗಗಳಿಗೆ ಲಸಿಕೆ ತಯಾರಿಸಲು ಅತ್ಯಾಧುನಿಕ ಲಸಿಕಾ ತಯಾರಿಕಾ ಪ್ರಯೋಗಾಲಯವನ್ನು ₹27 ಕೋಟಿ ವೆಚ್ಚದಲ್ಲಿ ಸ್ಥಾಪಿಸಲು ಆಡಳಿತಾತ್ಮಕ ಅನುಮೋದನೆ

▪️ಭಕ್ತರ ಹಳ್ಳಿ ಮತ್ತು ಕುಣಿಗಲ್ ತಾಲೂಕಿನ ಇತರೆ 21 ಕೆರೆಗಳನ್ನು ತುಂಬಿಸುವ ₹34 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

▪️ಹೇಮಾವತಿ ನದಿಯಿಂದ ನೀರನ್ನು ಎತ್ತಿ ಮಂಡ್ಯ ಜಿಲ್ಲೆಯ ಕೆ.ಆ‌ರ್.ಪೇಟೆ ಮತ್ತು ನಾಗಮಂಗಲ ತಾಲೂಕು ಹಾಗೂ ಹಾಸನ ಜಿಲ್ಲೆಯ ಚನ್ನರಾಯಪಟ್ಟಣ ತಾಲೂಕುಗಳ ವಿವಿಧ ಕೆರೆಗಳನ್ನು ತು೦ಬಿಸುವ ₹67 ಕೋಟಿ ವೆಚ್ಚದ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

▪️ವಿಜಯಪುರ ಜಿಲ್ಲೆಯ ಇಂಡಿ ತಾಲೂಕಿನ ಚಡಚಣ ಮತ್ತು ಸುತ್ತಮುತ್ತಲಿನ ಗ್ರಾಮಗಳ 9,200 ಹೆಕ್ಟೇ‌ರ್ ಪ್ರದೇಶಕ್ಕೆ ನೀರಾವರಿ ಹಾಗೂ ಕುಡಿಯುವ ನೀರಿನ ಸೌಲಭ್ಯ ಕಲ್ಪಿಸಲು ರೂಪಿಸಲಾದ ಚಡಚಣ ಏತನೀರಾವರಿ ಯೋಜನೆಯ ₹485 ಕೋಟಿ ಪರಿಷ್ಕೃತ ಅಂದಾಜಿಗೆ ಆಡಳಿತಾತ್ಮಕ ಅನುಮೋದನೆ

▪️ಚಳ್ಳಕೆರೆ ನಗರಕ್ಕೆ ₹198 ಕೋಟಿ ವೆಚ್ಚದಲ್ಲಿ ಒಳಚರಂಡಿ ವ್ಯವಸ್ಥೆಯನ್ನು ಕಲ್ಪಿಸುವ ಯೋಜನೆಗೆ ಆಡಳಿತಾತ್ಮಕ ಅನುಮೋದನೆ

▪️ಬಯಲು ಸೀಮೆ ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025

▪️ಮಲೆನಾಡು ಪ್ರದೇಶಾಭಿವೃದ್ಧಿ ಮಂಡಳಿ (ತಿದ್ದುಪಡಿ) ವಿಧೇಯಕ – 2025

▪️ಕರ್ನಾಟಕ ಹಿಂದು ಧಾರ್ಮಿಕ ಸಂಸ್ಥೆಗಳು ಮತ್ತು ಧರ್ಮಾದಾಯ ದತ್ತಿಗಳ (ತಿದ್ದುಪಡಿ) ವಿಧೇಯಕ – 2025

▪️ಶ್ರೀ ಚಾಮು೦ಡೇಶ್ವರಿ ಕ್ಷೇತ್ರಾಭಿವೃದ್ಧಿ ಪ್ರಾಧಿಕಾರ ಮತ್ತು ಇತರೆ ಕಾನೂನುಗಳ (ತಿದ್ದುಪಡಿ) ವಿಧೇಯಕ – 2025

▪️ಕರ್ನಾಟಕ ಒಳನಾಡು ನೌಕೆ ನಿಯಮಗಳು – 2025

▪️ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ (ತಿದ್ದುಪಡಿ) ವಿಧೇಯಕ – 2025

▪️ಕರ್ನಾಟಕ ಸಾಮಾಜಿಕ ಬಹಿಷ್ಕಾರ (ತಡೆಗಟ್ಟುವಿಕೆ, ನಿಷೇಧ ಮತ್ತು ಪರಿಹಾರ) ವಿಧೇಯಕ – 2025

▪️ಸಾಮರಸ್ಯದ ಸಮಾಜ ನಿರ್ಮಾಣದತ್ತ ದೃಢ ಹೆಜ್ಜೆ

ಕರ್ನಾಟಕ ದ್ವೇಷ ಭಾಷಣ ಮತ್ತು ದ್ವೇಷ ಅಪರಾಧಗಳ (ಪ್ರತಿಬಂಧಕ) ವಿಧೇಯಕ – 2025 ಅನ್ನು ವಿಧಾನಮಂಡಲ ಉಭಯ ಸದನಗಳಲ್ಲಿ ಮಂಡಿಸಲು ಅನುಮೋದನೆ

Cabinet meeting-2025

CLICK HERE TO DOWNLOAD

ಸರ್ಕಾರಿ ಯೋಜನೆಗಳು, ಸರ್ಕಾರಿ ಉದ್ಯೋಗಗಳು, ಖಾಸಗಿ ಕಂಪನಿ ಉದ್ಯೋಗಗಳ ಬಗ್ಗೆ ದೈನಂದಿನ ಮಾಹಿತಿಯನ್ನು ಪಡೆಯಲು ನಮ್ಮ ವಾಟ್ಸಾಪ್ ಗ್ರೂಪ್ ಮತ್ತು ಟೆಲಿಗ್ರಾಮ್ ಚಾನೆಲ್‌ಗೆ ಸೇರಿ.
WhatsApp Group Join Now
Telegram Group Join Now

Leave a Comment

You cannot copy content of this page

error: Content is protected !!